ಮೈಸೂರಿನ ಎಲ್ಲಾ ಪೊಲೀಸ್ ಠಾಣೆಗಳಲ್ಲಿ 'ಲೋಕಸ್ಪಂದನ ಕ್ಯೂಆರ್ ಕೋಡ್' ವ್ಯವಸ್ಥೆ

ಪೊಲೀಸ್ ಠಾಣೆಗಳನ್ನು ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ  ನಗರ ಪೊಲೀಸರು ಎಲ್ಲಾ ಠಾಣೆಗಳಲ್ಲಿ ‘ಲೋಕ ಸ್ಪಂದನ’ಕ್ಯೂಆರ್ ಕೋಡ್ ವ್ಯವಸ್ಥೆ ಪರಿಚಯಿಸುತ್ತಿದ್ದಾರೆ. ನಗರದ ಎಲ್ಲಾ 18 ಕಾನೂನು ಮತ್ತು ಸುವ್ಯವಸ್ಥೆ ಠಾಣೆಗಳು ಮತ್ತು ಐದು ಸಂಚಾರ ಪೊಲೀಸ್ ಠಾಣೆಗಳಲ್ಲಿ ಕ್ಯೂಆರ್ ಕೋಡ್ ಅನ್ನು ಪ್ರದರ್ಶಿಸಲಾಗುತ್ತದೆ.
ಕೆಆರ್ ಸಂಚಾರ ಠಾಣೆ ಸಾಂದರ್ಭಿಕ ಚಿತ್ರ
ಕೆಆರ್ ಸಂಚಾರ ಠಾಣೆ ಸಾಂದರ್ಭಿಕ ಚಿತ್ರ

ಮೈಸೂರು: ಪೊಲೀಸ್ ಠಾಣೆಗಳನ್ನು ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ  ನಗರ ಪೊಲೀಸರು ಎಲ್ಲಾ ಠಾಣೆಗಳಲ್ಲಿ ‘ಲೋಕ ಸ್ಪಂದನ’ಕ್ಯೂಆರ್ ಕೋಡ್ ವ್ಯವಸ್ಥೆ ಪರಿಚಯಿಸುತ್ತಿದ್ದಾರೆ. ನಗರದ ಎಲ್ಲಾ 18 ಕಾನೂನು ಮತ್ತು ಸುವ್ಯವಸ್ಥೆ ಠಾಣೆಗಳು ಮತ್ತು ಐದು ಸಂಚಾರ ಪೊಲೀಸ್ ಠಾಣೆಗಳಲ್ಲಿ ಕ್ಯೂಆರ್ ಕೋಡ್ ಅನ್ನು ಪ್ರದರ್ಶಿಸಲಾಗುತ್ತದೆ.

ಎಲ್ಲಾ ಪೊಲೀಸ್ ಠಾಣೆಗಳ ಪ್ರವೇಶ ದ್ವಾರದಲ್ಲಿ ಕ್ಯೂಆರ್ ಕೋಡ್ ಅನ್ನು ಪ್ರದರ್ಶಿಸಲಾಗುವುದು ಮತ್ತು ಠಾಣೆಗೆ ಭೇಟಿ ನೀಡುವವರು ಸೇವೆಯ ಬಗ್ಗೆ ತಮ್ಮ ಪ್ರತಿಕ್ರಿಯೆ ನೀಡಬಹುದು. ಈ ಕ್ರಮವು ಪೊಲೀಸರಿಗೆ ಉತ್ತಮ ಸೇವೆ ನೀಡಲು ಮತ್ತು ಸಿಬ್ಬಂದಿ ದಕ್ಷತೆ ಸುಧಾರಿಸುವುದರ ಜೊತೆಗೆ ಪಾರದರ್ಶಕತೆಯನ್ನು ತರಲು ಸಹಾಯಕವಾಗಿದೆ.

ಪೊಲೀಸ್ ಠಾಣೆಗೆ ಬರುವ ಜನರು ಅಥವಾ ದೂರುದಾರರು ತಮ್ಮ ಸೆಲ್‌ಫೋನ್‌ಗಳಲ್ಲಿ ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮಾಡುವ ಮೂಲಕ ಸಿಬ್ಬಂದಿ ವರ್ತನೆ, ದೂರುಗಳನ್ನು ಸ್ವೀಕರಿಸುವುದು, ಪ್ರತಿಕ್ರಿಯೆ ಮತ್ತು ಇತರ ಸಮಸ್ಯೆಗಳ ಕುರಿತು ಪ್ರತಿಕ್ರಿಯೆಯನ್ನು ನೀಡಬಹುದು. ದೂರುಗಳು, ವಿಮರ್ಶೆಗಳು ಅಥವಾ ಕಾಮೆಂಟ್‌ಗಳನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಪರಿಶೀಲಿಸುತ್ತಾರೆ.

ಠಾಣೆಗಳಲ್ಲಿ ಕೋಡ್‌ನೊಂದಿಗೆ 'ಹೆಲ್ಪ್ ಅಸ್ ಹೆಲ್ಪ್ ಯು' ಮತ್ತು 'ನಾವು ಕಾನೂನನ್ನು ಗೌರವಿಸುವವರನ್ನು ಗೌರವಿಸುತ್ತೇವೆ' ಎಂಬ ಅಡಿಬರಹ ಪ್ರದರ್ಶಿಸಲಾಗುತ್ತದೆ. ನಗರದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಶೀಘ್ರದಲ್ಲೇ ಈ ವ್ಯವಸ್ಥೆ ಆರಂಭಿಸಲಾಗುವುದು.

ಸುಧಾರಿತ ತಂತ್ರಜ್ಞಾನವನ್ನು ಬಳಸಿಕೊಂಡು ಪೊಲೀಸ್ ಠಾಣೆಗಳನ್ನು ಬಳಕೆದಾರ ಸ್ನೇಹಿಯಾಗಿಸಲು ಇಲಾಖೆ ಬಯಸುತ್ತದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. "ಜನರಿಂದ ಪ್ರತಿಕ್ರಿಯೆ ಮತ್ತು ಅಭಿಪ್ರಾಯಗಳನ್ನು ಆಧರಿಸಿ, ವ್ಯವಸ್ಥೆಯನ್ನು ಸರಿಪಡಿಸಲು ಪ್ರಯತ್ನಿಸಲಾಗುವುದು" ಎಂದು ಅಧಿಕಾರಿ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com