ಆಜ್ ತಕ್ ಕನ್ಸಲ್ಟಿಂಗ್ ಎಡಿಟರ್ ಸುಧೀರ್ ಚೌಧರಿ ಬಂಧಿಸುವಂತಿಲ್ಲ, ಆದರೆ ತನಿಖೆ ಅಗತ್ಯವಿದೆ: ಹೈಕೋರ್ಟ್

ರಾಜ್ಯ ಸರ್ಕಾರದ ಯೋಜನೆ ಕುರಿತು ತಪ್ಪು ಮಾಹಿತಿ ಹರಡಿದ ಆರೋಪ ಎದುರಿಸುತ್ತಿರುವ ಆಜ್ ತಕ್ ಸುದ್ದಿ ವಾಹಿನಿಯ ಕನ್ಸಲ್ಟಿಂಗ್ ಎಡಿಟರ್ ಸುಧೀರ್ ಚೌಧರಿ ಅವರನ್ನು ಬಂಧಿಸದಂತೆ ಕರ್ನಾಟಕ ಹೈಕೋರ್ಟ್‌ ಪೊಲೀಸರಿಗೆ ನಿರ್ದೇಶನ...
ಸುಧೀರ್ ಚೌಧರಿ
ಸುಧೀರ್ ಚೌಧರಿ

ಬೆಂಗಳೂರು: ರಾಜ್ಯ ಸರ್ಕಾರದ ಯೋಜನೆ ಕುರಿತು ತಪ್ಪು ಮಾಹಿತಿ ಹರಡಿದ ಆರೋಪ ಎದುರಿಸುತ್ತಿರುವ ಆಜ್ ತಕ್ ಸುದ್ದಿ ವಾಹಿನಿಯ ಕನ್ಸಲ್ಟಿಂಗ್ ಎಡಿಟರ್ ಸುಧೀರ್ ಚೌಧರಿ ಅವರನ್ನು ಬಂಧಿಸದಂತೆ ಕರ್ನಾಟಕ ಹೈಕೋರ್ಟ್‌ ಪೊಲೀಸರಿಗೆ ನಿರ್ದೇಶನ ನೀಡಿದೆ. ಆದರೆ ಅವರ ವಿರುದ್ಧ ತನಿಖೆಯ ಅಗತ್ಯ ಇದೆ ಎಂದು ಹೇಳಿದೆ.

ಅಲ್ಪಸಂಖ್ಯಾತರಿಗೆ ವಾಣಿಜ್ಯ ವಾಹನ ಖರೀದಿಗೆ ಸಬ್ಸಿಡಿ ನೀಡುವ ರಾಜ್ಯ ಸರ್ಕಾರದ ಯೋಜನೆ ಕುರಿತು ತಪ್ಪು ಮಾಹಿತಿ ಹರಡಿದ ಆರೋಪದ ಮೇಲೆ ಸುಧೀರ್ ಚೌಧರಿ ವಿರುದ್ಧ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಅನ್ನು ಪ್ರಶ್ನಿಸಿ ಚೌಧರಿ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಆರೋಪಿಯ ವಿರುದ್ಧ ತನಿಖೆ ನಡೆಸುವ ಅಗತ್ಯ ಇದೆ. ಆದರೆ ಕಸ್ಟಡಿ ವಿಚಾರಣೆಯ ಅಗತ್ಯವಿಲ್ಲ ಎಂದು ಹೇಳಿ, ವಿಚಾರಣೆಯನ್ನು ಸೆಪ್ಟೆಂಬರ್ 20ಕ್ಕೆ ಮುಂದೂಡಿದೆ.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದ ಸಹಾಯಕ ಆಡಳಿತಾಧಿಕಾರಿ ಶಿವಕುಮಾರ್ ಎಸ್ ನೀಡಿದ ದೂರಿನ ಮೇರೆಗೆ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಚೌಧರಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ ಅವರಿದ್ದ ಏಕಸದಸ್ಯ ಪೀಠ, ವಿಚಾರಣೆ ವೇಳೆ ಪ್ರಾಥಮಿಕ ಹಂತದ ತನಿಖೆ ನಡೆಯಬೇಕಿದೆ ಎಂದು ಹೇಳಿದ್ದಾರೆ.

ಚೌಧರಿ ವಿರುದ್ಧ ಐಪಿಸಿ ಸೆಕ್ಷನ್‌ 505 ಮತ್ತು 153ಎ ಅನ್ವಯ ಪ್ರಕರಣ ದಾಖಲಿಸಲಾಗಿದೆ. ಸುದ್ದಿ ವಾಹಿನಿ ತನ್ನ ಕಾರ್ಯಕ್ರಮದಲ್ಲಿ ತಪ್ಪು ಮಾಹಿತಿ ನೀಡಿದೆ ಎಂದು ರಾಜ್ಯ ಸರ್ಕಾರ ಹೇಳಿರುವ ಹೊರತಾಗಿಯೂ ಅದು ತನ್ನ ಹೇಳಿಕೆಗಳನ್ನು ವಾಪಸ್‌ ಪಡೆದಿಲ್ಲ ಎಂದು ನ್ಯಾಯಮೂರ್ತಿ ಹೇಮಂತ್‌ ಚಂದನ್‌ಗೌಡರ್‌ ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com