ನಾಡಧ್ವಜಕ್ಕೆ ದೊರೆಯದ ಅನುಮತಿ: ಕೇಂದ್ರದಿಂದ ಪ್ರಾದೇಶಿಕ ಅಸ್ಮಿತೆಗೆ ಪ್ರಹಾರ- ಸಿಎಂ ಸಿದ್ದರಾಮಯ್ಯ ಆರೋಪ

ರಾಜ್ಯದಿಂದ ಅನುಮೋದನೆಗೊಂಡಿದ್ದ ಕನ್ನಡ ನಾಡಧ್ವಜವನ್ನು ಕೇಂದ್ರ ಸರ್ಕಾರ ತಿರಸ್ಕರಿಸುವ ಮೂಲಕ ಪ್ರಾದೇಶಿಕ ಅಸ್ಮಿತೆಗೆ ಪ್ರಹಾರ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ನಾಡಧ್ವಜದೊಂದಿಗೆ ಸಿಎಂ ಸಿದ್ದರಾಮಯ್ಯ
ನಾಡಧ್ವಜದೊಂದಿಗೆ ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: ರಾಜ್ಯದಿಂದ ಅನುಮೋದನೆಗೊಂಡಿದ್ದ ಕನ್ನಡ ನಾಡಧ್ವಜವನ್ನು ಕೇಂದ್ರ ಸರ್ಕಾರ ತಿರಸ್ಕರಿಸುವ ಮೂಲಕ ಪ್ರಾದೇಶಿಕ ಅಸ್ಮಿತೆಗೆ ಪ್ರಹಾರ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉತ್ತರ ಬಯಸಿರುವ ಸಿದ್ದರಾಮಯ್ಯ, ಕನ್ನಡಕ್ಕೊಂದು ನಾಡಗೀತೆಯಂತೆ ನಾಡಧ್ವಜ ಇರಬೇಕೆಂಬುದು ಆರೂವರೆ ಕೋಟಿ ಕನ್ನಡಿಗರ ಒಕ್ಕೊರಲ ಒತ್ತಾಯ. ಕನ್ನಡಿಗರ ಎದೆಯ ದನಿಗೆ ಓಗೊಟ್ಟು ನಾಡದ್ವಜವೊಂದನ್ನು ವಿನ್ಯಾಸಗೊಳಿಸಿ, ಮನ್ನಣೆಗಾಗಿ ಐದು ವರ್ಷಗಳ ಹಿಂದೆಯೇ ನಾವು ಕೇಂದ್ರ ಸರ್ಕಾರಕ್ಕೆ ಕಳಿಸಿದ್ದೆವು. ಆದರೆ ನರೇಂದ್ರ ಮೋದಿ  ನೇತೃತ್ವದ ಕೇಂದ್ರ ಸರ್ಕಾರ ಈ ಬೇಡಿಕೆಯನ್ನು ತಿರಸ್ಕರಿಸಿ ಕನ್ನಡ-ಕನ್ನಡಿಗ-ಕರ್ನಾಟಕಕ್ಕೆ ಅನ್ಯಾಯ ಎಸಗಿದೆ ಎಂದು ದೂರಿದ್ದಾರೆ. 

ರಾಜ್ಯಗಳು ತಮ್ಮದೇ ಧ್ವಜ ಹೊಂದಲು ಸಂವಿಧಾನ ಇಲ್ಲವೇ ಕಾನೂನಿನಲ್ಲಿ ಯಾವ ಅಡ್ಡಿಯೂ ಇಲ್ಲ. ನಾವು ನಮಗೊಂದು ನಾಡಗೀತೆಯನ್ನು ಒಪ್ಪಿಕೊಂಡಿಲ್ಲವೇ? ಇದರಿಂದ ರಾಷ್ಟ್ರಗೀತೆಗೆ ಅವಮಾನ ಮಾಡಿದಂತಾಗುವುದೇ? ರಾಷ್ಟ್ರಧ್ವಜದ ಕೆಳಗೆ ಬೇರೆ ಧ್ವಜಗಳನ್ನು ಹಾರಿಸಬಹುದೆಂದು ರಾಷ್ಟ್ರಧ‍್ವಜ ಸಂಹಿತೆಯೇ ಹೇಳಿದೆ. ಹೀಗಿರುವಾಗ  ಕನ್ನಡಿಗರ ಬಗ್ಗೆ ನಿಮಗೆ ಯಾಕೆ ತಾತ್ಸಾರ? ಎಂದು ಪ್ರಶ್ನಿಸಿದ್ದಾರೆ. 

ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ?  ಇದು ನನ್ನ ಪ್ರಶ್ನೆ ಮಾತ್ರವಲ್ಲ, ನಾಡಿನ ಆರೂವರೆ ಕೋಟಿ ಸ್ವಾಭಿಮಾನಿ ಕನ್ನಡಿಗರ ಪ್ರಶ್ನೆಯಾಗಿದೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com