ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಕಾರು ಪಲ್ಟಿಯಾಗಿ ಮೂವರು ಸಾವು, ಇಬ್ಬರಿಗೆ ಗಂಭೀರ ಗಾಯ

ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಂಚೆಪಾಳ್ಯ ಬಳಿ ಸೋಮವಾರ ಮುಂಜಾನೆ ಕಾರು ಪಲ್ಟಿಯಾಗಿ ಮೂವರು ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಬೆಂಗಳೂರು: ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಂಚೆಪಾಳ್ಯ ಬಳಿ ಸೋಮವಾರ ಮುಂಜಾನೆ ಕಾರು ಪಲ್ಟಿಯಾಗಿ ಮೂವರು ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ.

ಮೃತರನ್ನು ದಾರೆಡ್ಡಿ, ನಿರೋಶ್ ಮತ್ತು ಆಗಸ್ಟಿನ್ ಎಂದು ಗುರುತಿಸಲಾಗಿದ್ದು, ಇವರೆಲ್ಲರೂ 25 ರಿಂದ 30 ವರ್ಷ ವಯಸ್ಸಿನವರು. ಕಾರು ಚಲಾಯಿಸುತ್ತಿದ್ದ ಮಿಥುನ್ ಯಾದವ್ ಮತ್ತು ಶತ್ರುಘ್ನ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಈ ಐವರೂ ಹೆಬ್ಬಾಳ ಸಮೀಪದ ಮಾನ್ಯತಾ ಟೆಕ್ ಪಾರ್ಕ್‌ನಲ್ಲಿರುವ ಬಹುರಾಷ್ಟ್ರೀಯ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು.

ಅಂಚೆಪಾಳ್ಯ ಸಮೀಪದ ಜಿಂದಾಲ್ ಮಹಿಳಾ ಕಾಲೇಜು ಮುಂಭಾಗ ಸೋಮವಾರ ಮುಂಜಾನೆ 4.30ರ ಸುಮಾರಿಗೆ ಅವರ ಕಾರು ಹೆದ್ದಾರಿಯ ಸುರಕ್ಷತಾ ಗೋಡೆಗೆ ಡಿಕ್ಕಿ ಹೊಡೆದು ಉರುಳಿ ಬಿದ್ದಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

'ಮೂವರು ಸ್ಥಳದಲ್ಲೇ ಸಾವಿಗೀಡಾದರೆ, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೇ ಈ ಅನಾಹುತಕ್ಕೆ ಕಾರಣ. ಸ್ನೇಹಿತರು ಪ್ರವಾಸಕ್ಕೆ ಹೋಗಿ ಹಿಂತಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ' ಎಂದು ನೆಲಮಂಗಲ ಸಂಚಾರ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com