ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಿಯಮ ಉಲ್ಲಂಘನೆ ತಡೆಗೆ ಕ್ರಮ: AI ಆಧಾರಿತ 60 ಕ್ಯಾಮೆರಾ ಅಳವಡಿಕೆಗೆ ಮುಂದು

ಅಪಘಾತಗಳಿಂದಾಗಿ ಇಡೀ ದೇಶದ ಗಮನ ಸೆಳೆದಿದ್ದ ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಂಚಾರ ನಿಯಮಗಳ ಉಲ್ಲಂಘನೆ ತಡೆಯಲು ಅಧಿಕಾರಿಗಳು ಕ್ರಮಗಳ ಕೈಗೊಳ್ಳುತ್ತಿದ್ದು, ಇದರಂತೆ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ 60 ಭದ್ರತಾ ಕ್ಯಾಮೆರಾಗಳ ಅಳವಡಿಸಲು ಮುಂದಾಗಿದ್ದಾರೆ.
ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ
ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ
Updated on

ಬೆಂಗಳೂರು: ಅಪಘಾತಗಳಿಂದಾಗಿ ಇಡೀ ದೇಶದ ಗಮನ ಸೆಳೆದಿದ್ದ ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್ ವೇ ಹೆದ್ದಾರಿಯಲ್ಲಿ ಸಂಚಾರ ನಿಯಮಗಳ ಉಲ್ಲಂಘನೆ ತಡೆಯಲು ಅಧಿಕಾರಿಗಳು ಕ್ರಮಗಳ ಕೈಗೊಳ್ಳುತ್ತಿದ್ದು, ಇದರಂತೆ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ 60 ಭದ್ರತಾ ಕ್ಯಾಮೆರಾಗಳ ಅಳವಡಿಸಲು ಮುಂದಾಗಿದ್ದಾರೆ.

ಆರಂಭದಲ್ಲಿ, 118 ಕಿಲೋಮೀಟರ್ ಉದ್ದಕ್ಕೂ ಪ್ರತಿ 10 ಕಿಲೋಮೀಟರ್ ದೂರಕ್ಕೆ ಒಂದು ಕ್ಯಾಮೆರಾವನ್ನು ಅಳವಡಿಸಲು ಯೋಜಿಸಲಾಗಿತ್ತು. ಇದೀಗ ಪ್ರತಿ 2 ಕಿಮೀಗೆ ಒಂದರಂತೆ 60 ಕ್ಯಾಮೆರಾಗಳ ಅಳವಡಿಸಲು ನಿರ್ಧರಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತೆ) ಅಲೋಕ್ ಕುಮಾರ್ ಅವರು ಹೇಳಿದ್ದಾರೆ.

ಈ ಹಿಂದೆಯೇ ಕ್ಯಾಮೆರಾಗಳ ಅಳವಡಿಸಲು ಚಿಂತನೆ ನಡೆಸಲಾಗಿತ್ತು. ಆದರೆ, ಹೆದ್ದಾರಿಯು NHAI (ಭಾರತೀಯ ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರ) ಅಡಿಯಲ್ಲಿ ಬರುವುದರಿಂದ ಅವರೇ ಕ್ಯಾಮೆರಾಗಳ ಅಳವಡಿಸಲು ಮುಂದಾಗಿದ್ದಾರೆ. ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಟೆಂಡರ್ ಕರೆದು, ಕ್ಯಾಮೆರಾಗಳ ಅಳವಡಿಸಲಾಗುವುದು ಎಂದು ತಿಳಿಸಿದ್ದಾರೆ.

"AI ಕ್ಯಾಮೆರಾಗಳು ಅನುಮತಿಸಲಾದ ಗರಿಷ್ಠ ವೇಗದ ಮಿತಿಯನ್ನು ದಾಟುವ ವಾಹನಗಳನ್ನು ಗುರುತಿಸುವುದಲ್ಲದೆ, ನಿರ್ಬಂಧಿತ ವಾಹನಗಳು-ದ್ವಿಚಕ್ರ ವಾಹನಗಳು ಮತ್ತು ತ್ರಿಚಕ್ರ ವಾಹನಗಳ ಪ್ರವೇಶವನ್ನೂ ಗುರುತಿಸುತ್ತದೆ. ಇದಲ್ಲದೆ, ಚಾಲನೆ ಮಾಡುವಾಗ ಮೊಬೈಲ್ ಬಳಕೆ ಮಾಡುವುದು, ಸೀಟ್ ಬೆಲ್ಟ್ ಧರಿಸದಿರುವುದು, ಒನ್ ವೇ ಅಲ್ಲಿ ಬರುವ ವಾಹನಗಳನ್ನು ಗುರ್ತಿಸಿ, ರೆಕಾರ್ಡ್ ಮಾಡಿಕೊಳ್ಳುತ್ತದೆ.

ಬಳಿಕ ಸಂಚಾರ ನಿರ್ವಹಣಾ ಕೇಂದ್ರಗಳೊಂದಿಗೆ ಡೇಟಾವನ್ನು ಹಂಚಿಕೊಳ್ಳುತ್ತವೆ. ಬಳಿಕ ನಿಯಮ ಉಲ್ಲಂಘಿಸಿದವರ ವಿರುದ್ಧ ಮೋಟಾರು ವಾಹನ ಕಾಯ್ದೆ 1988 ರ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗುತ್ತದೆ. ಚಾಲಕರಿಗೆ ಇ-ಚಲನ್‌ಗಳನ್ನೂ ಕೂಡ ನೀಡಲಾಗುತ್ತದೆ. ವಾಹನ ಮಾಲೀಕರು ದಂಡವನ್ನು ಪಾವತಿಸಬೇಕಾಗುತ್ತದೆ ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com