ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ತಮಿಳುನಾಡು ಬಸ್‌ಗಳ ಮೇಲೆ ಕಲ್ಲು ತೂರಾಟ, ಆರೋಪಿಗಳಿಗಾಗಿ ಪೊಲೀಸರ ಹುಡುಕಾಟ!

ಬೆಂಗಳೂರಿನಲ್ಲಿ ತಮಿಳುನಾಡು ರಸ್ತೆ ಸಾರಿಗೆ ಸಂಸ್ಥೆಯ ಒಡೆತನದ ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆದಿದ್ದು, ಆರೋಪಿಗಳಿಗಾಗಿ ಕರ್ನಾಟಕ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಬೆಂಗಳೂರು: ಬೆಂಗಳೂರಿನಲ್ಲಿ ತಮಿಳುನಾಡು ರಸ್ತೆ ಸಾರಿಗೆ ಸಂಸ್ಥೆಯ ಒಡೆತನದ ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆದಿದ್ದು, ಆರೋಪಿಗಳಿಗಾಗಿ ಕರ್ನಾಟಕ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ರಾಜ್ಯ ರಾಜಧಾನಿಯ ಚಾಮರಾಜಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಸ್ಯಾಟಲೈಟ್ ಬಸ್ ಟರ್ಮಿನಲ್ ಬಳಿ ಸೋಮವಾರ ಮಧ್ಯರಾತ್ರಿ ಈ ಘಟನೆ ನಡೆದಿದೆ.

ಈ ಸಂಬಂಧ ಬಸ್ ಚಾಲಕ ಗುಣಶೇಖರನ್ ದೂರು ದಾಖಲಿಸಿದ್ದರು. ದುಷ್ಕರ್ಮಿಗಳು ಬಸ್‌ಗಳ ಗಾಜುಗಳಿಗೆ ಹಾನಿ ಮಾಡಿದ್ದಾರೆ. ಘಟನೆ ನಡೆದಾಗ ಭಾರತ್ ಪೆಟ್ರೋಲ್ ಬಂಕ್ ಬಳಿ ಬಸ್‌ಗಳು ನಿಂತಿದ್ದವು.

ಆರೋಪಿಗಳ ಪತ್ತೆಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸುತ್ತಿದ್ದಾರೆ. ನಗರದಲ್ಲಿ ಖಾಸಗಿ ಸಾರಿಗೆ ಸಂಸ್ಥೆಗಳು ಬಂದ್ ಅನ್ನು ಹಿಂಪಡೆದ ಬಳಿಕ ಈ ಘಟನೆ ನಡೆದಿದೆ.

ಸಂತ್ರಸ್ತರು ಸಮೀಪದ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸುವಂತೆ ಪೊಲೀಸ್ ಆಯುಕ್ತ ಬಿ. ದಯಾನಂದ ಮನವಿ ಮಾಡಿದ್ದಾರೆ. ಈ ಸಂಬಂಧ ತನಿಖೆ ನಡೆಯುತ್ತಿದೆ.

Related Stories

No stories found.

Advertisement

X
Kannada Prabha
www.kannadaprabha.com