ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಲು ಕಾಂಗ್ರೆಸ್ ಪೊಲೀಸರ ದುರ್ಬಳಕೆ ಮಾಡಿಕೊಳ್ಳುತ್ತಿದೆ: ಆರೋಪ

ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಬಿಜೆಪಿ ಕಾರ್ಯಕರ್ತರಿಗೆ ಬೆದರಿಕೆ ಮತ್ತು ಕಿರುಕುಳ ನೀಡಲು ಪೊಲೀಸ್ ಇಲಾಖೆಯನ್ನು ಕಾಂಗ್ರೆಸ್ ಸರ್ಕಾರ ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿ, ಬಿಜೆಪಿ ನಿಯೋಗವು ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಅವರನ್ನು ಭೇಟಿ ಮಾಡಿತು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಬಿಜೆಪಿ ಕಾರ್ಯಕರ್ತರಿಗೆ ಬೆದರಿಕೆ ಮತ್ತು ಕಿರುಕುಳ ನೀಡಲು ಪೊಲೀಸ್ ಇಲಾಖೆಯನ್ನು ಕಾಂಗ್ರೆಸ್ ಸರ್ಕಾರ ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿ, ಬಿಜೆಪಿ ನಿಯೋಗವು ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಅವರನ್ನು ಬುಧವಾರ ಭೇಟಿ ಮಾಡಿತು. ಪಕ್ಷದ ಕಾರ್ಯಕರ್ತರಿಗೆ ಕಿರುಕುಳ ನೀಡದಂತೆ ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಒತ್ತಾಯಿಸಿತು.

ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ್, ಶಾಸಕ ರವಿ ಸುಬ್ರಹ್ಮಣ್ಯ ಸೇರಿದಂತೆ ಬಿಜೆಪಿ ಮುಖಂಡರ ನಿಯೋಗ ರಾಜ್ಯ ಪೊಲೀಸ್ ವರಿಷ್ಠರಿಗೆ ಮನವಿ ಸಲ್ಲಿಸಿದ್ದು, ಪೊಲೀಸರು ಬಿಜೆಪಿ ಕಾರ್ಯಕರ್ತರು ಮತ್ತು ಬೆಂಬಲಿಗರ ವಿರುದ್ಧ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಮೇಲೆ ನಾನ್-ಕಾಗ್ನೈಸಬಲ್ ಮತ್ತು ಜಾಮೀನು ರಹಿತ ಪ್ರಕರಣಗಳನ್ನು ದಾಖಲಿಸಿರುವ ಹಲವಾರು ನಿದರ್ಶನಗಳಿವೆ. ಮಧ್ಯರಾತ್ರಿಯಲ್ಲಿ ಮಫ್ತಿಯಲ್ಲಿದ್ದ ಪೊಲೀಸರು ಕಾರ್ಯಕರ್ತರ ಮನೆಗಳ ಮೇಲೆ ದಾಳಿ ನಡೆಸಿ ಬಂಧಿಸಿದ್ದಾರೆ ಎಂದು ನಿಯೋಗ ಆರೋಪಿಸಿದೆ.

ಕಾರ್ಯಕರ್ತರನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಯಾವುದೇ ಪ್ರಕರಣವಿಲ್ಲದೆ ಒಂದು ಅಥವಾ ಎರಡು ದಿನಗಳ ಕಾಲ ಅಕ್ರಮವಾಗಿ ಬಂಧಿಸಿ ನಂತರ ಬಿಡುಗಡೆ ಮಾಡಿದ ಪ್ರಕರಣಗಳಿವೆ ಎಂದು ಬಿಜೆಪಿ ನಾಯಕರು ಆರೋಪಿಸಿದರು. 

ಪೊಲೀಸರು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ಭಯೋತ್ಪಾದಕ ಮತ್ತು ರಾಷ್ಟ್ರ ವಿರೋಧಿ ಕೃತ್ಯದಂತೆ ಪರಿಗಣಿಸುತ್ತಿದ್ದಾರೆ ಎಂದು ಆರೋಪಿಸಿದರು.

ಕಿರಿಯ ಪೊಲೀಸ್ ಅಧಿಕಾರಿಗಳು ಉನ್ನತ ಅಧಿಕಾರಿಗಳ ಸೂಚನೆಗಳನ್ನು ಅನುಸರಿಸುತ್ತಿದ್ದಾರೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com