ರಾಜ್ಯಪಾಲರ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ಸೃಷ್ಟಿ: ತನಿಖೆ ಆರಂಭ

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಫೋಟೋ ಮತ್ತು ಹೆಸರು ಬಳಸಿ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ತೆರೆಯಲಾಗಿದ್ದು, ಈ ಬಗ್ಗೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಫೋಟೋ ಮತ್ತು ಹೆಸರು ಬಳಸಿ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ತೆರೆಯಲಾಗಿದ್ದು, ಈ ಬಗ್ಗೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

ಅಪರಿಚಿತ ವ್ಯಕ್ತಿಗಳು ನಕಲಿ ಪ್ರೊಫೈಲ್ ಸೃಷ್ಟಿಸಿ ರಾಜ್ಯಪಾಲರ ಹೆಸರನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಆರ್ ಅವರು ಆಗಸ್ಟ್ 31 ರಂದು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ.

ದೂರಿನ ಆಧಾರದ ಮೇಲೆ, ಸೈಬರ್ ಕ್ರೈಂ ಪೊಲೀಸರು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಅಡಿಯಲ್ಲಿ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.

ಸಂಬಂಧ ಇಲಾಖೆಯೊಂದಿಗೆ ಮಾಹಿತಿ ಹಂಚಿಕೊಳ್ಳಲಾಗಿದೆ. ನಕಲಿ ಖಾತೆಯನ್ನು ತೆಗೆದು ಹಾಕಲಾಗಿದೆ. ಆರೋಪಿಗಳ ಪತ್ತೆಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com