ರಾಜ್ಯಾದ್ಯಂತ 7 ಸಾವಿರಕ್ಕೂ ಅಧಿಕ ಡೆಂಘಿ ಪ್ರಕರಣ: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯಾದ್ಯಂತ ಕಳೆದ ಕೆಲವು ದಿನಗಳ ಅವಧಿಯಲ್ಲಿ ಸುಮಾರು 7 ಸಾವಿರಕ್ಕೂ ಅಧಿಕ ಡೆಂಘಿ ಪ್ರಕರಣಗಳು ವರದಿಯಾಗಿವೆ, ಇದರಲ್ಲಿ 4 ಸಾವಿರಕ್ಕೂ ಅಧಿಕ ಪ್ರಕರಣಗಳು ಬೆಂಗಳೂರು ನಗರವೊಂದರಲ್ಲೇ ಕಂಡುಬಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: ರಾಜ್ಯಾದ್ಯಂತ ಕಳೆದ ಕೆಲವು ದಿನಗಳ ಅವಧಿಯಲ್ಲಿ ಸುಮಾರು 7 ಸಾವಿರಕ್ಕೂ ಅಧಿಕ ಡೆಂಘಿ ಪ್ರಕರಣಗಳು ವರದಿಯಾಗಿವೆ, ಇದರಲ್ಲಿ 4 ಸಾವಿರಕ್ಕೂ ಅಧಿಕ ಪ್ರಕರಣಗಳು ಬೆಂಗಳೂರು ನಗರವೊಂದರಲ್ಲೇ ಕಂಡುಬಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಮಾಹಿತಿ ನೀಡಿರುವ ಮುಖ್ಯಮಂತ್ರಿ, ಡೆಂಘಿ ಕ್ಷಿಪ್ರಗತಿಯಲ್ಲಿ ವ್ಯಾಪಿಸುತ್ತಿರುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾತನಾಡಿ, ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸೊಳ್ಳೆ ನಿಯಂತ್ರಣಕ್ಕೆ ಜೌಷಧ ಸಿಂಪಡಣೆ, ನೀರು ಶೇಖರಣೆಯಾಗುವ ಸ್ಥಳಗಳನ್ನು ಗುರುತಿಸಿ ಸ್ವಚ್ಚಗೊಳಿಸುವುದು ಸೇರಿದಂತೆ ಸೊಳ್ಳೆ ನಿಯಂತ್ರಣಕ್ಕೆ ಪರಿಣಾಮಕಾರಿ ಮಾರ್ಗಗಳನ್ನು ಅನುಸರಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಮನೆ ಸುತ್ತಮುತ್ತಲಿನ ಪರಿಸರದ ಸ್ವಚ್ಚತೆಗೆ ಆದ್ಯತೆ ನೀಡಿ, ಸೊಳ್ಳೆ ಕಡಿತದ ಬಗ್ಗೆ ಎಚ್ಚರಿಕೆ ವಹಿಸಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿರುವ ಮುಖ್ಯಮಂತ್ರಿ, ಡೆಂಘಿ ಬಗ್ಗೆ ಭಯ ಬೇಡ, ಜಾಗೃತೆಯಿರಲಿ ಎಂದಿದ್ದಾರೆ.

 ಡೆಂಗ್ಯೂ ನಿಯಂತ್ರಣ ಮತ್ತು ಪರಿಣಾಮಕಾರಿ ಮೇಲ್ವಿಚಾರಣೆಗಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ರೋಗ ಕಣ್ಗಾವಲು ಡ್ಯಾಶ್‌ಬೋರ್ಡ್ ಮತ್ತು ಮೊಬೈಲ್ ಅಪ್ಲಿಕೇಶನ್ ಬಿಡುಗಡೆ ಮಾಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com