ಸ್ಯಾಂಡಲ್ವುಡ್ ಸ್ಟಾರ್ಗಳೇ ಎಲ್ಲಿದ್ದೀರಾ, ಕಾವೇರಿ ಹೋರಾಟವನ್ನು ಮರೆತುಬಿಟ್ರಾ: ಕನ್ನಡಪರ ಸಂಘಟನೆಗಳ ಆಕ್ರೋಶ
ಮಂಡ್ಯ: ಸ್ಯಾಂಡಲ್ವುಡ್ ಸ್ಟಾರ್ಗಳೇ ಎಲ್ಲಿದ್ದೀರಾ, ಕಾವೇರಿ ಹೋರಾಟವನ್ನು ಮರೆತುಬಿಟ್ರಾ, ಕಾವೇರಿ ಹೋರಾಟಕ್ಕೆ ಬರದ ನಿಮಗೆ ಧಿಕ್ಕಾರ ಎಂದು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಮುಂದೆ ಕನ್ನಡಪರ ಸಂಘಟನೆ ಸದಸ್ಯರು ಇಂದು ಬುಧವಾರ ಆಕ್ರೋಶ ಹೊರಹಾಕಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
ಕಾವೇರಿ ಹೋರಾಟಕ್ಕೆ ಕನ್ನಡ ಚಿತ್ರರಂಗದ ನಟರು ಬೆಂಬಲ ನೀಡದ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ನಟರ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಧಿಕ್ಕಾರದ ಪೋಸ್ಟ್ ಹಾಕುವ ಮೂಲಕ ಪೋಸ್ಟ್ ಹಾಕಲಾಗುತ್ತಿದೆ. ಸೋಷಿಯಲ್ ಮೀಡಿಯಾ ಮೂಲಕ ಅನ್ನದಾತರು ಕಾವೇರಿ ಬಗ್ಗೆ ಧ್ವನಿ ಎತ್ತದ ಕನ್ನಡ ಚಲನಚಿತ್ರ ನಟರಿಗೆ ಧಿಕ್ಕಾರ ಧಿಕ್ಕಾರ ಎಂದು ಪೋಸ್ಟ್ ಹಾಕಿದ್ದಾರೆ. ಫೇಸ್ಬುಕ್, ವಾಟ್ಸ್ ಆಪ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಲಾಗಿದೆ. ಪ್ರಮುಖ ನಟರ ಫೋಟೋ ಹಾಕಿ, ನಟರ ಬಾಯಿಗೆ ಪಟ್ಟಿ ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮುಂದೆ ಕನ್ನಡಪರ ಸಂಘಟನೆಗಗಳು ಹಾಗೂ ಕನ್ನಡಿಗರ ರಕ್ಷಣಾ ವೇದಿಕೆ ಪ್ರತಿಭಟನೆ ಮಾಡುತ್ತಿವೆ. ಕಾವೇರಿಯ ಬಗ್ಗೆ ಧ್ವನಿ ಎತ್ತದ ಕನ್ನಡ ಚಲನಚಿತ್ರ ನಟರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುತ್ತಿದೆ. ಕರ್ನಾಟಕದಲ್ಲಿ ರೈತರು ಸಂಕಷ್ಟದಲ್ಲಿ ಇದ್ದಾರೆ. ಕಾವೇರಿ ನೀರು ಬಗ್ಗೆ ಕನ್ನಡ ಚಲನಚಿತ್ರ ನಟರು ಧ್ವನಿ ಎತ್ತಿಲ್ಲ. ನಮ್ಮ ನಾಡಿಗೆ ಆಗುತ್ತಿರುವ ಅನ್ಯಾಯವನ್ನು ನೋಡಿಕೊಂಡು ಸುಮ್ಮನೆ ಕುಳಿತಿರುವ ಚಲನಚಿತ್ರ ನಟರ ವಿರುದ್ಧ ದಿಕ್ಕಾರ ಎಂದು ಸಂಘಟನೆಗಳು ಕೂಗುತ್ತಿವೆ.
ಮಂಡ್ಯದಲ್ಲಿ ತೀವ್ರಗೊಂಡ ಕಾವೇರಿ ನೀರು ಪ್ರತಿಭಟನೆ: ಕಾವೇರಿ ಪ್ರತಿಭಟನೆ ಮಂಡ್ಯದಲ್ಲಿ ತೀವ್ರಗೊಂಡಿದ್ದು, ಬೆಂಗಳೂರು-ಮೈಸೂರು ರಸ್ತೆ ತಡೆದು ರೈತರು ಪ್ರತಿಭಟನೆ ನಡೆಸಿದ್ದಾರೆ. ತಮಿಳುನಾಡಿಗೆ ನೀರು ಹರಿಸದಂತೆ ತೀವ್ರ ಹೋರಾಟ ಮಾಡಿದ್ದು, ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರು ನಿಲ್ಲಿಸಿ, ನೀರು ನಿಲ್ಲಿಸದೇ ಇದ್ದರೆ ಉಗ್ರ ಹೋರಾಟ ಮಾಡೋದಾಗಿ ಎಚ್ಚರಿಕೆ ನೀಡಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ