ನೀರಾವರಿ ಯೋಜನೆ: ಪ್ರಧಾನಿ ಮೋದಿಗೆ ಮಾಹಿತಿ ನೀಡಲು ಸರ್ವಪಕ್ಷಗಳ ನಿಯೋಗ ಕರೆದೊಯ್ಯಲು ಸಿದ್ಧ; ಸಿಎಂ ಸಿದ್ದರಾಮಯ್ಯ

ಬಾಕಿ ಉಳಿದಿರುವಕೃಷ್ಣಾ ಮೇಲ್ದಂಡೆ, ಮಹದಾಯಿ ಮತ್ತು ಮೇಕೆದಾಟು ಯೋಜನೆಗಳಂತಹ ನೀರಾವರಿ ಯೋಜನೆಗಳ ಅನುಷ್ಠಾನದ ಅಗತ್ಯತೆಯ ಬಗ್ಗೆ ತಿಳಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಜಲಶಕ್ತಿ ಮತ್ತು ಪರಿಸರ ಸಚಿವ ಗಜೇಂದ್ರ ಸಿಂಗ್ ಶೇಖಾವತ್...
ಆಲಮಟ್ಟಿ ಜಲಾಶಯದಲ್ಲಿ ಬಾಗಿನ ಅರ್ಪಿಸಿದ ಬಳಿಕ ಸಿಎಂ ಸಿದ್ದರಾಮಯ್ಯ
ಆಲಮಟ್ಟಿ ಜಲಾಶಯದಲ್ಲಿ ಬಾಗಿನ ಅರ್ಪಿಸಿದ ಬಳಿಕ ಸಿಎಂ ಸಿದ್ದರಾಮಯ್ಯ

ಆಲಮಟ್ಟಿ (ವಿಜಯಪುರ ಜಿಲ್ಲೆ): ಬಾಕಿ ಉಳಿದಿರುವಕೃಷ್ಣಾ ಮೇಲ್ದಂಡೆ, ಮಹದಾಯಿ ಮತ್ತು ಮೇಕೆದಾಟು ಯೋಜನೆಗಳಂತಹ ನೀರಾವರಿ ಯೋಜನೆಗಳ ಅನುಷ್ಠಾನದ ಅಗತ್ಯತೆಯ ಬಗ್ಗೆ ತಿಳಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಜಲಶಕ್ತಿ ಮತ್ತು ಪರಿಸರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರ ಬಳಿಗೆ ಸರ್ವಪಕ್ಷ ನಿಯೋಗ ಕೊಂಡೊಯ್ಯಲು ಸಿದ್ಧವಿದ್ದೇವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಹೇಳಿದರು.

ಆಲಮಟ್ಟಿಯಲ್ಲಿ ಯುಕೆಪಿಯ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಈಗಾಗಲೇ ಪ್ರಧಾನಮಂತ್ರಿಗಳ ಕಚೇರಿಗೆ ಪತ್ರ ಬರೆಯಲಾಗಿದ್ದು, ಪ್ರತಿಕ್ರಿಯೆಗಾಗಿ ನಾವು ಕಾಯುತ್ತಿದ್ದೇವೆ. ಈ ಮೂರು ಪ್ರಮುಖ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನಾವು ನಮ್ಮ ನಿಲುವನ್ನು ಕೇಂದ್ರ ಸರ್ಕಾರದ ಬಳಿ ಸ್ಪಷ್ಟಪಡಿಸುತ್ತೇವೆಂದು ಹೇಳಿದರು.

ಕರ್ನಾಟಕಕ್ಕೆ ಕೃಷ್ಣಾ ಜಲ ವಿವಾದ ನ್ಯಾಯಮಂಡಳಿ ಮಂಜೂರು ಮಾಡಿರುವ 130 ಟಿಎಂಸಿ ಅಡಿ ಕೃಷ್ಣಾ ನೀರನ್ನು ಬಳಸಿಕೊಳ್ಳಲು ರಾಜ್ಯ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಆದಷ್ಟು ಬೇಗ ಗೆಜೆಟ್ ಅಧಿಸೂಚನೆ ಹೊರಡಿಸಬೇಕೆಂದು ಒತ್ತಾಯಿಸಿದರು.

ವಿಚಾರ ನ್ಯಾಯಾಲಯದ ಅಂಗಳದಲ್ಲಿರುವುದರಿಂದ ಗೆಜೆಟ್ ಅಧಿಸೂಚನೆ ಹೊರಡಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ನುಣುಚಿಕೊಳ್ಳುತ್ತಿದೆ. ಆದರೆ, ಸತ್ಯ ಬೇರೆಯೇ ಇದೆ. ವಿಚಾರ ನ್ಯಾಯಾಲಯದ ಅಂಗಳಿದಲ್ಲಿದ್ದರೂ ಗೆಜೆಟ್ ಅಧಿಸೂಚನೆ ಹೊರಡಿಸಲು ಸರ್ಕಾರಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ ಎಂದು ತಿಳಿಸಿದರು.

ಕೇಂದ್ರವು ಯುಕೆಪಿಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸಬೇಕೆಂದು ಕರ್ನಾಟಕ ಬಯಸುತ್ತದೆ. ಯುಕೆಪಿ ಯೋಜನೆಯನ್ನು 5 ವರ್ಷಗಳಲ್ಲಿ ಪೂರ್ಣಗೊಳಿಸಲು ಬಯಸುತ್ತಿದ್ದೇವೆ. ಈಗಾಗಲೇ ಇದರ ಸುಮಾರು 1 ಲಕ್ಷ ಕೋಟಿಗೆ ಏರಿಕೆಯಾಗಿದೆ ಎಂದರು.

ಇದೇ ವೇಳೆ ಜಲಸಂಪನ್ಮೂಲ ಖಾತೆ ಹೊಂದಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾತನಾಡಿ, ಕಾವೇರಿ ವಿಚಾರದಲ್ಲಿ ಕರ್ನಾಟಕದ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com