‘ಜೈ ಶ್ರೀ ರಾಮ್’ ಎಂದ ಬುರ್ಖಾಧಾರಿ ಯುವತಿ, ಆಕೆಯ ಸ್ನೇಹಿತನಿಗೆ ಬೆದರಿಕೆ ಪ್ರಕರಣ; ವ್ಯಕ್ತಿಯ ಬಂಧನ

ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗಿದ್ದಕ್ಕಾಗಿ ಬುರ್ಖಾ ಧರಿಸಿದ್ದ ಯುವತಿ ಹಾಗೂ ಆಕೆಯ ಸ್ನೇಹಿತನಿಗೆ ಜೀವ ಬೆದರಿಕೆ ಹಾಕಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ನಯಾಜ್ ಖಾನ್
ಆರೋಪಿ ನಯಾಜ್ ಖಾನ್

ಬೆಂಗಳೂರು: ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗಿದ್ದಕ್ಕಾಗಿ ಬುರ್ಖಾ ಧರಿಸಿದ್ದ ಯುವತಿ ಹಾಗೂ ಆಕೆಯ ಸ್ನೇಹಿತನಿಗೆ ಜೀವ ಬೆದರಿಕೆ ಹಾಕಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಆಟೋ ಚಾಲಕ ನಯಾಜ್ ಖಾನ್ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಕೋಣನಕುಂಟೆ ಪ್ರದೇಶದಲ್ಲಿ ಆರೋಪಿಯನ್ನು ಪತ್ತೆ ಹಚ್ಚಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ನಯಾಜ್ ಖಾನ್ ವಿರುದ್ಧ ಯಾವುದೇ ಪ್ರಕರಣಗಳಿಲ್ಲ, ಅವರು ಸಾಮಾಜಿಕ ಜಾಲತಾಣಗಳಲ್ಲಿ ತುಂಬಾ ಸಕ್ರಿಯರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ವೀಡಿಯೋ ನೋಡಿ ಕೋಪಗೊಂಡು ಕ್ಷಣಾರ್ಧದಲ್ಲಿ ಆ ರೀತಿ ಪ್ರತಿಕ್ರಿಯಿಸಿರುವುದಾಗಿ ಆತ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ. ಈ ಸಂಬಂಧ ತಲಘಟ್ಟಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚೆಗೆ ‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗಿದ್ದಕ್ಕಾಗಿ ಬುರ್ಖಾಧಾರಿ ಯುವತಿ ಹಾಗೂ ಸ್ಕಲ್ ಕ್ಯಾಪ್ ಧರಿಸಿದ್ದ ಯುವಕನಿಗೆ ಬೆದರಿಕೆ ಹಾಕಿದ್ದ ಆರೋಪಿ ವಿರುದ್ಧ  ಕ್ರಮ ಕೈಗೊಳ್ಳುವಂತೆ ಬೆಂಗಳೂರು ಪೊಲೀಸರನ್ನು ಒತ್ತಾಯಿಸಲಾಗಿತ್ತು. 'ಜೈ ಶ್ರೀ ರಾಮ್' ಎಂದು ಘೋಷಣೆ ಕೂಗುತ್ತಿರುವ ವಿಡಿಯೋ ವೈರಲ್ ಆದ ನಂತರ ಅವರನ್ನು "ತುಂಡುಗಳಾಗಿ ಕತ್ತರಿಸುತ್ತೇವೆ" ಎಂದು ಆರೋಪಿ ಸಾಮಾಜಿಕ ಮಾಧ್ಯಮದಲ್ಲಿ  ಬೆದರಿಕೆ ಹಾಕಿದ್ದ.

ಬುರ್ಖಾ ಮತ್ತು ಟೋಪಿಯನ್ನು ತೆಗೆದು ನಂತರ ಏನು ಬೇಕಾದರೂ ಹೇಳಿ ಎಂದು ಆರೋಪಿ ಹೇಳುತ್ತಿರುವುದು ವಿಡಿಯೋದಲ್ಲಿದೆ.  'ದಿ ರೈಟ್ ವಿಂಗ್ ಗೈ' ಎಂಬ ಹೆಸರಿನ ಸಾಮಾಜಿಕ ಮಾಧ್ಯಮ ಬಳಕೆದಾರರು ಈ ವಿಡಿಯೋವನ್ನು ಬೆಂಗಳೂರು ಪೊಲೀಸರಿಗೆ ಟ್ಯಾಗ್ ಮಾಡುವ ಮೂಲಕ ಆರೋಪಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com