ಸೆಪ್ಟಂಬರ್ 29 ರವರೆಗೆ ಅಭಿನವ ಹಾಲಶ್ರೀ ಸಿಸಿಬಿ ಕಸ್ಟಡಿಗೆ: ಬೆಂಗಳೂರಿನ 19ನೇ ಎಸಿಎಂಎಂ ನ್ಯಾಯಾಲಯ ಆದೇಶ

ಗೋವಿಂದ ಬಾಬು ರಾಜು ಎಂಬ ಉದ್ಯಮಿಗೆ ಸುಮಾರು 5 ಕೋಟಿ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಮೂರನೇ ಆರೋಪಿ ಅಭಿನವ ಹಾಲಶ್ರೀಯನ್ನು ಸೆ.29ರವರೆಗೆ 10 ದಿನಗಳ ಕಾಲ ಸಿಸಿಬಿ ವಶಕ್ಕೆ ನೀಡಿ ಬೆಂಗಳೂರಿನ 19ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ.
ಅಭಿನವ ಹಾಲಶ್ರೀ(ಸಂಗ್ರಹ ಚಿತ್ರ)
ಅಭಿನವ ಹಾಲಶ್ರೀ(ಸಂಗ್ರಹ ಚಿತ್ರ)

ಬೆಂಗಳೂರು: ಗೋವಿಂದ ಬಾಬು ರಾಜು ಎಂಬ ಉದ್ಯಮಿಗೆ ಸುಮಾರು 5 ಕೋಟಿ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಮೂರನೇ ಆರೋಪಿ ಅಭಿನವ ಹಾಲಶ್ರೀಯನ್ನು ಸೆ.29ರವರೆಗೆ 10 ದಿನಗಳ ಕಾಲ ಸಿಸಿಬಿ ವಶಕ್ಕೆ ನೀಡಿ ಬೆಂಗಳೂರಿನ 19ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ.

ಬೆಂಗಳೂರಿನ 19ನೇ ಎಸಿಎಂಎಂ ನ್ಯಾಯಾಲಯಕ್ಕೆ ಇಂದು ಹಾಲಶ್ರೀಯನ್ನು ಹಾಜರುಪಡಿಸಲಾಗಿತ್ತು. ಹಾಲಶ್ರೀ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಕಾಯ್ದಿರಿಸಿದೆ.

ಒಡಿಶಾದ ಕಟಕ್ ಗೆ ಹೋಗಿದ್ದ ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಹಿರೇಹಡಗಲಿ ಹಾಲಸ್ವಾಮಿ ಮಠದ ಅಭಿನವ ಹಾಲವೀರಪ್ಪ ಸ್ವಾಮೀಜಿಯನ್ನು ಅಲ್ಲಿನ ಸ್ಥಳೀಯ ಪೊಲೀಸರ ನೆರವಿನಿಂದ ನಿನ್ನೆ ಬಂಧಿಸಿದ್ದ ಸಿಸಿಬಿ ಪೊಲೀಸರು ಕೆಂಪೇಗೌಡ ಏರ್ ಪೋರ್ಟ್ ಮೂಲಕ ನಗರಕ್ಕೆ ಕರೆತಂದಿದ್ದರು.

ಖುಷಿಯಿಂದ ನಕ್ಕ ಚೈತ್ರಾ ಕುಂದಾಪುರ: ಬೆಂಗಳೂರಿನ 19ನೇ ಎಸಿಎಂಎಂ ನ್ಯಾಯಾಲಯದ ಎದುರು ಇಂದು ಪೊಲೀಸರು ವಿಚಾರಣೆಗೆ ಸ್ವಾಮೀಜಿಯನ್ನು ಹಾಜರುಪಡಿಸಿದ್ದರು. ನಿನ್ನೆ ಸ್ವಾಮೀಜಿಯ ಬಂಧನವಾಗುತ್ತಿದ್ದಂತೆ ಪ್ರಕರಣದ ಎ1 ಆರೋಪಿ ಚೈತ್ರಾ ಕುಂದಾಪುರ ಸಿಸಿಬಿ ನ್ಯಾಯಾಲಯಕ್ಕೆ ಕರೆದುಕೊಂಡು ಹೋಗುವಾಗ ಖುಷಿಯಿಂದ ನಕ್ಕಿದ್ದರು. ಸ್ವಾಮೀಜಿ ಬಂಧನವಾಗಲಿ, ಸತ್ಯ ಹೊರಗೆ ಬರುತ್ತೆ, ದೊಡ್ಡದೊಡ್ಡವರ ಹೆಸರು ಹೊರಗೆ ಬರತ್ತೆ ಎಂದು ಚೈತ್ರಾ ಹೇಳಿದ್ದರು.

ಎ3 ಆರೋಪಿಯಾಗಿರುವ ಹಾಲಶ್ರೀ ಸ್ವಾಮೀಜಿ ಬಂಧನದಿಂದ ಇನ್ನಷ್ಟು ಸ್ಫೋಟಕ ಮಾಹಿತಿ ಹೊರಬೀಳುವ ಸಾಧ್ಯತೆಯಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com