ಕೇರಳದ ಗಡಿಯಲ್ಲಿ ಅಕ್ಟೋಬರ್ 10ರವರೆಗೂ 'ನಿಫಾ' ಕಣ್ಗಾವಲು ಮುಂದುವರಿಕೆ- ದಿನೇಶ್ ಗುಂಡೂರಾವ್

ಸೆಪ್ಟೆಂಬರ್ 1 ರಂದು ನೆರೆಯ ಕೇರಳದಲ್ಲಿ ಪತ್ತೆಯಾದ ಕೊನೆಯ ನಿಫಾ ಪ್ರಕರಣದ ಕಾವಿನ ಅವಧಿ ಮುಗಿಯುವ ಅಕ್ಟೋಬರ್ 10 ರವರೆಗೆ ರಾಜ್ಯದ ಗಡಿಯಲ್ಲಿ ಮುಂದುವರಿಯುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಬುಧವಾರ ಹೇಳಿದ್ದಾರೆ.
ನಿಫಾ ಸಾಂದರ್ಭಿಕ ಚಿತ್ರ
ನಿಫಾ ಸಾಂದರ್ಭಿಕ ಚಿತ್ರ

ಮಂಗಳೂರು: ಸೆಪ್ಟೆಂಬರ್ 1 ರಂದು ನೆರೆಯ ಕೇರಳದಲ್ಲಿ ಪತ್ತೆಯಾದ ಕೊನೆಯ ನಿಫಾ ಪ್ರಕರಣದ ಕಾವಿನ ಅವಧಿ ಮುಗಿಯುವ ಅಕ್ಟೋಬರ್ 10 ರವರೆಗೆ ರಾಜ್ಯದ ಗಡಿಯಲ್ಲಿ ಕಣ್ಗಾವಲು ಮುಂದುವರಿಯುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಬುಧವಾರ ಹೇಳಿದ್ದಾರೆ.

ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ಚಾಮರಾಜನಗರ, ಮೈಸೂರು, ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಆರೋಗ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ಯಾವುದೇ ಶಂಕಿತ ನಿಪಾ ಪ್ರಕರಣಗಳು ವರದಿಯಾಗದಿದ್ದರೂ ರಾಜ್ಯವು ಇಲ್ಲಿಯವರೆಗೂ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದರು. 

ಗಡಿ ಪ್ರದೇಶಗಳಲ್ಲಿ ಎಚ್ಚರಿಕೆ ವಹಿಸಲಾಗಿದ್ದು, ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಈ ನಾಲ್ಕು ಜಿಲ್ಲೆಗಳಲ್ಲಿ ಸುಮಾರು 20 ಚೆಕ್ ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ ಮತ್ತು ಇದುವರೆಗೆ 10,000 ಕ್ಕೂ ಹೆಚ್ಚು ಜನರನ್ನು ಜ್ವರ, ಕೆಮ್ಮು ಮತ್ತು ಇತರ ರೋಗಲಕ್ಷಣಗಳಿಗಾಗಿ ತಪಾಸಣೆ ಮಾಡಲಾಗಿದೆ.ಕೇರಳದಲ್ಲಿ ನಿಪಾ ಕಾಣಿಸಿಕೊಂಡ ಸ್ಥಳದಿಂದ 150 ಕಿಮೀ ವ್ಯಾಪ್ತಿಯ ಗಡಿಯಲ್ಲಿರುವ ಎಚ್‌ಡಿ ಕೋಟೆ ತಾಲೂಕಿನ ಕುಗ್ರಾಮಗಳು ಮತ್ತು ಕೇರಳದೊಂದಿಗೆ ನಿಕಟ ಸಂಪರ್ಕ ಹೊಂದಿರುವ ಮಂಗಳೂರಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಅವರು ಹೇಳಿದರು.

ನಿಪಾ ಸಾವಿನ ಪ್ರಮಾಣ ಶೇ.40-70ರಷ್ಟಿದ್ದು, ರೋಗಕ್ಕೆ ಯಾವುದೇ ಲಸಿಕೆ ಹಾಕದಿರುವುದರಿಂದ ಹೆಚ್ಚು ಜಾಗರೂಕರಾಗಿದ್ದೇವೆ. ಕೇರಳದಲ್ಲಿ ಪತ್ತೆಯಾದ ಕೊನೆಯ ನಿಫಾ ಪ್ರಕರಣದ ಕಾವಿನ ಅವಧಿ ಮುಗಿಯುವ ಅಕ್ಟೋಬರ್ 10 ರವರೆಗೆ ಕಣ್ಗಾವಲು ಮುಂದುವರಿಯುತ್ತದೆ. ಬಳಿಕ ಕಣ್ಗಾವಲು ಸಡಿಲಿಸಲಾಗುವುದು ಎಂದು ಹೇಳಿದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ರಾಜ್ಯದಲ್ಲಿ ಇಲ್ಲಿಯವರೆಗೆ ಯಾವುದೇ ಪ್ರಕರಣ ವರದಿಯಾಗಿಲ್ಲ.  ಅಂತಹ ಪ್ರಕರಣಗಳು ನಮ್ಮ ಗಮನಕ್ಕೆ ಬಂದರೆ, ಸ್ವ್ಯಾಬ್ ತೆಗೆದುಕೊಂಡು ಪರೀಕ್ಷೆಗಾಗಿ ವೈರಾಲಜಿ ಸಂಸ್ಥೆಗೆ ಕಳುಹಿಸುತ್ತೇವೆ. ಇದಲ್ಲದೆ, ಯಾವುದೇ ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಕ್ವಾರಂಟೈನ್, ವಿಶೇಷ ವಾರ್ಡ್‌ಗಳು, ಮಾಸ್ಕ್‌ಗಳು, ಕಿಟ್‌ಗಳು ಇತ್ಯಾದಿ ಸೌಲಭ್ಯಗಳನ್ನು ಇಟ್ಟುಕೊಳ್ಳುವ ಮೂಲಕ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಸಚಿವರು ಹೇಳಿದರು.

ಫಾರ್ಮಾಸಿಸ್ಟ್‌ಗಳಿಗೆ ಹೆಚ್ಚಿನ ಸಂಬಳ:

ಸರ್ಕಾರಿ ಆಸ್ಪತ್ರೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಫಾರ್ಮಾಸಿಸ್ಟ್ ಹುದ್ದೆಗೆ ತೆಗೆದುಕೊಳ್ಳುವವರು ಕಡಿಮೆ ಇರುವ ಹಿನ್ನೆಲೆಯಲ್ಲಿ ಅವರ ವೇತನವನ್ನು 12,000 ರೂ.ನಿಂದ 17,000 ರೂ.ಗೆ ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ ಎಂದು ಆರೋಗ್ಯ ಸಚಿವರು ತಿಳಿಸಿದರು. ಅಲ್ಲದೆ, ಆಸ್ಪತ್ರೆಗಳಲ್ಲಿ ಖಾಲಿ ಇರುವ ಗ್ರೂಪ್ ‘ಡಿ’ ಹುದ್ದೆಗಳ ಶೇ 100 ರಷ್ಟು ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರಕ್ಕೆ ಅನುಮೋದನೆ ನೀಡುವಂತೆ ಮನವಿ ಮಾಡಿದ್ದೇವೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com