ಹುಬ್ಬಳ್ಳಿ ಈದ್ಗಾ ಮೈದಾನ
ಹುಬ್ಬಳ್ಳಿ ಈದ್ಗಾ ಮೈದಾನ

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಹೈಕೋರ್ಟ್ ಅಸ್ತು; ಅಂಜುಮನ್ ಅರ್ಜಿ ವಜಾ

ಹುಬ್ಬಳ್ಳಿಯ ವಿವಾದಿತ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ಗಣೇಶ ಚತುರ್ಥಿ ಹಬ್ಬ ಆಚರಣೆ ವಿರೋಧಿಸಿ ಅಂಜುಮನ್-ಎ-ಇಸ್ಲಾಂ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ಧಾರವಾಡ ಪೀಠ ಶುಕ್ರವಾರ ವಜಾಗೊಳಿಸಿದೆ.

ಹುಬ್ಬಳ್ಳಿ: ಹುಬ್ಬಳ್ಳಿಯ ವಿವಾದಿತ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ಗಣೇಶ ಚತುರ್ಥಿ ಹಬ್ಬ ಆಚರಣೆ ವಿರೋಧಿಸಿ ಅಂಜುಮನ್-ಎ-ಇಸ್ಲಾಂ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ಧಾರವಾಡ ಪೀಠ ಶುಕ್ರವಾರ ವಜಾಗೊಳಿಸಿದೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅನುಮತಿ ನೀಡಿ ನಿರ್ಣಯ ಅಂಗೀಕರಿಸಿರುವುದನ್ನು ವಿರೋಧಿಸಿ ಅಂಜುಮನ್-ಎ-ಇಸ್ಲಾಂ ಹೈಕೋರ್ಟ್ ಗೆ ಮನವಿ ಸಲ್ಲಿಸಿತ್ತು.

ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಿ ಮಹಾನಗರ ಪಾಲಿಕೆ ನಿರ್ಣಯ ಅಂಗೀಕರಿಸಿದೆ. ಆದರೆ, ಇತ್ತೀಚೆಗೆ ಅಧಿಕಾರ ವಹಿಸಿಕೊಂಡ ಪಾಲಿಕೆ ಆಯುಕ್ತರು ಗಣೇಶ ಪ್ರತಿಷ್ಠಾಪನೆಗೆ ಅನುಮತಿ ನೀಡಿಲ್ಲ. ಆಯುಕ್ತರ ನಡೆ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ.

ವಿಶೇಷವೆಂದರೆ, ಕಳೆದ ವರ್ಷ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ ಆಚರಣೆಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿತ್ತು. ಈ ಬಾರಿಯೂ ಹೈಕೋರ್ಟ್ ಅನುಮತಿ ನೀಡಿದೆ.

ಅಂಜುಮನ್-ಎ-ಇಸ್ಲಾಂ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ಹೈಕೋರ್ಟ್, ಮೈದಾನವು ಹುಬ್ಬಳ್ಳಿ-ಧಾರವಾಡ ನಗರಸಭೆಯ ಆಸ್ತಿಯಾಗಿದ್ದು, ಅವರು ಬಯಸಿದವರಿಗೆ ಭೂಮಿಯನ್ನು ನೀಡಬಹುದು ಎಂದು ಹೇಳಿದೆ.

ಅಂಜುಮಾನ್​ ಸಂಸ್ಥೆಯ ಅರ್ಜಿ ವಜಾಗೊಂಡಿರುವ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಹಿಂದೂಪರ ಪರ ಸಂಘಟನೆಯ ಮುಖಂಡರು ಸಿಹಿ ಹಂಚಿ ಸಂಭ್ರಮಿಸಿದರು.

ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಹಾಗೂ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್​ ಸೇರಿದಂತೆ ಹಲವರು ಪರಸ್ಪರ ಸಿಹಿ ಹಂಚಿ ಸಂಭ್ರಮಪಟ್ಟರು.

Related Stories

No stories found.

Advertisement

X
Kannada Prabha
www.kannadaprabha.com