

ಬೆಂಗಳೂರು: ನಮ್ಮಲ್ಲಿ ಮಳೆ ಕೊರತೆಯಿಂದಾಗಿ ಅಗತ್ಯ ಪ್ರಮಾಣದ ನೀರಿಲ್ಲ. ನಾವು ಕುಡಿಯುವ ಉದ್ದೇಶಕ್ಕೆ ನೀರು ಹೊಂದಿಸಿಕೊಳ್ಳುವುದಕ್ಕೆ ಕಷ್ಟವಿದೆ, ತಮಿಳುನಾಡಿಗೆ ನೀರು ಬಿಡುವ ಸ್ಥಿತಿಯಲ್ಲಿ ನಾವು ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ರಾಜ್ಯದಲ್ಲಿ ನೀರು ಇಲ್ಲದೇ ಇರುವ ವಾಸ್ತವಾಂಶವನ್ನು ನಾವು ತಿಳಿಸುತ್ತೇವೆ. ನಾವು ಕುಡಿಯುವ ನೀರು ಹೊಂದಿಸಿಕೊಳ್ಳಲು ಅವಕಾಶ ನೀಡಿ ಎಂದು ಪ್ರಾಧಿಕಾರದ ಮುಂದೆ ಮನವಿ ಮಾಡುತ್ತೇವೆ” ಎಂದು ಡಿಸಿಎಂ ಹೇಳಿದ್ದಾರೆ.
12ರ ನಂತರ ನೀರು ನಿಲ್ಲಿಸುತ್ತೀರಾ ಎಂಬ ಪತ್ರಕರ್ತರ ಪ್ರಶ್ನೆಗೆ, “ಈಗ ನೀರು ಹೋಗುತ್ತಿಲ್ಲ, ಇನ್ನು ಬಂದ್ ಮಾಡುವುದು ಎಲ್ಲಿ. ಮಳೆ ಬರಲಿ ಎಂದು ನೀವೆಲ್ಲರೂ ಪ್ರಾರ್ಥನೆ ಮಾಡಿ” ಎಂದು ಹೇಳಿದರು.
ತಮಿಳುನಾಡಿಗೆ ಮುಂದಿನ 15 ದಿನಗಳವರೆಗೂ ಪ್ರತಿದಿನ 5,000 ಕ್ಯೂಸೆಕ್ಸ್ ನೀರು ಹರಿಸಬೇಕೆಂದು ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಕರ್ನಾಟಕಕ್ಕೆ ಸೂಚನೆ ನೀಡಿದೆ. ಈ ಬೆನ್ನಲ್ಲೇ ಡಿಸಿಎಂ ಹೇಳಿಕೆ ನೀಡಿದ್ದಾರೆ.