ಅಗ್ನಿ ಅವಘಡ: ಮೃತ ಇಂಜಿನಿಯರ್'ಗೆ ಬಿಬಿಎಂಪಿ ಸಿಬ್ಬಂದಿಯಿಂದ ರೂ.95 ಲಕ್ಷ ನೆರವು

ಬಿಬಿಎಂಪಿಯ ಎಲ್ಲ ದರ್ಜೆಯ ನೌಕರರ ವತಿಯಿಂದ ಸುಮಾರು ರೂ.95.5 ಲಕ್ಷವನ್ನು ಅಗ್ನಿ ಅವಘಡದಲ್ಲಿ ಮೃತಪಟ್ಟ ಶಿವಕುಮಾರ್‌ ಅವರ ಕುಟುಂಬಕ್ಕೆ ನೀಡಲಾಗುವುದು ಎಂದು ಬಿಬಿಎಂಪಿ ಅಧಿಕಾರಿ ಹಾಗೂ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಮೃತ್‌ರಾಜ್ ಅವರು ಹೇಳಿದ್ದಾರೆ.
ಶನಿವಾರ ನಡೆದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮುಖ್ಯ ಎಂಜಿನಿಯರ್ ಸಿಎಂ ಶಿವಕುಮಾರ್ ಅವರಿಗೆ ಪುಷ್ಪ ನಮನ ಸಲ್ಲಿಸಿದರು.
ಶನಿವಾರ ನಡೆದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮುಖ್ಯ ಎಂಜಿನಿಯರ್ ಸಿಎಂ ಶಿವಕುಮಾರ್ ಅವರಿಗೆ ಪುಷ್ಪ ನಮನ ಸಲ್ಲಿಸಿದರು.

ಬೆಂಗಳೂರು: ಬಿಬಿಎಂಪಿಯ ಎಲ್ಲ ದರ್ಜೆಯ ನೌಕರರ ವತಿಯಿಂದ ಸುಮಾರು ರೂ.95.5 ಲಕ್ಷವನ್ನು ಅಗ್ನಿ ಅವಘಡದಲ್ಲಿ ಮೃತಪಟ್ಟ ಶಿವಕುಮಾರ್‌ ಅವರ ಕುಟುಂಬಕ್ಕೆ ನೀಡಲಾಗುವುದು ಎಂದು ಬಿಬಿಎಂಪಿ ಅಧಿಕಾರಿ ಹಾಗೂ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಮೃತ್‌ರಾಜ್ ಅವರು ಹೇಳಿದ್ದಾರೆ.

ಗುಣಮಟ್ಟ ಖಾತರಿ ಪ್ರಯೋಗಾಲಯದಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಮೃತಪಟ್ಟ ಮುಖ್ಯ ಎಂಜಿನಿಯರ್‌ ಸಿ.ಎಂ. ಶಿವಕುಮಾರ್ ಸ್ಮರಣಾರ್ಥ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಅವರು ಮಾಹಿತಿ ನೀಡಿದರು.

ಶಿವಕುಮಾರ್ ಅವರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಮುಖ್ಯ ಆಯುಕ್ತರ ಸಮ್ಮುಖದಲ್ಲಿ ಶೀಘ್ರದಲ್ಲೇ ಚೆಕ್ ಅನ್ನು ಹಸ್ತಾಂತರ ಮಾಡಲಾಗುವುದು. ಅಲ್ಲದೆ, ಶಿವಕುಮಾರ್ ನೆನಪಿಗಾಗಿ ಎಲ್ಲಾ ರೀತಿಯ ಸೌಲಭ್ಯವುಳ್ಳ ಎರಡು ಆಂಬುಲೆನ್ಸ್‌ಗಳನ್ನು ಬಿಬಿಎಂಪಿ ನೌಕರರ ಸಹಕಾರ ಸಂಘ ಹಾಗೂ ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಪಾಲಿಕೆಗೆ ವಿತರಿಸಲಾಗುವುದು ಎಂದು ಹೇಳಿದರು.

ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರು ಮಾತನಾಡಿ, ಶಿವಕುಮಾರ್ ಅವರ ಪತ್ನಿಗೆ ಉದ್ಯೋಗ ನೀಡುವ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಕಳುಹಿಸಲಾಗುವುದು ಎಂದು ತಿಳಿಸಿದರು.

ಇದೇ ವೇಳೆ ಅಗ್ನಿ ಅವಘಡದ ಆಂತರಿಕ ತನಿಖೆ ಕುರಿತು ಮಾತನಾಡಿ, ವರದಿ ನೀಡಲು 15 ದಿನ ವಿಳಂಬವಾಗುವ ಸಾಧ್ಯತೆಗಳಿವೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com