ಕಾವೇರಿ ವಿವಾದ: ರಾಜ್ಯದ ಹೋರಾಟಕ್ಕೆ ವಕೀಲರ ಸಾಥ್, ಪ್ರತಿಭಟನೆ

ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುತ್ತಿರುವುದನ್ನು ಕೂಡಲೇ ನಿಲ್ಲಿಸಬೇಕೆಂದು ಆಗ್ರಹಿಸಿ ರಾಜ್ಯದಾದ್ಯಂತ ನಡೆಯುತ್ತಿರುವ ಪ್ರತಿಭಟನೆಗೆ ವಕೀಲರು ಕೂಡ ಸಾಥ್ ನೀಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮೈಸೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುತ್ತಿರುವುದನ್ನು ಕೂಡಲೇ ನಿಲ್ಲಿಸಬೇಕೆಂದು ಆಗ್ರಹಿಸಿ ರಾಜ್ಯದಾದ್ಯಂತ ನಡೆಯುತ್ತಿರುವ ಪ್ರತಿಭಟನೆಗೆ ವಕೀಲರು ಕೂಡ ಸಾಥ್ ನೀಡಿದ್ದಾರೆ.

ಕಲಾಪ ಬಹಿಷ್ಕರಿಸಿದ ಮಂಡ್ಯ, ಶ್ರೀರಂಗಪಟ್ಟಣ ಮತ್ತು ಮದ್ದೂರು ನ್ಯಾಯಾಲಯಗಳ ವಕೀಲರು, ಶ್ರೀ ಜಯಚಾಮರಾಜೇಂದ್ರ ವೃತ್ತದಲ್ಲಿ ನಿನ್ನೆ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಿದರು.

ರೈತ ಹಿತರಕ್ಷಣಾ ಸಮಿತಿ ಕಾರ್ಯಕರ್ತರ ಪ್ರತಿಭಟನೆಯಲ್ಲಿ ಪಾಲ್ಗೊಂಡು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಂ.ಟಿ.ರಾಜೇಂದ್ರ ಸರ್ಕಾರ ರೈತ ಸಮುದಾಯಕ್ಕೆ ದ್ರೋಹ ಬಗೆದಿದೆ ಎಂದು ಆರೋಪಿಸಿದರು. ಸರ್ಕಾರದ ಕ್ರಮದಿಂದ ಮುಂದಿನ ತಿಂಗಳುಗಳಲ್ಲಿ ರಾಜ್ಯದಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಏತನ್ಮಧ್ಯೆ, ರಾಜ್ಯ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸುವುದನ್ನು ಮುಂದುವರಿಸಿರುವ ಜೆಡಿಎಸ್, ರಾಜ್ಯದ ವಾಸ್ತವಿಕ ಪರಿಸ್ಥಿತಿಯನ್ನು ಸುಪ್ರೀಂ ಕೋರ್ಟ್‌ಗೆ ತಿಳಿಸಲು ಮತ್ತು ಮನವರಿಕೆ ಮಾಡಿಕೊಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕಿಡಿಕಾರಿದೆ.

ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಅವರು ಮಾತನಾಡಿ, ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಅಫಿಡವಿಟ್ ಸಲ್ಲಿಸಬೇಕಿತ್ತು. ಜಲ ವಿವಾದದಲ್ಲಿ ಹೋರಾಡಿ, ತನ್ನ ರೈತರ ಹಿತ ಕಾಪಾಡುವಲ್ಲಿ ತಮಿಳುನಾಡು ಸರ್ಕಾರ ಮಾಸ್ಟರ್ ರೀತಿ ಆಗಿ ಹೋಗಿದೆ. ಆದರೆ, ಆಡಳಿತ ಪಕ್ಷದ ರಾಜಕಾರಣಿಗಳಲ್ಲಿ ಹೋರಾಡುವ ಚೈತನ್ಯವೇ ಇಲ್ಲದಂತೆ ಕಾಣುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಮಾಜಿ ಎಂಎಲ್ಸಿ ಶ್ರೀಕಂಠೇಗೌಡ ಮಾತನಾಡಿ, ತಮಿಳುನಾಡು ತನ್ನ ನೀರಾವರಿ ಪ್ರದೇಶವನ್ನು ಮೂರು ಪಟ್ಟು ಹೆಚ್ಚಿಸಿದೆ. ಈ ಕೃಷಿಗಾಗಿ ಕಾವೇರಿ ನೀರು ಪಡೆಯಲು ಪ್ರಾರಂಭಿಸಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com