ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಕುರಿತು ಪ್ರಚೋದನಕಾರಿ ಹೇಳಿಕೆ: ಮುತಾಲಿಕ್ ಗಡಿಪಾರಿಗೆ ಎಸ್‌ಡಿಪಿಐ ಆಗ್ರಹ

ಹುಬ್ಬಳ್ಳಿಯ ವಿವಾದಿತ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸುವ ಕುರಿತು ಪ್ರಚೋದನಕಾರಿ ಹೇಳಿಕೆ ನೀಡಿದ ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರನ್ನು ಗಡಿಪಾರು ಮಾಡುವಂತೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಆಗ್ರಹಿಸಿದೆ.
ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ .
ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ .

ಹುಬ್ಬಳ್ಳಿ: ಹುಬ್ಬಳ್ಳಿಯ ವಿವಾದಿತ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸುವ ಕುರಿತು ಪ್ರಚೋದನಕಾರಿ ಹೇಳಿಕೆ ನೀಡಿದ ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರನ್ನು ಗಡಿಪಾರು ಮಾಡುವಂತೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಆಗ್ರಹಿಸಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಎಸ್‌ಡಿಪಿಐ ಮುಖಂಡ ವಿಜಯ ಗುಂಟ್ರಾಳ್, ಕಳೆದ ವರ್ಷ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಕಾನೂನು ಬಾಹಿರವಾಗಿ ಅನುಮತಿ ನೀಡಿದ್ದು, ಈ ಬಾರಿ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಸರ್ಕಾರ ಯಾವುದೇ ಸಂಘಟನೆಗೆ ಅವಕಾಶ ನೀಡಬಾರದು ಎಂದು ಹೇಳಿದರು. 

ಮುತಾಲಿಕ್ ಅವರು ನೀಡಿರುವ ಹೇಳಿಕೆಗಳು ಮುಸ್ಲಿಮರ ಭಾವನೆಗಳಿಗೆ ಧಕ್ಕೆ ತಂದಿಗೆ. ಈ ಹಿನ್ನೆಲೆಯಲ್ಲಿ ಸರ್ಕಾರ ಮುತಾಲಿಕ್ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಿ ಗಡಿಪಾರು ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com