ಪ್ರೇಮಕುಮಾರಿ ಪ್ರಕರಣ ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಕಾರ; ಮಾಜಿ ಸಚಿವ ರಾಮದಾಸ್​ಗೆ ಹಿನ್ನಡೆ

ಈ ಹಿಂದೆ ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಪ್ರೇಮಕುಮಾರಿ ಪ್ರಕರಣದಲ್ಲಿ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಎಸ್‌.ಎ. ರಾಮದಾಸ್​ ಅವರಿಗೆ ಸುಪ್ರೀಂ ಕೋರ್ಟ್ ನಲ್ಲೂ ಹಿನ್ನಡೆಯಾಗಿದೆ.
ಎಸ್ ಎ ರಾಮದಾಸ್
ಎಸ್ ಎ ರಾಮದಾಸ್

ನವದೆಹಲಿ: ಈ ಹಿಂದೆ ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಪ್ರೇಮಕುಮಾರಿ ಪ್ರಕರಣದಲ್ಲಿ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಎಸ್‌.ಎ. ರಾಮದಾಸ್​ ಅವರಿಗೆ ಸುಪ್ರೀಂ ಕೋರ್ಟ್ ನಲ್ಲೂ ಹಿನ್ನಡೆಯಾಗಿದೆ.

ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾರೆ ಎಂದು ಆರೋಪಿಸಿ ಪ್ರೇಮಕುಮಾರಿ ಅವರು ದಾಖಲಿಸಿದ್ದ ಪ್ರಕರಣವನ್ನು ರದ್ದುಪಡಿಸುವಂತೆ ರಾಮದಾಸ್​​ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್​ ವಜಾ ಮಾಡಿದೆ.

ತನ್ನನ್ನು ಮದುವೆಯಾಗಿ ವಂಚಿಸಿದ್ದಾರೆಂದು ಪ್ರೇಮಕುಮಾರಿ ಎನ್ನುವರು ರಾಮದಾಸ್ ವಿರುದ್ಧ ದೂರು ನೀಡಿದ್ದರು. ಈ ಪ್ರಕರಣವನ್ನು ರದ್ದುಗೊಳಿಸುವಂತೆ ರಾಮದಾಸ್ ಹೈಕೋರ್ಟ್​ ಮೆಟ್ಟಿಲೇರಿದ್ದರು. ಅದರೆ ಹೈಕೋರ್ಟ್​ ಪ್ರರಣವನ್ನು ರದ್ದುಪಡಿಸಲು ನಿರಾಕರಿಸಿತ್ತು.

ನಂತರ ರಾಮದಾಸ್ ಅವರು ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಇದೀಗ ಸುಪ್ರೀಂ ಕೋರ್ಟ್ ಸಹ ಮಾಜಿ ಸಚಿವರ ಅರ್ಜಿಯನ್ನು ತಿರಸ್ಕರಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com