ಹಿಂದೂ ಧರ್ಮ ಯಾವಾಗ ಹುಟ್ಟಿತು? ಯಾರು ಹುಟ್ಟು ಹಾಕಿದರು? ಹೇಳಿಕೆ ಸಮರ್ಥಿಸಿಕೊಂಡ ಸಚಿವ ಡಾ. ಜಿ. ಪರಮೇಶ್ವರ್!

ಹಿಂದೂ ಧರ್ಮದ ಮೂಲವನ್ನು ಪ್ರಶ್ನಿಸಿ ಪ್ರತಿಪಕ್ಷ ಬಿಜೆಪಿ ಕೆಂಗಣ್ಣಿಗೆ ಗುರಿಯಾಗಿದ್ದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಬುಧವಾರ ತಮ್ಮ  ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ಮನುಕುಲದ ಒಳಿತಿಗಾಗಿ ಎಲ್ಲಾ ಧರ್ಮಗಳು ಅಸ್ತಿತ್ವಕ್ಕೆ ಬಂದಿರುವುದಾಗಿ ಹೇಳಿದ್ದಾರೆ. 
ಡಾ.ಜಿ. ಪರಮೇಶ್ವರ್
ಡಾ.ಜಿ. ಪರಮೇಶ್ವರ್

ಬೆಂಗಳೂರು: ಹಿಂದೂ ಧರ್ಮದ ಮೂಲವನ್ನು ಪ್ರಶ್ನಿಸಿ ಪ್ರತಿಪಕ್ಷ ಬಿಜೆಪಿ ಕೆಂಗಣ್ಣಿಗೆ ಗುರಿಯಾಗಿದ್ದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಬುಧವಾರ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ಮನುಕುಲದ ಒಳಿತಿಗಾಗಿ ಎಲ್ಲಾ ಧರ್ಮಗಳು ಅಸ್ತಿತ್ವಕ್ಕೆ ಬಂದಿರುವುದಾಗಿ ಹೇಳಿದ್ದಾರೆ. 

ಮಂಗಳವಾರ ತಮ್ಮ ತವರು ಕ್ಷೇತ್ರ ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಪರಮೇಶ್ವರ್, ‘ಹಿಂದೂ ಧರ್ಮ ಯಾವಾಗ ಹುಟ್ಟಿತು, ಯಾರು ಹುಟ್ಟು ಹಾಕಿದರು ಎಂಬುದು ಇಂದಿಗೂ ಪ್ರಶ್ನೆಯಾಗಿಯೇ ಉಳಿದಿದೆ. ಬೌದ್ಧ ಧರ್ಮ ಹುಟ್ಟಿದ್ದು ಭಾರತದಲ್ಲಿ. ಜೈನ ಧರ್ಮವು ಭಾರತದಲ್ಲಿ ತನ್ನ ಬೇರುಗಳನ್ನು ಹೊಂದಿದೆ. ಇಸ್ಲಾಂ ಮತ್ತು ಕ್ರಿಶ್ಚಿಯನ್ ಧರ್ಮಗಳು ವಿದೇಶಗಳಿಂದ ಬಂದವು. ಆದರೆ ನೀವು ವಿಶ್ಲೇಷಿಸಿದರೆ, ಈ ಎಲ್ಲ (ಧರ್ಮಗಳ) ಸಾರಾಂಶವು ಮನುಕುಲಕ್ಕೆ ಒಳ್ಳೆಯದನ್ನು ಮಾಡುವುದಾಗಿದೆ ಎಂದು ಹೇಳಿದ್ದರು.

ಅವರ ಭಾಷಣದ ವಿಡಿಯೋ ಬುಧವಾರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದಂತೆಯೇ ವಿವಾದಕ್ಕೆ ಕಾರಣವಾಗಿತ್ತು.  ಗೃಹ ಸಚಿವರ ಹೇಳಿಕೆ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ನಾಯಕರು, ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

ಬಳಿಕ ತಾನು ವಿವಾದಾತ್ಮಕ ರೀತಿಯ ಹೇಳಿಕೆ ನೀಡಿಲ್ಲ ಎಂದು ಪರಮೇಶ್ವರ್ ಸಮರ್ಥಿಸಿಕೊಂಡಿದ್ದಾರೆ. ನನ್ನ ಹೇಳಿಕೆಯಲ್ಲಿ ತಪ್ಪೇನು? ನಾನು ಸರ್ವಪಲ್ಲಿ ರಾಧಾಕೃಷ್ಣನ್ ಅವರ ತುಲನಾತ್ಮಕ ಧರ್ಮದ ಕೃತಿಗಳ ಬಗ್ಗೆ ಮಾತನಾಡುತ್ತಿದ್ದೆ ಮತ್ತು ಎಲ್ಲಾ ಧರ್ಮಗಳ ಸಾರಾಂಶವು ಒಂದೇ ಎಂದು ಹೇಳಿದೆ. ಹಿಂದೂ ಧರ್ಮವು ಅದಕ್ಕೆ ಅಡಿಪಾಯ ಹಾಕಿದೆ ಎಂದು ನಾನು ಹೇಳಿದ್ದೇನೆ, ಅದು ಶಾಂತಿ ಮಂತ್ರ (ಶಾಂತಿ). ಅದರಲ್ಲಿ ಏನಾದರೂ ತಪ್ಪಿದೆಯೇ?” ಎಂದು ಅವರು ಹೇಳಿದರು.

ರಾಜಕೀಯ ಕಾರಣಗಳಿಗಾಗಿ ತಮ್ಮ ಹೇಳಿಕೆಯನ್ನು ವಿವಾದಾತ್ಮಕವಾಗಿ ಎಂದು ಬಿಂಬಿಸುತ್ತಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಪರಮೇಶ್ವರ್, ಅವರಿಗೆ ಉತ್ತರಿಸಲು ನಾನು ಸಿದ್ಧನಿದ್ದೇನೆ ಎಂದು ಹೇಳುವ ಮೂಲಕ ತಿರುಗೇಟು ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com