ರಾಜಕಾಲುವೆ ಒತ್ತುವರಿ ಮಾಡಿರುವುದು ನಿಮ್ಮ ಗಮನಕ್ಕೆ ಬಂದಿದೆಯೇ? ಹಾಗಾದರೆ ಫೋಟೋ ಸಮೇತ ಈ ಕಚೇರಿಗಳಿಗೆ ದೂರು ನೀಡಿ...

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾಜಕಾಲುವೆಗಳ ಒತ್ತುವರಿ ಅಥವಾ ಅತಿಕ್ರಮಣ ಗುರುತಿಸಲು ಸಹಾಯ ಮಾಡುವಂತೆ ಸಾರ್ವಜನಿಕರನ್ನು ಮಹಾನಗರ ಪಾಲಿಕೆ ಕೋರಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾಜಕಾಲುವೆಗಳ ಒತ್ತುವರಿ ಅಥವಾ ಅತಿಕ್ರಮಣ ಗುರುತಿಸಲು ಸಹಾಯ ಮಾಡುವಂತೆ ಸಾರ್ವಜನಿಕರನ್ನು ಮಹಾನಗರ ಪಾಲಿಕೆ ಕೋರಿದೆ.

ರಾಜಕಾಲುವೆ ಒತ್ತುವರೆ ಮಾಡಿ ಅಲ್ಲಿ ಕಟ್ಟಡ ನಿರ್ಮಿಸಿರುವುದು ಯಾರಿಗಾದರೂ ತಿಳಿದಿದ್ದರೆ ಅಥವಾ ಗಮನಕ್ಕೆ ಬಂದರೆ ವಲಯಗಳ ಈ ನಿರ್ದಿಷ್ಟ ಕಚೇರಿಗಳ ಅಧಿಕಾರಿಗಳಿಗೆ ದೂರನ್ನು ನೀಡುವಂತೆ ಬಿಬಿಎಂಪಿ ಪತ್ರಿಕಾ ಪ್ರಕಟಣೆ ಹೊರಡಿಸಿದೆ. 

ಇತ್ತೀಚೆಗೆ ಹೈಕೋರ್ಟ್, ರಾಜಕಾಲುವೆಯನ್ನು ಅತಿಕ್ರಮಣ ಮಾಡಿರುವ ಬಗ್ಗೆ ಸಮೀಕ್ಷೆ ನಡೆಸಿ ಗುರುತಿಸಿ 10 ದಿನಗಳ ಒಳಗೆ ವರದಿ ನೀಡುವಂತೆ ಬಿಬಿಎಂಪಿಗೆ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಸಾರ್ವಜನಿಕರ ಸಹಕಾರ ಕೋರಿದೆ. 

ಸಾರ್ವಜನಿಕರು ಅತಿಕ್ರಮಣವಾದ ರಾಜಕಾಲುವೆ ಪ್ರದೇಶವನ್ನು ಸ್ಪಷ್ಟವಾಗಿ ಫೋಟೋ ಸಹಿತ ನಿರ್ದಿಷ್ಟ ಅಧಿಕಾರಿಗಳಿಗೆ ಈ ತಿಂಗಳ 20ರೊಳಗೆ ಕಳುಹಿಸುವಂತೆ ಕೋರಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com