ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಸತ್ಯ ಹೊರಬರಬೇಕು ಎಂದ ಸಿಟಿ ರವಿ

ಹಿಂದುತ್ವವಾದಿ ಚೈತ್ರಾ ಕುಂದಾಪುರ ಅವರು ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೋಟಿ ಕೋಟಿ ಹಣ ಪಡೆದು ವಂಚಿಸಿದ ಪ್ರಕರಣದ ಬಗ್ಗೆ ಸಮಗ್ರ ತನಿಖೆಯಾಗಬೇಕು ಮತ್ತು ಸತ್ಯ ಹೊರಬರಬೇಕು ಎಂದು ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ...
ಸಿ.ಟಿ ರವಿ
ಸಿ.ಟಿ ರವಿ

ಮಂಗಳೂರು: ಹಿಂದುತ್ವವಾದಿ ಚೈತ್ರಾ ಕುಂದಾಪುರ ಅವರು ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೋಟಿ ಕೋಟಿ ಹಣ ಪಡೆದು ವಂಚಿಸಿದ ಪ್ರಕರಣದ ಬಗ್ಗೆ ಸಮಗ್ರ ತನಿಖೆಯಾಗಬೇಕು ಮತ್ತು ಸತ್ಯ ಹೊರಬರಬೇಕು ಎಂದು ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅವರು ಶನಿವಾರ ಹೇಳಿದ್ದಾರೆ.

ಇಂದು ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಟಿ ರವಿ, ಹಣ ಪಡೆದು ಚುನಾವಣೆಯಲ್ಲಿ ಟಿಕೆಟ್ ನೀಡುವ ವ್ಯವಸ್ಥೆ ಬಿಜೆಪಿಯಲ್ಲಿ ಇಲ್ಲ. ಪ್ರಕರಣದ ಬಗ್ಗೆ ಪೊಲೀಸರು ಪಾರದರ್ಶಕ ತನಿಖೆ ನಡೆಸಿ ಸತ್ಯಾಸತ್ಯತೆ ಹೊರತರಬೇಕು ಎಂದರು.

ಬಿಜೆಪಿಗೆ ಹಣವೇ ಮುಖ್ಯವಾಗಿದ್ದರೆ ಪಕ್ಷದ ನೂರಾರು ಬಡ ಕಾರ್ಯಕರ್ತರು ಸಂಸದ ಶಾಸಕರಾಗುತ್ತಿರಲಿಲ್ಲ ಎಂದು ಸಿಟಿ ರವಿ ಹೇಳಿದ್ದಾರೆ.

ಗೋವಿಂದ ಬಾಬು ಪೂಜಾರಿ ಅವರೇ ಬಿಜೆಪಿ ನಾಯಕರ ಜೋತೆ ನೇರವಾಗಿ ಫೋನ್ ಮಾಡಿ ಮಾತನಾಡುವ ಅವಕಾಶ ಇತ್ತು. ಚೈತ್ರಾ ಕುಂದಾಪುರ ಪ್ರಕರಣದಲ್ಲಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರನ್ನು ಮೋಸ‌ ಮಾಡಿದ್ದಾರೆ. ಈ ಪ್ರಕರಣದ ಬಗ್ಗೆ ಸತ್ಯ ಬಹಿರಂಗ ಆಗಬೇಕು, ಸಮಗ್ರ ತನಿಖೆ ಆಗಬೇಕು. ಯಾರೇ ಇದ್ದರೂ ಸೂಕ್ತ ತನಿಖೆ ನಡೆದು ಕ್ರಮ ಆಗಲಿ. ಯಾರದ್ದೋ ಹೆಸರು ಕೇಳಿ ಬರುತ್ತಿದೆ ಅನ್ನೋದು ಬೇರೆ. ಮೊದಲು ಸಮಗ್ರ ತನಿಖೆ ಆಗಲಿ” ಎಂದು ಬಿಜೆಪಿ ನಾಯಕ ಆಗ್ರಹಿಸಿದರು.

ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಭರವಸೆ ನೀಡಿ ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪದ ಮೇಲೆ ಚೈತ್ರಾ ಕುಂದಾಪುರ ಸೇರಿದಂತೆ ಇಬ್ಬರನ್ನು ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com