ದೇಶದ ಅತ್ಯುತ್ತಮ ನಗರ ಬೆಂಗಳೂರಿನ ಭವಿಷ್ಯ ಹಾಳು ಮಾಡಲು ಅವಕಾಶ ನೀಡಲ್ಲ: ಅಕ್ರಮ ಫ್ಲೆಕ್ಸ್‌ಗೆ ಹೈಕೋರ್ಟ್ ಗರಂ

ನಗರದಲ್ಲಿ ಅನಧಿಕೃತ ಹೋರ್ಡಿಂಗ್‌ಗಳು, ಬ್ಯಾನರ್‌ಗಳು ಮತ್ತು ಫ್ಲೆಕ್ಸ್‌ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರೂ ಸೂಕ್ತ ಕ್ರಮ ಕೈಗೊಳ್ಳದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿರುದ್ಧ ತೀವ್ರ ಅಸಮಾಧಾನ...
ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್

ಬೆಂಗಳೂರು: ನಗರದಲ್ಲಿ ಅನಧಿಕೃತ ಹೋರ್ಡಿಂಗ್‌ಗಳು, ಬ್ಯಾನರ್‌ಗಳು ಮತ್ತು ಫ್ಲೆಕ್ಸ್‌ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರೂ ಸೂಕ್ತ ಕ್ರಮ ಕೈಗೊಳ್ಳದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಹೈಕೋರ್ಟ್, ದೇಶದ ಅತ್ಯುತ್ತಮ ನಗರವನ್ನು ಬೇರೆಯವರು ಹಾಳು ಮಾಡಲು ಅವಕಾಶ ನೀಡುವುದಿಲ್ಲ ಎಂದು ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ, ವಿಚಾರಣೆಯ ಕೊನೆಯ ದಿನಾಂಕದಂದು ನ್ಯಾಯಾಲಯ ನೀಡಿದ ನಿರ್ದೇಶನಗಳಿಗೆ ಅನುಗುಣವಾಗಿ ಸೂಕ್ತ ಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಬಿಬಿಎಂಪಿಗೆ ಸೂಚಿಸಿದೆ.

ಅಧಿಕಾರಿಗಳು ಸುಖಾಸುಮ್ಮನೆ ಮೌನವಾಗಿದ್ದರೆ ಮತ್ತು ಎಂದಿನಂತೆ ಮೃದು ಧೋರಣೆ ಹೊಂದಿದ್ದರೆ ಅದನ್ನು ಸಹಿಸಲಾಗುವುದಿಲ್ಲ ಎಂದು ನ್ಯಾಯಾಲಯ ಎಚ್ಚರಿಕೆ ನೀಡಿದೆ.

ಬಿಬಿಎಂಪಿ ಅಧಿಕಾರಿಗಳು ತಮ್ಮ ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ತಿಳಿದಿರಬೇಕು. "ಮಲಗುತ್ತಿರುವವರನ್ನು ಎಬ್ಬಿಸಬಹುದು. ಆದರೆ ಮಲಗಿದಂತೆ ನಟಿಸುವವರನ್ನು ಎಬ್ಬಿಸಲು ಸಾಧ್ಯವಿಲ್ಲ" ಎಂದು ಹೈಕೋರ್ಟ್ ಪೀಠ ಗಾದೆಯನ್ನು ಉಲ್ಲೇಖಿಸಿ ಕಿಡಿ ಕಾರಿದೆ.

ಇದೇ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲರು, ನಿಯಮ ಉಲ್ಲಂಘಿಸಿದವರು ಮತ್ತು ಬಿಬಿಎಂಪಿ ಅಧಿಕಾರಿಗಳ ನಡುವೆ ಅಪವಿತ್ರ ಸಂಬಂಧವಿದ್ದು, ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com