ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಮುಂದುವರೆದ ಕನ್ನಡ ಪರ ಸಂಘಟನೆಗಳ ಪ್ರತಿಭಟನೆ

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿ ಮಂಡ್ಯದಲ್ಲಿ ಕನ್ನಡ ಪರ ಸಂಘಟನೆಗಳು ಬುಧವಾರವೂ ಪ್ರತಿಭಟನೆ ಮುಂದುವರಿಸಿವೆ. ಸಂಜಯ್ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ರಸ್ತೆಯಲ್ಲಿ ಉರುಳುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮಂಡ್ಯದಲ್ಲಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರ ಪ್ರತಿಭಟನೆ
ಮಂಡ್ಯದಲ್ಲಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರ ಪ್ರತಿಭಟನೆ

ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿ ಮಂಡ್ಯದಲ್ಲಿ ಕನ್ನಡ ಪರ ಸಂಘಟನೆಗಳು ಬುಧವಾರವೂ ಪ್ರತಿಭಟನೆ ಮುಂದುವರಿಸಿವೆ.

ಸಂಜಯ್ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ರಸ್ತೆಯಲ್ಲಿ ಉರುಳುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ಹಿಂದೆ ಸೋಮವಾರ ಮಂಡ್ಯದ ಶ್ರೀರಂಗಪಟ್ಟಣ ಬಳಿ ಕಾವೇರಿ ನದಿ ನೀರಿನಲ್ಲಿ ನಿಂತು ಪ್ರತಿಭಟನೆ ನಡೆಸಿದ ಕನ್ನಡ ಪರ ಸಂಘಟನೆಗಳು ಕೂಡಲೇ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸುವಂತೆ ಆಗ್ರಹಿಸಿದವು.

ಆಗಸ್ಟ್ 29 ರಿಂದ ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿದಿನ 5,000 ಕ್ಯೂಸೆಕ್ ನೀರು ಬಿಡುವಂತೆ  ಕರ್ನಾಟಕಕ್ಕೆ ಸೂಚಿಸಿ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್‌ಸಿ) ಮಧ್ಯಂತರ ಆದೇಶವನ್ನು ಹೊರಡಿಸಿದ ನಂತರ ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದನ್ನು ನಿಲ್ಲಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ಇದಕ್ಕೂ ಮುನ್ನ ಗುರುವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ್ದು, ಸಭೆ ನಡೆಸಲಾಗಿದೆ ಮತ್ತು ಕರ್ನಾಟಕವು ಸಿಡಬ್ಲ್ಯುಎಂಎ ನಿರ್ದೇಶನವನ್ನು ಅನುಸರಿಸಿ ಆಗಸ್ಟ್ 12ರಿಂದ ಆಗಸ್ಟ್ 26 ರವರೆಗೆ ಒಟ್ಟು 1,49,898 ಕ್ಯೂಸೆಕ್ ನೀರು ಬಿಡುಗಡೆ ಮಾಡಿದೆ ಎಂದು ತಿಳಿಸಿದೆ.

ಈ ಹಿಂದೆ, ಸುಪ್ರೀಂ ಕೋರ್ಟ್ ನಾವು ಈ ವಿಷಯದಲ್ಲಿ ಯಾವುದೇ ಪರಿಣತಿ ಹೊಂದಿಲ್ಲ ಎಂದು ಹೇಳಿತ್ತು ಮತ್ತು ಕರ್ನಾಟಕ ಸರ್ಕಾರವು ತಮಿಳುನಾಡಿಗೆ ಬಿಡುಗಡೆ ಮಾಡಿರುವ ಕಾವೇರಿ ನೀರಿನ ಪ್ರಮಾಣದ ವರದಿ ಸಲ್ಲಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಆಗಸ್ಟ್ 25 ರಂದು ಸೂಚಿಸಿತ್ತು. 

ಈ ವಿಷಯವು ದಶಕಗಳಿಂದ ಕರ್ನಾಟಕ ಮತ್ತು ತಮಿಳುನಾಡು ನಡುವೆ ವಿವಾದಾಸ್ಪದ ವಿಷಯವಾಗಿದೆ. ಈ ಪ್ರದೇಶದ ಲಕ್ಷಾಂತರ ಜನರಿಗೆ ನೀರಾವರಿ ಮತ್ತು ಕುಡಿಯುವ ನೀರಿನ ಪ್ರಮುಖ ಮೂಲವಾಗಿರುವ ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಉಭಯ ರಾಜ್ಯಗಳು ಬಿನ್ನಾಭಿಪ್ರಾಯವನ್ನು ಹೊಂದಿವೆ. ನೀರು ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು, ಕೇರಳ, ಕರ್ನಾಟಕ ಮತ್ತು ಪುದುಚೇರಿ ನಡುವಿನ ವಿವಾದಗಳನ್ನು ಬಗೆಹರಿಸಲು ಕೇಂದ್ರವು ಜೂನ್ 2, 1990 ರಂದು ಕಾವೇರಿ ಜಲ ವಿವಾದಗಳ ನ್ಯಾಯಾಧಿಕರಣವನ್ನು (ಸಿಡಬ್ಲ್ಯುಡಿಟಿ) ರಚಿಸಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com