ಕರ್ನಾಟಕಕ್ಕೆ ಮತ್ತೆ ಸಂಕಷ್ಟ: ತಮಿಳುನಾಡಿಗೆ ನಿತ್ಯ 2,600 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ CWRC ಸೂಚನೆ

ಕಾವೇರಿ ನೀರು ನಿಯಂತ್ರಣ ಸಮಿತಿ (CWRC)  ಮತ್ತೆ ತಮಿಳುನಾಡಿಗೆ ನಿತ್ಯ 2,600 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ ಇಂದು ಸೂಚನೆ ನೀಡಿದೆ. 
ಕೆಆರ್‌ಎಸ್ ಅಣೆಕಟ್ಟೆ
ಕೆಆರ್‌ಎಸ್ ಅಣೆಕಟ್ಟೆ

ನವದೆಹಲಿ: ಕಾವೇರಿ ನೀರು ನಿಯಂತ್ರಣ ಸಮಿತಿ (CWRC)  ಮತ್ತೆ ತಮಿಳುನಾಡಿಗೆ ನಿತ್ಯ 2,600 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ ಇಂದು ಸೂಚನೆ ನೀಡಿದೆ. 

ಇಂದು ದೆಹಲಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿಯ ಸಭೆಯಲ್ಲಿ ಈ ಸೂಚನೆ ನೀಡಲಾಗಿದೆ. ಮುಂದಿನ 15 ದಿನಗಳ ಕಾಲ 2,600 ಕ್ಯೂಸೆಕ್​ ನೀರು ಹರಿಸುವಂತೆ ಸೂಚನೆ ನೀಡಿದೆ. 

ಎಸಿಎಸ್ ರಾಕೇಶ್ ಸಿಂಗ್ ಅವರು ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ಕರ್ನಾಟಕದ ಪರ ಭಾಗವಹಿಸಿ ವಾದ ಮಂಡಿಸಿದರು. ಆದರೆ ಸಮಿತಿ ಮುಂದಿನ 15 ದಿನಗಳ ಕಾಲ ನೀರು ಹರಿಸುವಂತೆ ಆದೇಶಿಸಿದೆ. 

ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕಾವೇರಿ ಜಲಾನಯನ ಪ್ರದೇಶಗಳಾದ ಮೈಸೂರು, ಮಂಡ್ಯ ಮತ್ತಿತರ ಕಡೆಗಳಲ್ಲಿ ರೈತರು ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ, ಧರಣಿ ನಡೆಸುತ್ತಿವೆ. ಆದರೂ ತಮಿಳುನಾಡಿಗೆ ನೀರು ಹರಿಯುವುದು ನಿಂತಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com