ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆಗೆ ರೈಲ್ವೆ ಇಲಾಖೆಯಿಂದ ಹೊಸ ಪ್ರಸ್ತಾವನೆ

ರಾಷ್ಟ್ರೀಯ ವನ್ಯಜೀವಿ ಮಂಡಳಿ ರಚಿಸಿರುವ ಸಮಿತಿಯ ಶಿಫಾರಸಿನಂತೆ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆಗೆ ಪರಿಷ್ಕೃತ ಪ್ರಸ್ತಾವನೆ ಸಲ್ಲಿಸುವುದಾಗಿ ರೈಲ್ವೆ ಸಚಿವಾಲಯ ಕರ್ನಾಟಕ ಹೈಕೋರ್ಟ್‌ಗೆ ಗುರುವಾರ ತಿಳಿಸಿದೆ.
ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆ
ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆ

ಬೆಂಗಳೂರು: ರಾಷ್ಟ್ರೀಯ ವನ್ಯಜೀವಿ ಮಂಡಳಿ ರಚಿಸಿರುವ ಸಮಿತಿಯ ಶಿಫಾರಸಿನಂತೆ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆಗೆ ಪರಿಷ್ಕೃತ ಪ್ರಸ್ತಾವನೆ ಸಲ್ಲಿಸುವುದಾಗಿ ರೈಲ್ವೆ ಸಚಿವಾಲಯ ಕರ್ನಾಟಕ ಹೈಕೋರ್ಟ್‌ಗೆ ಗುರುವಾರ ತಿಳಿಸಿದೆ.

ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ತೆಗೆದುಕೊಂಡ ನಿರ್ಧಾರದ ವಿರುದ್ಧ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಎಂಜಿಎಸ್ ಕಮಲ್ ಅವರಿದ್ದ ವಿಭಾಗೀಯ ಪೀಠವು ಅಫಿಡವಿಟ್ ರೂಪದಲ್ಲಿ ದಾಖಲಿಸಿದೆ.

ಹುಬ್ಬಳ್ಳಿ-ಅಂಕೋಲಾ ನಡುವೆ ಹೊಸ ಬ್ರಾಡ್ ಗೇಜ್ ರೈಲು ಮಾರ್ಗ ನಿರ್ಮಾಣಕ್ಕೆ ಕಾರವಾರ, ಯಲ್ಲಾಪುರ ಮತ್ತು ಧಾರವಾಡ ವಿಭಾಗದ 595.64 ಹೆಕ್ಟೇರ್ ಅರಣ್ಯ ಭೂಮಿಯನ್ನು ಬೇರೆಡೆಗೆ ತಿರುಗಿಸಿರುವ ಕುರಿತು ಕಳವಳ ವ್ಯಕ್ತಪಡಿಸಿದ ಅರ್ಜಿದಾರರು, ಪ್ರಸ್ತಾವನೆಯನ್ನು ಪ್ರಶ್ನಿಸಿದ್ದಾರೆ. ಹೈಕೋರ್ಟ್ ನೀಡಿದ ನಿರ್ದೇಶನಗಳನ್ನು ಅನುಸರಿಸಿ ರಾಷ್ಟ್ರೀಯ ವನ್ಯಜೀವಿ ಮಂಡಳಿಯಿಂದ ಸಮಿತಿಯನ್ನು ರಚಿಸಲಾಗಿದೆ ಎಂದು ರೈಲ್ವೆ ತನ್ನ ಈ ಅಫಿಡವಿಟ್‌ನಲ್ಲಿ ಸಲ್ಲಿಸಿದೆ. 

ಸಮಿತಿಯು ತಾನು ಮಾಡಿದ ಶಿಫಾರಸುಗಳಿಗೆ ಅನುಗುಣವಾಗಿ ಯೋಜನೆಯ ಪರಿಷ್ಕೃತ ಪ್ರಸ್ತಾವನೆಯನ್ನು ಸಲ್ಲಿಸುವಂತೆ ರೈಲ್ವೆಗೆ ಈ ಹಿಂದೆ ಸೂಚಿಸಿತ್ತು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com