71.48 ಕೋಟಿ ರೂ. ಮೌಲ್ಯದ ಹಿಂದೂಸ್ತಾನ್ ಇನ್ಫ್ರಾಕಾನ್ ಸಂಸ್ಥೆಗೆ ಸೇರಿದ ಆಸ್ತಿ ಜಪ್ತಿ ಮಾಡಿದ ಇಡಿ!

ಅಧಿಕ ಬಡ್ಡಿ, ಕಮಿಷನ್ ಆಮಿಷವೊಡ್ಡಿ ಹೂಡಿಕೆದಾರರಿಗೆ ವಂಚಿಸಿದ ಆರೋಪದ ಮೇಲೆ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಹಿಂದೂಸ್ತಾನ್ ಇನ್ಫ್ರಾಕಾನ್ (ಇಂಡಿಯಾ) ಪ್ರೈವೇಟ್ ಲಿಮಿಟೆಡ್‌ಗೆ ಸೇರಿದ 71.48 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇ.ಡಿ) ಜಪ್ತಿ ಮಾಡಿದೆ.
ಜಾರಿ ನಿರ್ದೇಶನಾಲಯ
ಜಾರಿ ನಿರ್ದೇಶನಾಲಯ

ಬೆಂಗಳೂರು: ಅಧಿಕ ಬಡ್ಡಿ, ಕಮಿಷನ್ ಆಮಿಷವೊಡ್ಡಿ ಹೂಡಿಕೆದಾರರಿಗೆ ವಂಚಿಸಿದ ಆರೋಪದ ಮೇಲೆ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಹಿಂದೂಸ್ತಾನ್ ಇನ್ಫ್ರಾಕಾನ್ (ಇಂಡಿಯಾ) ಪ್ರೈವೇಟ್ ಲಿಮಿಟೆಡ್‌ಗೆ ಸೇರಿದ 71.48 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇ.ಡಿ) ಜಪ್ತಿ ಮಾಡಿದೆ.

ಬೆಂಗಳೂರು, ಮೈಸೂರು ಮತ್ತು ಆಂಧ್ರಪ್ರದೇಶದ ಅನಂತಪುರದಲ್ಲಿ ಕೃಷಿಯೇತರ ಜಮೀನು, ವಸತಿ ಸೇರಿ 71.48 ಕೋಟಿ ರೂ. ಮೌಲ್ಯದ ಆಸ್ತಿಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿರುವುದಾಗಿ ಮಂಗಳವಾರ ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ. 

ಹಿಂದೂಸ್ತಾನ್ ಇನ್ಫ್ರಾಕಾನ್ ಇಂಡಿಯಾ ಮತ್ತು ಅದರ ನಿರ್ದೇಶಕರ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಅಡಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪೊಲೀಸರು ದಾಖಲಿಸಿದ ಎಫ್‌ಐಆರ್‌ಗಳ ಆಧಾರದ ಮೇಲೆ ಕೇಂದ್ರೀಯ ಸಂಸ್ಥೆಯು ತನಿಖೆ ಪ್ರಾರಂಭಿಸಿದೆ.

ಆರೋಪಿಗಳು ಸಾಮಾನ್ಯ ಜನರಿಗೆ ಹೂಡಿಕೆ ಮೇಲೆ ಅಧಿಕ ಲಾಭ, ಕಮಿಷನ್ ಕೊಡುವುದಾಗಿ ಆಮಿಷವೊಡ್ಡಿ 7,18,817 ಜನರಿಂದ 389 ಕೋಟಿ ರೂ. ಸಂಗ್ರಹಿಸಿದ್ದರು. ಆದರೆ, ಹೂಡಿಕೆದಾರರಿಗೆ ಭರವಸೆ ನೀಡಿದಂತೆ ಲಾಭಾಂಶ ನೀಡುವಲ್ಲಿ ವಿಫಲರಾಗಿದ್ದರು. ಆದರೆ, ಆರೋಪಿಗಳು ಹೂಡಿಕೆದಾರರಿಗೆ 199 ಕೋಟಿ ರೂ.ಗಳನ್ನು ಹಿಂತಿರುಗಿಸಲು ವಿಫಲರಾಗಿದ್ದಾರೆ ಎಂಬುದು ತನಿಖೆಯಿಂದ ತಿಳಿದುಬಂದಿದೆ ಎಂದು ಇಡಿ ಆರೋಪಿಸಿದೆ.

ಅಕ್ರಮ ಹಣ ವಹಿವಾಟು ಆರೋಪದ ಮೇಲೆ ಇ.ಡಿ ಅಧಿಕಾರಿಗಳು ತನಿಖೆ ಕೈಗೊಂಡಾಗ ಹಿಂದೂಸ್ತಾನ್ ಇನ್ಫ್ರಾಕಾನ್ ಇಂಡಿಯಾ ಕಂಪನಿ ಹಣವನ್ನು ಬೇರೆಡೆ ಹೂಡಿಕೆ ಮಾಡಿರುವುದು ಬೆಳಕಿಗೆ ಬಂದಿದೆ. ಭಾರತ್ ಬಿಲ್ಡರ್ಸ್, ಹಿಂದೂಸ್ತಾನ್ ಮೆಗಾ ಪ್ರೈ.ಲಿ. ಕಂಪನಿ, ಕೆ ಲಲಿತಾ ಮತ್ತು ಡೈಮಂಡ್ ಪ್ರಾಪರ್ಟಿಸ್‌ಗೆ ಹಣ ವರ್ಗಾವಣೆ ಮಾಡಿದೆ. ಅಲ್ಲಿಂದ ಆಸ್ತಿಯನ್ನು ಖರೀದಿ ಮಾಡಿದ್ದರು. ಅಲ್ಲದೆ, ಆ ಹಣವನ್ನು ನಗದು ರೂಪದಲ್ಲಿ ಹಿಂಪಡೆದು ವೈಯಕ್ತಿಕವಾಗಿ ಬಳಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜೂನ್ 27 ರಂದು, ಇ.ಡಿ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂಸ್ತಾನ್ ಇನ್ಫ್ರಾಕಾನ್‌ ಮತ್ತು ಸಂಬಂಧಿಸಿದ ವ್ಯಕ್ತಿಗಳಿಗೆ ಸೇರಿದ ಬೆಂಗಳೂರು ಮತ್ತು ಮಂಡ್ಯದ ಐದು ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com