ತಮ್ಮ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಹೈಕೋರ್ಟ್ ನಲ್ಲಿ ಆಕ್ಷೇಪಣೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಚುನಾವಣೆಯಲ್ಲಿ ತಮ್ಮ ಆಯ್ಕೆಯನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿಗೆ ಸಿಎಂ ಸಿದ್ದರಾಮಯ್ಯ ಆಕ್ಷೇಪಣೆ ಸಲ್ಲಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಚುನಾವಣೆಯಲ್ಲಿ ತಮ್ಮ ಆಯ್ಕೆಯನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿಗೆ ಸಿಎಂ ಸಿದ್ದರಾಮಯ್ಯ ಆಕ್ಷೇಪಣೆ ಸಲ್ಲಿಸಿದ್ದಾರೆ. ಹೈಕೋರ್ಟ್ ಅರ್ಜಿಯ ವಿಚಾರಣೆಯನ್ನು ಅ.06 ಕ್ಕೆ ಮುಂದೂಡಿದೆ.

ಅರ್ಜಿದಾರರು ಸಲ್ಲಿಸಿರುವ ಚುನಾವಣೆಗೆ ಸಂಬಂಧಿಸಿದ ಅರ್ಜಿ, ಕಾನೂನು ಹಾಗೂ ವಾಸ್ತವದ ಆಧಾರದ ಕೊರತೆಯನ್ನು ಹೊಂದಿದೆ. ಅರ್ಜಿದಾರರು ಪ್ರಸ್ತುತ ಚುನಾವಣಾ ಅರ್ಜಿಯನ್ನು ಸಂಪೂರ್ಣವಾಗಿ ರಾಜಕೀಯ ಸೇಡು ತೀರಿಸಿಕೊಳ್ಳಲು ಸಲ್ಲಿಸಿದ್ದಾರೆ ಮತ್ತು ಇದು ರಾಜಕೀಯ ದುರುದ್ದೇಶದಿಂದ ತುಂಬಿದೆ, ಅರ್ಜಿದಾರರು ದೃಢವಾದ ಸಾಕ್ಷ್ಯ ಅಥವಾ ಕಾನೂನು ಆಧಾರಗಳಿಲ್ಲದೆ ಈ ಗೌರವಾನ್ವಿತ ನ್ಯಾಯಾಲಯವನ್ನು ಸಂಪರ್ಕಿಸಿದ್ದಾರೆ, ಇದು ವಜಾಗೊಳಿಸಲು ಸೂಕ್ತವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ ಎಂದು ಸಿದ್ದರಾಮಯ್ಯ ಆಕ್ಷೇಪಣೆಯಲ್ಲಿ ತಿಳಿಸಿದ್ದಾರೆ.

ಸಿದ್ದರಾಮಯ್ಯನವರ ಕ್ಷೇತ್ರ ವರುಣಾದ ನಿವಾಸಿ ಕೆಎಂ ಶಂಕರ ಅವರು ಸಲ್ಲಿಸಿದ ಚುನಾವಣಾ ಅರ್ಜಿಯು ನ್ಯಾಯಮೂರ್ತಿ ಎಸ್ ಸುನೀಲ್ ದತ್ ಯಾದವ್ ಅವರ ಮುಂದೆ ವಿಚಾರಣೆಗೆ ಬಂದಿದ್ದು, ಮೇ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರು ಚುನಾವಣಾ ಅವಧಿಯಲ್ಲಿ ಭ್ರಷ್ಟಚಾರದಲ್ಲಿ ತೊಡಗಿದ್ದರು ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಲಾಗಿದ್ದು, ರಾಜಕೀಯ ಪಕ್ಷವು ಸರ್ಕಾರ ರಚಿಸಿದ ನಂತರ ಜಾರಿಗೆ ತರಲಾಗುವ ಭರವಸೆಗಳನ್ನು ಭ್ರಷ್ಟ ಪದ್ಧತಿ ಎಂದು ಕರೆಯಲಾಗುವುದಿಲ್ಲ ಎಂದು ಸಿದ್ದರಾಮಯ್ಯ ಸಮರ್ಥಿಸಿದ್ದಾರೆ. ಚುನಾವಣೆಯ ಸಂದರ್ಭದಲ್ಲಿ ಪ್ರಣಾಳಿಕೆಯಲ್ಲಿ ನೀಡುವ ಭರವಸೆಗಳನ್ನು ವ್ಯಕ್ತಿಯ ಚುನಾವಣಾ ಭ್ರಷ್ಟಾಚಾರ ಎಂದು ಹೇಳಲಾಗುವುದಿಲ್ಲ ಎಂದು ಸಿದ್ದರಾಮಯ್ಯ ಅರ್ಜಿಯಲ್ಲಿ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com