ಕೇರಳದಲ್ಲಿ ಸರಣಿ ಸ್ಫೋಟ: ಕರಾವಳಿ, ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ - ಗೃಹ ಸಚಿವ ಪರಮೇಶ್ವರ್
ಮಂಗಳೂರು: ಕೇರಳದ ಕೊಚ್ಚಿಯ ಕಲಮಸ್ಸೆರಿ ಕನ್ವೆನ್ಷನ್ ಸೆಂಟರ್‌ನಲ್ಲಿ ಭಾನುವಾರ ಸರಣಿ ಸ್ಫೋಟ ಸಂಭವಿಸಿದ್ದು, ಸ್ಫೋಟದಲ್ಲಿ ಓರ್ವ ಸಾವನ್ನಪ್ಪಿದ್ದು, 37 ಮಂದಿ ಗಾಯಗೊಂಡಿದ್ದಾರೆ. ಎನ್ಐಎ ಪ್ರಕರಣದ ತನಿಖೆ ನಡೆಸುತ್ತಿದೆ.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ಕರಾವಳಿ ಭಾಗ ಮತ್ತು ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ತೀವ್ರ ನಿಗಾ ವಹಿಸಲಾಗಿದೆ. ಕರ್ನಾಟಕದಲ್ಲಿ ಇಂತಹ ಘಟನೆ ನಡೆಯಲು ಅವಕಾಶ ನೀಡಲ್ಲ ಎಂದಿದ್ದಾರೆ.
ತೀವ್ರ ನಿಗಾ ಇರಿಸುವಂತೆ ಗುಪ್ತಚರ ಇಲಾಖೆಗೆ ಸೂಚಿಸಲಾಗಿದೆ. ಕೆಲ ಸಂಘಟನೆ ಸಕ್ರಿಯ ಆಗಬಹುದು ಅಥವಾ ಆಗದೇ ಇರಬಹುದು. ಎಲ್ಲ ಎಸ್‌ಪಿಗಳಿಗೆ ಸೂಚನೆ ನೀಡಲಾಗಿದೆ. ವ್ಯಕ್ತಿ ಹಾಗೂ ಸಂಘಟನೆ ಮೇಲೆ ಅನುಮಾನ ಬಂದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಇನ್ನು ತಮ್ಮ ಮನೆಯಲ್ಲಿ ನಡೆದ ಡಿನ್ನರ್ ಪಾರ್ಟಿ ಬಗ್ಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ಮನೆಯಲ್ಲಿ ಊಟ ಮಾಡಿದ್ರೆ ವಿಶೇಷ ಅರ್ಥ ಯಾಕೆ ಕಲ್ಪಿಸುತ್ತೀರಿ? ಸಿಎಂ ಸಿದ್ದರಾಮಯ್ಯ ಜೊತೆ ಊಟ ಮಾಡಿದ್ದು ಬಿಟ್ಟರೆ ಬೇರೆ ಯಾವುದೇ ವಿಷಯ ಚರ್ಚೆ ಆಗಿಲ್ಲ ಎಂದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ