ಈದ್ಗಾ ಮೈದಾನ ವಿವಾದ: ಗಣೇಶ ಹಬ್ಬಕ್ಕೆ ಅನುಮತಿ ನೀಡುವ ಅಧಿಕಾರವನ್ನು ಆಡಳಿತಕ್ಕೆ ನೀಡಿದ ಹೈಕೋರ್ಟ್‌

ಬೆಂಗಳೂರು ಈದ್ಗಾ ಮೈದಾನದಲ್ಲಿ ಗಣೇಶ ಹಬ್ಬ ನಡೆಸಲು ಅನುಮತಿ ನೀಡುವ ಸಂಬಂಧ ಕಾನೂನು ಪ್ರಕಾರ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕ ಹೈಕೋರ್ಟ್‌ ನೀಡಿರುವ ನಿರ್ದೇಶನದ ಹಿನ್ನೆಲೆಯಲ್ಲಿ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ.
ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್

ಬೆಂಗಳೂರು: ಬೆಂಗಳೂರು ಈದ್ಗಾ ಮೈದಾನದಲ್ಲಿ ಗಣೇಶ ಹಬ್ಬ ನಡೆಸಲು ಅನುಮತಿ ನೀಡುವ ಸಂಬಂಧ ಕಾನೂನು ಪ್ರಕಾರ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕ ಹೈಕೋರ್ಟ್‌ ನೀಡಿರುವ ನಿರ್ದೇಶನದ ಹಿನ್ನೆಲೆಯಲ್ಲಿ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ.

ಚಾಮರಾಜಪೇಟೆ ನಾಗರಿಕರ ವೇದಿಕೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಈದ್ಗಾ ಮೈದಾನದಲ್ಲಿ ಗಣೇಶ ಹಬ್ಬ ಆಚರಣೆಗೆ ಅನುಮತಿ ನೀಡುವ ಅಧಿಕಾರವನ್ನು ಆಡಳಿತಕ್ಕೆ ನೀಡಿದೆ. ಈ ನಿಟ್ಟಿನಲ್ಲಿ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶ ಹಬ್ಬವನ್ನು ಕಾನೂನಾತ್ಮಕವಾಗಿ ಆಚರಿಸಬೇಕೆಂಬ ಬೇಡಿಕೆಯನ್ನು ಪರಿಶೀಲಿಸುವಂತೆ ಪಬ್ಲಿಕ್ ಪ್ರಾಸಿಕ್ಯೂಟರ್‌ಗೆ ಪೀಠವು ಮೌಖಿಕವಾಗಿ ನಿರ್ದೇಶನ ನೀಡಿದೆ.

ವೇದಿಕೆ ಪರ ವಕೀಲ ಶ್ರೀಧರ್ ಪ್ರಭು ಅವರು ಪ್ರಕರಣದ ತುರ್ತು ವಿಚಾರಣೆ ನಡೆಸುವಂತೆ ಕೋರಿದ್ದರು. ಈ ಕುರಿತು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗಿದ್ದು, ಉತ್ಸವ ಆಚರಿಸಲು ಅನುಮತಿ ನಿರಾಕರಿಸಲಾಗಿದೆ. ಸರ್ಕಾರ ಕೂಡ ಗಣೇಶ ಮೂರ್ತಿ ಸ್ಥಾಪನೆಗೆ ಅನುಮತಿ ನಿರಾಕರಿಸಿದೆ ಎಂದು ವಾದಿಸಿದರು.

ಚಾಮರಾಜಪೇಟೆಯ ಈದ್ಗಾ ಮೈದಾನ ಮತ್ತು ಆಟದ ಮೈದಾನ ಕಂದಾಯ ಇಲಾಖೆಗೆ ಸೇರಿದ್ದು, ಅಲ್ಲಿ ಗಣೇಶ ಹಬ್ಬ ಆಚರಣೆಗೆ ಅನುಮತಿ ನೀಡಬೇಕು ಎಂದು ವೇದಿಕೆ ವಾದಿಸುತ್ತಿದೆ.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬೆಂಗಳೂರಿನಲ್ಲಿ ಈದ್ಗಾ ಮೈದಾನದ ವಿವಾದ ಮುಂಚೂಣಿಗೆ ಬಂದಿತ್ತು. ಹಿಂದೂ ಸಂಘಟನೆಗಳು ಬೃಹತ್ ರ್ಯಾಲಿಯನ್ನು ನಡೆಸಿದ್ದು 2022 ಜುಲೈ 12ರಂದು ಬಂದ್‌ಗೆ ಕರೆ ನೀಡಿದ್ದವು, ಮೈದಾನದಲ್ಲಿ ಹಿಂದೂ ಹಬ್ಬಗಳಿಗೆ ಅವಕಾಶ ನೀಡುವಂತೆ ಅಧಿಕಾರಿಗಳಿಗೆ ಒತ್ತಾಯಿಸಿದ್ದವು. ಈ ಸಂಬಂಧ ಈಗಾಗಲೇ ಬೆಂಗಳೂರಿನ ಜಂಗಮ ಮಠದಲ್ಲಿ ಹಿಂದೂ ಸಂಘಟನೆಗಳು ಸಭೆ ನಡೆಸಿವೆ.

ಈದ್ಗಾ ಮೈದಾನವನ್ನು ಆಟದ ಮೈದಾನವನ್ನಾಗಿ ಉಳಿಸಿಕೊಳ್ಳಲು ಹಿಂದೂ ಕಾರ್ಯಕರ್ತರು ಸಂಕಲ್ಪ ಮಾಡಿದ್ದು, ಈದ್ಗಾ ಮೈದಾನ ತನ್ನ ಆಸ್ತಿ ಎಂಬ ವಕ್ಫ್ ಮಂಡಳಿಯ ಹೇಳಿಕೆಯನ್ನು ಪ್ರಶ್ನಿಸಿ 25 ಹಿಂದೂ ಸಂಘಟನೆಗಳು ಹಾಗೂ ಸ್ಥಳೀಯ ಗುಂಪುಗಳು ಕಾನೂನು ಹೋರಾಟ ನಡೆಸಲು ಕೈಜೋಡಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com