‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗಿದ್ದಕ್ಕೆ ಬುರ್ಖಾಧಾರಿ ಯುವತಿ, ಸ್ನೇಹಿತನಿಗೆ ಬೆದರಿಕೆ ಹಾಕಿದ್ದ ವ್ಯಕ್ತಿ ಬಂಧನ

‘ಜೈ ಶ್ರೀ ರಾಮ್’ ಘೋಷಣೆ ಕೂಗಿದ್ದಕ್ಕಾಗಿ ಬುರ್ಖಾಧಾರಿ ಯುವತಿ ಮತ್ತು ಆಕೆಯ ಸ್ನೇಹಿತನಿಗೆ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಆಟೋ ಚಾಲಕ ನಯಾಜ್ ಖಾನ್ ಎಂದು ಗುರುತಿಸಲಾಗಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ‘ಜೈ ಶ್ರೀ ರಾಮ್’ ಘೋಷಣೆ ಕೂಗಿದ್ದಕ್ಕಾಗಿ ಬುರ್ಖಾಧಾರಿ ಯುವತಿ ಮತ್ತು ಆಕೆಯ ಸ್ನೇಹಿತನಿಗೆ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಆಟೋ ಚಾಲಕ ನಯಾಜ್ ಖಾನ್ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಕೋಣನಕುಂಟೆ ಪ್ರದೇಶದಲ್ಲಿ ಪೊಲೀಸರು ಮತ್ತು ಫ್ಯಾಕ್ಟ್ ಚೆಕ್ ವಿಭಾಗವು ಆರೋಪಿಯನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ನಯಾಜ್ ಖಾನ್ ವಿರುದ್ಧ ಈ ಮೊದಲು ಯಾವುದೇ ಪ್ರಕರಣಗಳಿಲ್ಲ ಮತ್ತು ಆತ ಸಾಮಾಜಿಕ ಜಾಲತಾಣಗಳಲ್ಲಿ ತುಂಬಾ ಸಕ್ರಿಯರಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ವಿಡಿಯೋ ನೋಡಿ ಕೋಪಗೊಂಡು ಕ್ಷಣಾರ್ಧದಲ್ಲಿ ಪ್ರತಿಕ್ರಿಯಿಸಿದ್ದಾಗಿ ಪೊಲೀಸರಿಗೆ ಹೇಳಿಕೆ ನೀಡಿದ್ದು, ಈ ಸಂಬಂಧ ತಲಘಟ್ಟಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚೆಗೆ ‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗಿದ್ದಕ್ಕಾಗಿ ಬುರ್ಖಾಧಾರಿ ಯುವತಿ ಹಾಗೂ ಮುಸ್ಲಿಂ ಟೋಪಿ ಧರಿಸಿದ್ದ ಆಕೆಯ ಸ್ನೇಹಿತನಿಗೆ ಬೆದರಿಕೆ ಹಾಕಿರುವ ಆರೋಪಿ ವಿರುದ್ಧ ಬೆಂಗಳೂರು ಪೊಲೀಸರು ಕ್ರಮ ಕೈಗೊಳ್ಳುವಂತೆ ಒತ್ತಾಯಗಳು ಕೇಳಿಬಂದಿದ್ದವು.

ಬುರ್ಖಾ ಧರಿಸಿದ ಯುವತಿ ಮತ್ತು ಮುಸ್ಲಿಂ ಟೋಪಿ ಧರಿಸಿದ್ದ ಯುವಕ 'ಜೈ ಶ್ರೀ ರಾಮ್' ಎಂದು ಘೋಷಣೆ ಕೂಗುತ್ತಿರುವ ವಿಡಿಯೋ ವೈರಲ್ ಆದ ನಂತರ, ಆರೋಪಿ ಸಾಮಾಜಿಕ ಮಾಧ್ಯಮದಲ್ಲಿ ಬುರ್ಖಾ ಮತ್ತು ಮುಸ್ಲಿಂ ಟೋಪಿ ಧರಿಸಿ 'ಜೈ ಶ್ರೀ ರಾಮ್' ಎಂದು ಕೂಗಲು ಧೈರ್ಯ ಮಾಡಿದರೆ, ಅವರನ್ನು 'ತುಂಡು ತುಂಡಾಗಿ ಕತ್ತರಿಸುತ್ತೇವೆ' ಎಂದು ಬೆದರಿಕೆ ಹಾಕಿದ್ದನು.

ಮೊದಲು ಬುರ್ಖಾ ಮತ್ತು ತಲೆಗೆ ಧರಿಸಿರುವ ಟೋಪಿಯನ್ನು ತೆಗೆಯಿರಿ. ನಂತರ ಏನು ಬೇಕಾದರೂ ಹೇಳಿ ಎಂದು ಹೇಳುತ್ತಿರುವುದು ವಿಡಿಯೋದಲ್ಲಿ ಕೇಳಿಬರುತ್ತದೆ.

'ದಿ ರೈಟ್ ವಿಂಗ್ ಗೈ' ಎಂಬ ಹೆಸರಿನ ಸಾಮಾಜಿಕ ಮಾಧ್ಯಮ ಬಳಕೆದಾರರೊಬ್ಬರು ಬೆಂಗಳೂರು ಪೊಲೀಸರನ್ನು ಟ್ಯಾಗ್ ಮಾಡಿ, ಜೀವ ಬೆದರಿಕೆಯ ವಿಡಿಯೋವನ್ನು ಪೋಸ್ಟ್ ಮಾಡಿದರು ಮತ್ತು ಕ್ರಮಕ್ಕೆ ಒತ್ತಾಯಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com