ರಾಜ್ಯದಲ್ಲಿ ಆಗಸ್ಟ್ ತಿಂಗಳಲ್ಲಿ 11,116 ಕೋಟಿ ರೂ. ಜಿಎಸ್‌ಟಿ ಸಂಗ್ರಹ; ಕಳೆದ ವರ್ಷಕ್ಕಿಂತ ಈ ಬಾರಿ ಶೇ.16ರಷ್ಟು ಹೆಚ್ಚಳ!

ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಸಂಗ್ರಹದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದು, ಮಹಾರಾಷ್ಟ್ರ ಹೊರತುಪಡಿಸಿದರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಸಂಗ್ರಹದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದು, ಮಹಾರಾಷ್ಟ್ರ ಹೊರತುಪಡಿಸಿದರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ.

ಇಂಟಿಗ್ರೇಟೆಡ್ ಜಿಎಸ್‌ಟಿಯಿಂದ ಕೇಂದ್ರ ಜಿಎಸ್‌ಟಿಗೆ 37,581 ಕೋಟಿ ರೂ. ಮತ್ತು ರಾಜ್ಯ ಜಿಎಸ್‌ಟಿಗೆ 31,408 ಕೋಟಿ ರೂ. ವರ್ಗಾಯಿಸಲಾಗಿದೆ. ಈ ಹಂಚಿಕೆಯ ಬಳಿಕ ಆಗಸ್ಟ್‌ ತಿಂಗಳಿನಲ್ಲಿ ಕೇಂದ್ರ ಮತ್ತು ರಾಜ್ಯಗಳ ಒಟ್ಟು ಆದಾಯ ಕ್ರಮವಾಗಿ 65,909 ಕೋಟಿ ರೂ. ಮತ್ತು 67,202 ಕೋಟಿ ರೂ.ಗಳಾಗಿವೆ.

ರಾಜ್ಯದಲ್ಲಿ ಕರ್ನಾಟಕದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಶೇ.16ರಷ್ಟು ಏರಿಕೆಯಾಗಿದ್ದು, ಈ ಬಾರಿ 11,116 ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿದ್ದು, ಎರಡನೇ ಸ್ಥಾನ ಪಡೆದಿದೆ. ಕಳೆದ ಆಗಸ್ಟ್‌ನಲ್ಲಿ 9,583 ಕೋಟಿ ರೂ. ಸಂಗ್ರಹವಾಗಿತ್ತು.

ಮಹಾರಾಷ್ಟ್ರದಲ್ಲಿ 23,282 ಕೋಟಿ ರೂ. ಸಂಗ್ರಹವಾಗಿದ್ದು, ಮೊದಲ ಸ್ಥಾನದಲ್ಲೇ ಮುಂದುವರಿದಿದೆ. ಗುಜರಾತ್‌ 9,765 ಕೋಟಿ ರೂ., ತಮಿಳುನಾಡು 9,475 ಕೋಟಿ ರೂ., ಉತ್ತರ ಪ್ರದೇಶದಲ್ಲಿ 7,468 ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com