ಕೆಎಸ್‌ಆರ್‌ಟಿಸಿ ಸೇರಿ ಇತರೆ ನಿಗಮಗಳಿಗೆ 13,000 ಸಿಬ್ಬಂದಿ ನೇಮಕ, 4,000 ಬಸ್‌ ಖರೀದಿ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

ಕೆಎಸ್‌ಆರ್‌ಟಿಸಿ ಹಾಗೂ ಇತರೆ ನಿಗಮಗಳಿಗೆ 13 ಸಾವಿರ ಸಿಬ್ಬಂದಿ ನೇಮಕ ಹಾಗೂ 4 ಸಾವಿರ ಬಸ್‌ಗಳನ್ನು ಖರೀದಿಸುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ರಾಮಲಿಂಗಾ ರೆಡ್ಡಿ
ರಾಮಲಿಂಗಾ ರೆಡ್ಡಿ

ಬೆಂಗಳೂರು: ಕೆಎಸ್‌ಆರ್‌ಟಿಸಿ ಹಾಗೂ ಇತರೆ ನಿಗಮಗಳಿಗೆ 13 ಸಾವಿರ ಸಿಬ್ಬಂದಿ ನೇಮಕ ಹಾಗೂ 4 ಸಾವಿರ ಬಸ್‌ಗಳನ್ನು ಖರೀದಿಸುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಕೆಎಸ್‌ಆರ್‌ಟಿಸಿ ಎಸ್‌ಸಿ/ಎಸ್‌ಟಿ ಅಧಿಕಾರಿಗಳ ಮತ್ತು ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ಶನಿವಾರ ನಡೆದ ಡಾ. ಬಿಆರ್ ಅಂಬೇಡ್ಕರ್ ಜನ್ಮ ದಿನಾಚರಣೆ ಸಮಾರಂಭದಲ್ಲಿ ಅವರು ಮಾತನಾಡಿದರು. 

ಸದ್ಯ ಎಲ್ಲಾ ನಿಗಮಗಳಲ್ಲಿ 11,000 ಸಿಬ್ಬಂದಿ ನಿವೃತ್ತಿ ಹೊಂದಿದ್ದು, ಕಳೆದ ಏಳು ವರ್ಷಗಳಿಂದ ಚಾಲಕರು, ಕಂಡಕ್ಟರ್‌ಗಳು ಮತ್ತು ಮೆಕಾನಿಕ್‌ಗಳ ನೇಮಕಾತಿ ನಡೆದಿಲ್ಲ ಎಂದು ರೆಡ್ಡಿ ಹೇಳಿದರು.

'ಹೊಸ ಬಸ್‌ಗಳನ್ನು ಖರೀದಿಸದ ಕಾರಣ, ಬಸ್ ಮಾರ್ಗಗಳ ಸಂಖ್ಯೆಯಲ್ಲೂ ಕಡಿಮೆಯಾಗಿದೆ. ನಾವು ಸಿಬ್ಬಂದಿ ನೇಮಕಾತಿ ಮತ್ತು ಬಸ್‌ಗಳ ಖರೀದಿಯನ್ನು ಪ್ರಾರಂಭಿಸಿದ್ದೇವೆ' ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com