ಡ್ರಗ್ಸ್ ಸಾಗಣೆ: ಸಿಸಿಬಿಯಿಂದ ಅಂತರ್ ರಾಜ್ಯ ಬಸ್ ಗಳ ತಪಾಸಣೆ

ಹೊರ ರಾಜ್ಯದಿಂದ ಬರುವ ಬಸ್‌ಗಳಲ್ಲಿ ಡ್ರಗ್ಸ್ ಸಾಗಣೆ ಮಾಡಲಾಗುತ್ತಿದೆ ಎಂಬ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಶನಿವಾರ ಶೋಧ ನಡೆಸಿದರು.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಹೊರ ರಾಜ್ಯದಿಂದ ಬರುವ ಬಸ್‌ಗಳಲ್ಲಿ ಡ್ರಗ್ಸ್ ಸಾಗಣೆ ಮಾಡಲಾಗುತ್ತಿದೆ ಎಂಬ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಶನಿವಾರ ಶೋಧ ನಡೆಸಿದರು.

ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳುನಾಡು, ತೆಲಂಗಾಣ ಹಾಗೂ ಇತರೆ ರಾಜ್ಯಗಳಿಂದ ನಿತ್ಯವೂ ಬಸ್‌ಗಳು ನಗರಕ್ಕೆ ಬರುತ್ತವೆ. ಇಂತಹ ಬಸ್‌ಗಳಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಮಾಹಿತಿ ಸಿಸಿಬಿಗೆ ಲಭ್ಯವಾಗಿತ್ತು.

ಈ ಹಿನ್ನೆಲೆಯಲ್ಲಿ ಮೆಜೆಸ್ಟಿಕ್ ಬಸ್‌ ನಿಲ್ದಾಣ, ಯಶವಂತಪುರ, ಗಾಂಧಿನಗರ, ಕೆ.ಆರ್. ಮಾರುಕಟ್ಟೆ ಹಾಗೂ ಹಲವು ಪ್ರದೇಶಗಳಲ್ಲಿ ಬಸ್‌ ಏರಿದ್ದ ಸಿಸಿಬಿ ಪೊಲೀಸರು, ಪಾರ್ಸೆಲ್‌ಗಳನ್ನು ತಪಾಸಣೆ ನಡೆಸಿದರು.

ಶ್ವಾನದಳದ ಸಿಬ್ಬಂದಿ, ಬಸ್‌ಗಳ ಪ್ರತಿಯೊಂದು ಭಾಗಗಳಲ್ಲಿ ಶೋಧ ನಡೆಸಿದರು. ಬಸ್‌ಗಳ ಲಗೇಜ್‌ ಜಾಗದಲ್ಲೂ ಪರಿಶೀಲನೆ ನಡೆಸಲಾಯಿತು.

‘ಡ್ರಗ್ಸ್ ಸಾಗಣೆ ಹಾಗೂ ಮಾರಾಟದ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿದೆ. ಹೊರ ರಾಜ್ಯಗಳಿಂದ ಬರುವ ಖಾಸಗಿ ಬಸ್‌ಗಳಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಮಾಹಿತಿ ಇತ್ತು. ಹೀಗಾಗಿ, ಎಲ್ಲಾ ಬಸ್‌ಗಳಲ್ಲಿ ತಪಾಸಣೆ ನಡೆಸಲಾಯಿತು’ ಎಂದು ಸಿಸಿಬಿ ಜಂಟಿ ಕಮಿಷನರ್ ಎಸ್.ಡಿ. ಶರಣಪ್ಪ ಅವರು ಹೇಳಿದ್ದಾರೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com