ಕಾನೂನು ರಕ್ಷಣೆ ನಮ್ಮೆಲ್ಲರ ಕರ್ತವ್ಯ: ಸಿಎಂ ಸಿದ್ಧರಾಮಯ್ಯ

ದೇಶದಲ್ಲಿಂದು ಸಂವಿಧಾನ ಅಪಾಯದಲ್ಲಿದ್ದು, ಅದನ್ನು ರಕ್ಷಿಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದರು.
ವಿಧಾನಸೌಧದಲ್ಲಿ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಧಾನಸೌಧದಲ್ಲಿ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ
Updated on

ಬೆಂಗಳೂರು: ದೇಶದಲ್ಲಿಂದು ಸಂವಿಧಾನ ಅಪಾಯದಲ್ಲಿದ್ದು, ಅದನ್ನು ರಕ್ಷಿಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಇಲಾಖೆ ವತಿಯಿಂದ ನಗರದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಮುಖ್ಯಮಂತ್ರಿಗಳು, ಅಸಾಧಾರಣ ಸೇವೆ ಸಲ್ಲಿಸುತ್ತಿರುವ ರಾಜ್ಯದ 43 ಶಿಕ್ಷಕರಿಗೆ ಪ್ರಶಸ್ತಿ ವಿತರಿಸಿದರು. ಬಳಿಕ ಶಿಕ್ಷಣಕ್ಕೆ ಭಾರತ ರತ್ನ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಕೊಡುಗೆಯನ್ನು ಸ್ಮರಿಸಿದರು. ಈ ವೇಳೆ ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಳ್ಳುವುದರ ಮಹತ್ವವನ್ನು ತಿಳಿಸಿದರು.

ಪದವಿ ಅಥವಾ ಡಾಕ್ಟರೇಟ್ ಪಡೆದ ಮಾತ್ರಕ್ಕೆ ಸುಶಿಕ್ಷಿತರು ಎಂದು ಕರೆಯಲಾಗದು. ಪದವಿ ಪಡೆದವರು ಜಾತಿವಾದಿಗಳಾದರೆ, ಶಿಕ್ಷಣದ ಅಗತ್ಯವೇನಿದೆ? ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಮತ್ತು ವೈಚಾರಿಕತೆ ಬೆಳೆಸಿಕೊಳ್ಳಬೇಕು' ಎಂದರು.

ಇದೇ ವೇಳೆ ಶಿಕ್ಷಕರನ್ನು ಕೊಂಡಾಡಿದ ಮುಖ್ಯಮಂತ್ರಿಗಳು  ರೈತರು, ಸೈನಿಕರು ಮತ್ತು ಶಿಕ್ಷಕರು ಸಮಾಜದ ಆಧಾರ ಸ್ತಂಭಗಳು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com