ಬಿಬಿಎಂಪಿ ಅಗ್ನಿ ದುರಂತ: ಡಿ ಗ್ರೂಪ್ ಸಿಬ್ಬಂದಿ ಹರಕೆಯ ಕುರಿಯಾಗುವ ಸಾಧ್ಯತೆ?

ಕಳೆದ ತಿಂಗಳು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮುಖ್ಯ ಎಂಜಿನಿಯರ್ ಸಿಎಂ ಶಿವಕುಮಾರ್ ಮೃತಪಟ್ಟು, ಎಂಟು ಮಂದಿ ಗಾಯಗೊಂಡಿದ್ದಕ್ಕೆ ಗ್ರೂಪ್ ಡಿ ಸಿಬ್ಬಂದಿಯನ್ನು ಹೊಣೆಗಾರರನ್ನಾಗಿ ಮಾಡುವ ಸಾಧ್ಯತೆ ಇದೆ ಎಂದು ಪೊಲೀಸ್ ಮತ್ತು ಪಾಲಿಕೆ ಮೂಲಗಳು ತಿಳಿಸಿವೆ.
ಬಿಬಿಎಂಪಿ ಕಚೇರಿಯಲ್ಲಿ ಬೆಂಕಿ
ಬಿಬಿಎಂಪಿ ಕಚೇರಿಯಲ್ಲಿ ಬೆಂಕಿ

ಬೆಂಗಳೂರು: ಕಳೆದ ತಿಂಗಳು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮುಖ್ಯ ಎಂಜಿನಿಯರ್ ಸಿಎಂ ಶಿವಕುಮಾರ್ ಮೃತಪಟ್ಟು, ಎಂಟು ಮಂದಿ ಗಾಯಗೊಂಡಿದ್ದಕ್ಕೆ ಗ್ರೂಪ್ ಡಿ ಸಿಬ್ಬಂದಿಯನ್ನು ಹೊಣೆಗಾರರನ್ನಾಗಿ ಮಾಡುವ ಸಾಧ್ಯತೆ ಇದೆ ಎಂದು ಪೊಲೀಸ್ ಮತ್ತು ಪಾಲಿಕೆ ಮೂಲಗಳು ತಿಳಿಸಿವೆ.

ಪಾಲಿಕೆಯ ಕ್ವಾಲಿಟಿ ಅಶ್ಯೂರೆನ್ಸ್ ಲ್ಯಾಬೋರೇಟರಿಯಲ್ಲಿ ಬೆಂಕಿ ಕಾಣಿಸಿಕೊಂಡ ಕೂಡಲೇ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಆ ಸಮಯದಲ್ಲಿ ದಹಿಸುವ ರಾಸಾಯನಿಕಗಳನ್ನು ನಿರ್ವಹಿಸುತ್ತಿದ್ದ ಗ್ರೂಪ್ ಡಿ ಕೆಲಸಗಾರನಿಂದ ತಪ್ಪಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಕೇಂದ್ರ ವಿಭಾಗದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆತನ ನಿರ್ಲಕ್ಷ್ಯವೇ ಅಗ್ನಿ ದುರಂತಕ್ಕೆ ಕಾರಣ ಎಂದು ಹೇಳಲಾಗಿದೆ.

ಗ್ರೂಪ್ ಡಿ ಸಿಬ್ಬಂದಿ ಈ ಕೆಲಸ ಮಾಡಬಾರದು ಎಂದು ಅಧಿಕಾರಿ ಹೇಳಿದರು. ಆದರೆ, ಹಿರಿಯರ ಸೂಚನೆ ಮೇರೆಗೆ ಈ ಕೆಲಸ ನಿರ್ವಹಿಸಿದ್ದೇನೆ ಎಂದು ಸಿಬ್ಬಂದಿ ಸಮರ್ಥಿಸಿಕೊಂಡಿದ್ದಾರೆ. ಗಾಯಾಳು ಸಿಬ್ಬಂದಿ ಸಂಪೂರ್ಣ ಚೇತರಿಸಿಕೊಂಡ ನಂತರ ಅವರ ಹೇಳಿಕೆಯನ್ನು ಪಡೆದು ವರದಿಗೆ ಸೇರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಬಿಬಿಎಂಪಿ ಇಂಜಿನಿಯರ್ ಇನ್ ಚೀಫ್ ಬಿಎಸ್ ಪ್ರಹ್ಲಾದ್ ಅವರ ವರದಿಯಲ್ಲಿಯೂ ಪ್ರಯೋಗಾಲಯದ ನೆಲ ಮಹಡಿಯಲ್ಲಿ ಕೆಲಸ ಮಾಡುವ ಅಧಿಕಾರಿಗಳ ನಿರ್ಲಕ್ಷ್ಯವು ಅಗ್ನಿ ದುರಂತಕ್ಕೆ ಕಾರಣವಾಗಿದೆ ಎಂದು ಹೇಳಿದೆ ಎಂಬುದಾಗಿ ಇಂಜಿನಿಯರಿಂಗ್ ವಿಭಾಗದ ಬಿಬಿಎಂಪಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರ್‌ವಿ ಇಂಜಿನಿಯರಿಂಗ್ ಕಾಲೇಜಿನ ರಾಸಾಯನಿಕ ತಜ್ಞ ಅಂಜನಪ್ಪ ಅವರು ಪ್ರಯೋಗಾಲಯದಲ್ಲಿ ಪತ್ತೆಯಾದ ರಾಸಾಯನಿಕ ಅಂಶಗಳ ಕುರಿತು ತಮ್ಮ ವರದಿ ನೀಡಲಿದ್ದಾರೆ. ಬಿಬಿಎಂಪಿ ತನ್ನ ವರದಿಯನ್ನು ಸೆಪ್ಟೆಂಬರ್ 15 ರಂದು ರಾಜ್ಯ ಸರ್ಕಾರಕ್ಕೆ ಸಲ್ಲಿಸಲಿದೆ.  ಡಿ ಗ್ರೂಪ್  ಕೆಲಸಗಾರನ ನಿರ್ಲಕ್ಷ್ಯದ ಕಾರಣ ಬೆಂಕಿ ಅನಾಹುತಕ್ಕೆ ಕಾರಣವಾಗಿದೆ ಎಂದು ಬಿಬಿಎಂಪಿಯ ಆಂತರಿಕ ವಿಚಾರಣೆ ಕೂಡ  ವರದಿ ಸಲ್ಲಿಸಿದೆ  ಬಿಬಿಎಂಪಿ ಅಧಿಕಾರಿಯೊಬ್ಬರು ಹೇಳಿದರು.

ಆಗಸ್ಟ್ 11ರಂದು ಸಂಜೆ 5 ಗಂಟೆ ಸುಮಾರಿಗೆ ಪ್ರಯೋಗಾಲಯದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಒಂಬತ್ತು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. ಆಗಸ್ಟ್ 12 ರಂದು ಪಾಲಿಕೆಯ ಇಬ್ಬರು ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ಗಳು ಮತ್ತು ಗ್ರೂಪ್ ಡಿ ಕಾರ್ಯಕರ್ತನನ್ನು ಬಂಧಿಸಲಾಯಿತು. ಅವರನ್ನು  ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಬೆಂಕಿ ಅವಘಡಕ್ಕೆ ಸಂಬಂಧಿಸಿದಂತೆ ಪ್ರಹ್ಲಾದ್ ಹಲಸೂರು ಗೇಟ್ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ಸಂಬಂಧ ತನಿಖೆಗಳು ಇನ್ನೂ ನಡೆಯುತ್ತಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com