‘ಗೃಹಲಕ್ಷ್ಮೀ’ ನೋಂದಣಿ ತಾತ್ಕಾಲಿಕ ಸ್ಥಗಿತ: ಸಚಿವೆ ಹೆಬ್ಬಾಳ್ಕರ್ ಸ್ಪಷ್ಟನೆ; ಜಾಲತಾಣ ನಿರ್ವಹಿಸುವವರ ವಿರುದ್ಧ ತೀವ್ರ ಗರಂ

ಗೃಹಲಕ್ಷ್ಮಿ ಯೋಜನೆಯ ನೋಂದಣಿಯನ್ನು ರಾಜ್ಯ ಸರ್ಕಾರ ಸ್ಥಗಿತಗೊಳಿಸಿದೆ ಎಂಬ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಟ್ವೀಟ್'ವೊಂದು ರಾಜ್ಯದ ಜನತೆಯನ್ನು ತೀವ್ರ ಗೊಂದಲಕ್ಕೊಳಗಾಗುವಂತೆ ಮಾಡಿದ ಬೆಳವಣಿಗೆಗಳು ಗುರುವಾರ ಕಂಡು ಬಂದಿತ್ತು.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ನೋಂದಣಿಯನ್ನು ರಾಜ್ಯ ಸರ್ಕಾರ ಸ್ಥಗಿತಗೊಳಿಸಿದೆ ಎಂಬ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಟ್ವೀಟ್'ವೊಂದು ರಾಜ್ಯದ ಜನತೆಯನ್ನು ತೀವ್ರ ಗೊಂದಲಕ್ಕೊಳಗಾಗುವಂತೆ ಮಾಡಿದ ಬೆಳವಣಿಗೆಗಳು ಗುರುವಾರ ಕಂಡು ಬಂದಿತ್ತು.

“ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿತ ಫಲಾನುಭವಿಗಳ ಖಾತೆಗೆ 2000 ರೂಪಾಯಿ ಜಮಾಗೊಳಿಸುವ ಪ್ರಕ್ರಿಯೆಯಲ್ಲಿ ಗೊಂದಲವಾಗದೇ ಇರಲಿ ಎಂದು ನೋಂದಣಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಶೀಘ್ರವೇ ನೋಂದಣಿ ಪುನರಾರಂಭಗೊಳ್ಳಲಿದೆ” ಎಂಬ ಉಲ್ಲೇಖದೊಂದಿಗೆ ಇಮೇಜ್‌ ಒಂದನ್ನು ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಬಿವೃದ್ಧಿ ಇಲಾಖೆ ಸಾಮಾಜಿಕ ಜಾಲತಾಣ ಎಕ್ಸ್‌ (ಟ್ವಿಟರ್) ಖಾತೆಯಲ್ಲಿ ಶೇರ್ ಮಾಡಿತ್ತು. ಈ ಪೋಸ್ಟ್ ನ್ನು ಸಿಎಂಆಫ್ ಕರ್ನಾಟಕ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಲಕ್ಷ್ಮೀಹೆಬ್ಬಾಳ್ಕರ್ ಅವರನ್ನು ಟ್ಯಾಗ್ ಮಾಡಲಾಗಿತ್ತು.

ಈ ಟ್ವೀಟ್ ನಿನ್ನೆ ವೈರಲ್ ಆಗಿತ್ತು. ಅಲ್ಲದೆ, ಜನತೆ ಗೊಂದಲಕ್ಕೊಳಗಾಗುವಂತೆ ಮಾಡಿತ್ತು. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ವಿಧಾನಸೌಧದಲ್ಲಿ ಸಭೆ ಕರೆದು, ಸಾಮಾಜಿಕ ಜಾಲತಾಣ ನಿರ್ವಹಿಸುವವರ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ, ಅತಾಚುರ್ಯದಿಂದ ನಮ್ಮ ಇಲಾಖೆಯಿಂದ ಈ ಟ್ವೀಟ್ ಆಗಿದೆ. ಏಕೆ ಆ ರೀತಿ ಆಯಿತು ಗೊತ್ತಾಗುತ್ತಿಲ್ಲ. ಟ್ವೀಟ್​ ಸಂಬಂಧ ಎಲ್ಲರಿಗೂ ನೋಟಿಸ್​ ಜಾರಿ ಮಾಡಿದ್ದೇವೆ. ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಮಿಸಲಾಗಿತ್ತು. ಸಾಮಾಜಿಕ ಜಾಲತಾಣ ನಿರ್ವಹಿಸುವವರ ವಿರುದ್ಧ​ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ನಮ್ಮ ಇಲಾಖೆಯಿಂದ ಈಗಾಗಲೇ ಹಣ ವರ್ಗಾವಣೆ ಆಗಿದೆ. ಬ್ಯಾಂಕ್​ನಿಂದ ಮಾತ್ರ ಹಣ ನಿಧಾನವಾಗಿದೆ. ಇನ್ನು 4-5 ದಿನಗಳಲ್ಲಿ ಎಲ್ಲರಿಗೂ ಹಣ ವರ್ಗಾವಣೆ ಆಗಲಿದೆ. ನಿಧಾನವಾಗಿ ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಪ್ರಕ್ರಿಯೆ ಆಗುತ್ತಿದೆ. ಫಲಾನುಭವಿಗಳಿಗೆ ನಮ್ಮ ಇಲಾಖೆಯಿಂದ ಹಣ ಕಳುಹಿಸುತ್ತಿದ್ದೇವೆ. ಹೊಸದಾಗಿ ನೋಂದಣಿ ಮಾಡಿಕೊಂಡವರಿಗೂ ಲಾಭ ಸಿಗುತ್ತಿದೆ. ಗೃಹಲಕ್ಷ್ಮೀ ನಿರಂತರವಾಗಿ ನಡೆಯುವ ಯೋಜನೆ ಎಂದು ತಿಳಿಸಿದರು.

ನಿನ್ನೆ ರಾತ್ರಿ ತನಕ 1.8 ಕೋಟಿ ರೂ. ಅಕೌಂಟ್​​ಗೆ ಇಲ್ಲಿಯವರೆಗೆ ಹಣ ಡಿಬಿಟಿ ಪ್ರೊಸೆಸ್ ಆಗಿದೆ. ಅದರಲ್ಲಿ 63 ಲಕ್ಷ ರೂ. ಅಕೌಂಟ್​ಗೆ ಹಣ ತಲುಪಿ ಆಗಿದೆ. ಬ್ಯಾಂಕ್​ನಿಂದ ಮಾತ್ರ ಹಣ ನಿಧಾನ ಆಗಿದೆ. ನಮ್ಮಿಂದ ಹಣ ಈಗಾಗಲೇ ವರ್ಗಾವಣೆ ಆಗಿದೆ. ಸರ್ಕಾರದಿಂದ ಯಾವುದೇ ತೊಂದರೆ ಆಗಿಲ್ಲ. ಸರ್ಕಾರದ ಖಜಾನೆಯಲ್ಲಿ ಹಣ ಇದೆ. ಇನ್ನೂ ನಾಲ್ಕೈದು ದಿನಗಳಲ್ಲಿ ಹಣ ಎಲ್ಲರಿಗೂ ವರ್ಗಾವಣೆ ಆಗಲಿದೆ. 1.28 ಕೋಟಿ ಯಜಮಾನಿಯರಿಗೆ ಹಣ ಹೋಗುತ್ತದೆ ಎಂದು ಮಾಹಿತಿ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com