ಅರಣ್ಯ ಭೂಮಿ ಒತ್ತುವರಿ ತೆರವು; ಬಿಜೆಪಿ ಸಂಸದ, ಜಿಲ್ಲಾಧ್ಯಕ್ಷರ ವಿರುದ್ಧ ಪ್ರಕರಣ, ವಿಷ ಕುಡಿದ ಇಬ್ಬರು ಮಹಿಳೆಯರು

ನರಮಾಕಲಹಳ್ಳಿ ಮತ್ತು ಪಾಳ್ಯ ಗ್ರಾಮಗಳಲ್ಲಿ ಶನಿವಾರ ಅರಣ್ಯ ಇಲಾಖೆ ಅಧಿಕಾರಿಗಳು ನಡೆಸುತ್ತಿದ್ದ ಒತ್ತುವರಿ ತೆರವು ಕಾರ್ಯಾಚರಣೆಯನ್ನು ತಡೆದಿದ್ದಕ್ಕಾಗಿ ಕೋಲಾರದ ಬಿಜೆಪಿ ಸಂಸದ ಎಸ್‌ ಮುನಿಸ್ವಾಮಿ ಹಾಗೂ ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ. ವೇಣುಗೋಪಾಲ್‌ ವಿರುದ್ಧ ಪ್ರಕರಣ ದಾಖಲಾಗಿದ್ದು, 15 ಮಂದಿಯನ್ನು ಬಂಧಿಸಲಾಗಿದೆ.
ಭಾನುವಾರ ಶ್ರೀನಿವಾಸಪುರದಲ್ಲಿ ಭದ್ರತಾ ಕರ್ತವ್ಯಕ್ಕೆ ತಮ್ಮ ಅಧಿಕಾರಿಗಳಿಗೆ ಸೂಚನೆ ನೀಡುತ್ತಿರುವ ಕೋಲಾರ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ್.
ಭಾನುವಾರ ಶ್ರೀನಿವಾಸಪುರದಲ್ಲಿ ಭದ್ರತಾ ಕರ್ತವ್ಯಕ್ಕೆ ತಮ್ಮ ಅಧಿಕಾರಿಗಳಿಗೆ ಸೂಚನೆ ನೀಡುತ್ತಿರುವ ಕೋಲಾರ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ್.
Updated on

ಕೋಲಾರ: ನರಮಾಕಲಹಳ್ಳಿ ಮತ್ತು ಪಾಳ್ಯ ಗ್ರಾಮಗಳಲ್ಲಿ ಶನಿವಾರ ಅರಣ್ಯ ಇಲಾಖೆ ಅಧಿಕಾರಿಗಳು ನಡೆಸುತ್ತಿದ್ದ ಒತ್ತುವರಿ ತೆರವು ಕಾರ್ಯಾಚರಣೆಯನ್ನು ತಡೆದಿದ್ದಕ್ಕಾಗಿ ಕೋಲಾರದ ಬಿಜೆಪಿ ಸಂಸದ ಎಸ್‌ ಮುನಿಸ್ವಾಮಿ ಹಾಗೂ ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ. ವೇಣುಗೋಪಾಲ್‌ ವಿರುದ್ಧ ಪ್ರಕರಣ ದಾಖಲಾಗಿದ್ದು, 15 ಮಂದಿಯನ್ನು ಬಂಧಿಸಲಾಗಿದೆ.

ಅರಣ್ಯಾಧಿಕಾರಿಗಳು ಮತ್ತು ಅರ್ಥ್‌ಮೂವರ್ ಯಂತ್ರದ ಚಾಲಕನ ದೂರಿನ ಆಧಾರದ ಮೇಲೆ ಮೂರು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಸರ್ಕಾರಿ ಅಧಿಕಾರಿಗಳ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿ, ಕೊಲೆ ಯತ್ನ ಹಾಗೂ ಅರಣ್ಯ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಕೋಲಾರ ಎಸ್‌ಪಿ ಎಂ ನಾರಾಯಣ್ ತಿಳಿಸಿದ್ದಾರೆ.

ಮುನಿಸ್ವಾಮಿ ಎರಡು ಪ್ರಕರಣಗಳಲ್ಲಿ ಪ್ರಮುಖ ಆರೋಪಿಯಾಗಿದ್ದು, ವೇಣುಗೋಪಾಲ್ ಎರಡನೇ ಆರೋಪಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸ್ಥಳದಲ್ಲಿ ಬಿಗಿ ಭದ್ರತೆಯನ್ನು ಒದಗಿಸಲಾಗಿದೆ. 

ಇಬ್ಬರು ಮಹಿಳೆಯರು ಆತ್ಮಹತ್ಯೆಗೆ ಯತ್ನ

ಈ ನಡುವೆ ಅಮಾಯಕರ ಕುಟುಂಬ ಸದಸ್ಯರ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಬಂಧಿಸಲಾಗಿದೆ ಎಂದು ಆರೋಪಿಸಿ ಸಹೋದರಿಯರಿಬ್ಬರು ಕ್ರಿಮಿನಾಶಕ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇವರಲ್ಲಿ ಒಬ್ಬರನ್ನು ಮಾಜಿ ಎಪಿಎಂಸಿ ಅಧ್ಯಕ್ಷೆ ಶ್ಯಾಮಲಮ್ಮ ಎಂದು ಗುರುತಿಸಲಾಗಿದೆ. ಇಬ್ಬರನ್ನೂ ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ಆಸ್ಪತ್ರೆಗೆ ಭೇಟಿ ನೀಡಿದ ಮುನಿಸ್ವಾಮಿ, ಕಾಂಗ್ರೆಸ್ ಸರ್ಕಾರ ರೈತರ ಹಿತಾಸಕ್ತಿಗೆ ವಿರುದ್ಧವಾಗಿ ಕೆಲಸ ಮಾಡುತ್ತಿದೆ ಮತ್ತು ಅವರ ಬೆಳೆ ನಾಶಪಡಿಸುತ್ತಿದೆ. ಸಂತ್ರಸ್ತ ರೈತರ ಬಳಿ ಕಳೆದ 40 ವರ್ಷಗಳಿಂದ ಜಮೀನು ಹೊಂದಿರುವುದಾಗಿ ತೋರಿಸಲು ಮಂಜೂರಾತಿ ಪ್ರಮಾಣ ಪತ್ರ, ಆರ್‌ಟಿಸಿ ಮತ್ತಿತರ ಸಂಬಂಧಿತ ದಾಖಲೆಗಳಿವೆ. ಯಾವುದೇ ಪಕ್ಷ ಭೇದವಿಲ್ಲದೆ ಎಲ್ಲ ರಾಜಕೀಯ ಮುಖಂಡರು ರೈತರಿಗೆ ಆಗಿರುವ ಅನ್ಯಾಯದ ವಿರುದ್ಧ ಪ್ರತಿಭಟಿಸಬೇಕು ಎಂದರು.

ಪಕ್ಷದ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ವಿಷಯ ತಿಳಿಸಿರುವುದಾಗಿ ಮುನಿಸ್ವಾಮಿ ತಿಳಿಸಿದ್ದಾರೆ. ಪಕ್ಷದ ಇತರ ನಾಯಕರಿಗೂ ಮಾಹಿತಿ ನೀಡಲಾಗಿದೆ ಎಂದು ಅವರು ಹೇಳಿದರು. 

ಕಳೆದ ಕೆಲವು ದಿನಗಳಿಂದ ನೂರಾರು ಎಕರೆ ಅರಣ್ಯ ಭೂಮಿ ಒತ್ತುವರಿ ತೆರವಿಗೆ ಅರಣ್ಯ ಇಲಾಖೆ ಚಾಲನೆ ನೀಡಿತ್ತು. ಮುನಿಸ್ವಾಮಿ ಶನಿವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿದಾಗ ಸಿಟ್ಟಿಗೆದ್ದ ಗ್ರಾಮಸ್ಥರು ಮಣ್ಣು ತೆಗೆಯುವ ಯಂತ್ರಗಳ ಗಾಜುಗಳಿಗೆ ಹಾನಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com