ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ: ಸೆಪ್ಟೆಂಬರ್ 15 ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಈ ವರ್ಷವೂ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವ ಕುರಿತ ಅರ್ಜಿಯ ವಿಚಾರಣೆಯನ್ನು ಧಾರವಾಡ ಹೈಕೋರ್ಟ್ ಪೀಠ ಸೆಪ್ಟೆಂಬರ್ 15ಕ್ಕೆ ಮುಂದೂಡಿದೆ.
ಹುಬ್ಬಳ್ಳಿ ಈದ್ಗಾ ಮೈದಾನ
ಹುಬ್ಬಳ್ಳಿ ಈದ್ಗಾ ಮೈದಾನ

ಧಾರವಾಡ: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಈ ವರ್ಷವೂ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವ ಕುರಿತ ಅರ್ಜಿಯ ವಿಚಾರಣೆಯನ್ನು ಧಾರವಾಡ ಹೈಕೋರ್ಟ್ ಪೀಠ ಸೆಪ್ಟೆಂಬರ್ 15ಕ್ಕೆ ಮುಂದೂಡಿದೆ.

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಹಬ್ಬ ಆಚರಣೆಗೆ ತಡೆ ಕೋರಿ ಅಂಜುಮನ್ ಎ ಇಸ್ಲಾಂ ಸಂಘಟನೆ ಧಾರವಾಡ ಹೈಕೋರ್ಟ್ ಪೀಠದ ಮೊರೆ ಹೋಗಿದ್ದು, ಈ ಕುರಿತು ಹುಬ್ಬಳ್ಳಿ ಅಂಜುಮನ್ ಇಸ್ಲಾಂ ಸಂಸ್ಥೆ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್ ಪೀಠ, ಸೆ.15ಕ್ಕೆ ಮುಂದೂಡಿದೆ. ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಕಳೆದ ಬಾರಿಯಂತೆ ಈ ಬಾರಿಯೂ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಬೇಕು ಎಂದು ಹುಬ್ಬಳ್ಳಿಯ ಹಲವು ಸಂಘಟನೆಗಳು ಮಹಾನಗರ ಪಾಲಿಕೆಗೆ ಮನವಿ ಮಾಡಿದ್ದವು. 

ಅವುಗಳನ್ನು ಪರಿಶೀಲನೆ ಮಾಡಿದ್ದ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಅವರು, ಆಗಸ್ಟ್ 31ರಂದು ಜರುಗಿದ ಸಾಮಾನ್ಯ ಸಭೆಯಲ್ಲಿ ಪ್ರಸ್ತಾವನೆ ಮಾಡಿ, ಮುಂದಿನ ಐದು ವರ್ಷಗಳ ಅವಧಿಗೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡುವ ನಿರ್ಧಾರ ಕೈಗೊಂಡು ಠರಾವ ಪಾಸ್ ಮಾಡಿ, ಅದನ್ನು ಜಾರಿಗೊಳಿಸಲು ಪಾಲಿಕೆ ಆಯುಕ್ತರಿಗೆ ಸೂಚಿಸಲಾಗಿತ್ತು.

ಪಾಲಿಕೆಯ ಈ ನಿರ್ಧಾರವನ್ನು ಪ್ರಶ್ನಿಸಿ ಹುಬ್ಬಳ್ಳಿಯ ಅಂಜುಮನ್ ಸಂಸ್ಥೆಯ ಆಡಳಿತ ಮಂಡಳಿ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದೆ. ಗುರುವಾರ ನ್ಯಾ. ಸಚಿನ್ ಮಗದುಮ್ ಅವರಿಂದ ಏಕಸದಸ್ಯ ಪೀಠದ ಎದುರು ವಿಚಾರಣೆ ನಡೆಯಿತು. ವಾದ- ಪ್ರತಿವಾದ ಆಲಿಸಿದ ನ್ಯಾಯಪೀಠ, ಪ್ರಕರಣದ ಕುರಿತು ಹೆಚ್ಚಿನ ವಿಚಾರಣೆ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟು, ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿತು.

ಕಳೆದ ವರ್ಷ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ ಆಚರಣೆಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿತ್ತು. ಅಂಜುಮನ್-ಇ-ಇಸ್ಲಾಂ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ಆದೇಶದಲ್ಲಿ, ಮೈದಾನವು ಹುಬ್ಬಳ್ಳಿ-ಧಾರವಾಡ ನಗರಸಭೆಯ ಆಸ್ತಿಯಾಗಿದ್ದು, ಅವರು ಬಯಸಿದವರಿಗೆ ಭೂಮಿಯನ್ನು ನೀಡಬಹದು. ಕಳೆದ ವರ್ಷ ಮೊದಲ ಬಾರಿಗೆ ವಿವಾದಿತ ಮೈದಾನದಲ್ಲಿ ಹಿಂದೂ ಹಬ್ಬವನ್ನು ಆಚರಿಸಲಾಗಿತ್ತು.

ಹುಬ್ಬಳ್ಳಿಯ ಈದ್ಗಾ ಮೈದಾನವು 2010 ರವರೆಗೂ ದಶಕಗಳಿಂದ ವಿವಾದದಲ್ಲಿ ಸಿಲುಕಿತ್ತು, ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಈ ಮೈದಾನವು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವಿಶೇಷ ಆಸ್ತಿಯಾಗಿದೆ. 1921 ರಲ್ಲಿ, ಮೈದಾನವನ್ನು ಇಸ್ಲಾಮಿಕ್ ಸಂಸ್ಥೆ ಅಂಜುಮನ್-ಇ-ಇಸ್ಲಾಂಗೆ 999 ವರ್ಷಗಳ ಕಾಲ ಪ್ರಾರ್ಥನೆ ನಡೆಸಲು ಗುತ್ತಿಗೆ ನೀಡಲಾಯಿತು. ಸ್ವಾತಂತ್ರ್ಯದ ನಂತರ, ಆವರಣದಲ್ಲಿ ಅನೇಕ ಅಂಗಡಿಗಳನ್ನು ತೆರೆಯಲಾಯಿತು.

ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಯಿತು ಮತ್ತು ಸುದೀರ್ಘ ವ್ಯಾಜ್ಯ ಪ್ರಕ್ರಿಯೆಯು ಪ್ರಾರಂಭವಾಯಿತು, ಇದು ಸುಪ್ರೀಂ ಕೋರ್ಟ್ ತೀರ್ಪಿನ ನಂತರ 2010 ರಲ್ಲಿ ಈದ್ಗಾ ಮೈದಾನ ಸ್ಥಗಿತಗೊಂಡಿತು. ವರ್ಷಕ್ಕೆ ಎರಡು ಬಾರಿ ಪ್ರಾರ್ಥನೆ ಸಲ್ಲಿಸಲು ಮತ್ತು ನೆಲದ ಮೇಲೆ ಯಾವುದೇ ಶಾಶ್ವತ ಕಟ್ಟಡವನ್ನು ನಿರ್ಮಿಸದಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com