ಕೆ.ಆರ್‌.ಪುರ-ಬೈಯಪ್ಪನಹಳ್ಳಿ ಮೆಟ್ರೊ ಮಾರ್ಗ ಪರಿಶೀಲನೆ: ಇಂದು ಈ ಮಾರ್ಗದಲ್ಲಿ ರೈಲು ಸಂಚಾರ ವ್ಯತ್ಯಯ; ಇಲ್ಲಿದೆ ಮಾಹಿತಿ...

ನಮ್ಮ ಮೆಟ್ರೊದ ಕೆ.ಆರ್‌.ಪುರ-ಬೈಯಪ್ಪನಹಳ್ಳಿ ನಡುವೆ ಮೆಟ್ರೋ ಸುರಕ್ಷತಾ ಆಯುಕ್ತರು ಇಂದು ಗುರುವಾರ ಸುರಕ್ಷತಾ ತಪಾಸಣೆ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಇಂದು ಇಡೀ ದಿನ ಕೃಷ್ಣರಾಜಪುರ ಮತ್ತು ಗರುಡಾಚಾರ್‌ ಪಾಳ್ಯದವರೆಗಿನ ಮೆಟ್ರೋ ರೈಲ್ವೆ ಸಂಚಾರವನ್ನು ಬಿಎಂಆರ್‌ಸಿಎಲ್‌ ಸ್ಥಗಿತಗೊಳಿಸಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ನಮ್ಮ ಮೆಟ್ರೊದ ಕೆ.ಆರ್‌.ಪುರ-ಬೈಯಪ್ಪನಹಳ್ಳಿ ನಡುವೆ ಮೆಟ್ರೋ ಸುರಕ್ಷತಾ ಆಯುಕ್ತರು ಇಂದು ಗುರುವಾರ ಸುರಕ್ಷತಾ ತಪಾಸಣೆ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಇಂದು ಇಡೀ ದಿನ ಕೃಷ್ಣರಾಜಪುರ ಮತ್ತು ಗರುಡಾಚಾರ್‌ ಪಾಳ್ಯದವರೆಗಿನ ಮೆಟ್ರೋ ರೈಲ್ವೆ ಸಂಚಾರವನ್ನು ಬಿಎಂಆರ್‌ಸಿಎಲ್‌ ಸ್ಥಗಿತಗೊಳಿಸಿದೆ. 

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಬೆಂಗಳೂರು ಮೆಟ್ರೋ ರೈಲು ನಿಗಮ, ಕೃಷ್ಣರಾಜಪುರ ಮತ್ತು ಗರುಡಾಚಾರ್‌ಪಾಳ್ಯದವರೆಗೆ ಇಡೀ ದಿನ ಮೆಟ್ರೋ ರೈಲು ಸಂಚಾರ ಸೇವೆ ಇರುವುದಿಲ್ಲ. ಬೈಯ್ಯಪ್ಪನಹಳ್ಳಿಯಿಂದ ಇಂದಿರಾನಗರ ಮೆಟ್ರೋ ನಿಲ್ದಾಣದವರೆಗೆ ಮಧ್ಯಾಹ್ನ 1.30ರಿಂದ 4.30ರವರೆಗೆ ರೈಲು ಸಂಚರಿಸುವುದಿಲ್ಲ ಎಂದು ತಿಳಿಸಿದೆ.

ಇನ್ನು ವೈಟ್‌ಫೀಲ್ಡ್‌ ಮತ್ತು ಗರುಡಾಚಾರಪಾಳ್ಯ ನಡುವೆ ರೈಲು ಸೇವೆ ಎಂದಿನಂತೆ ಇರಲಿದೆ. ಇಂದಿರಾನಗರ ಮತ್ತು ಕೆಂಗೇರಿ ನಡುವೆ ಮಧ್ಯಾಹ್ನ 1.30ರಿಂದ 4.30ರವರೆಗೆ ರೈಲ್ವೆ ಸೇವೆ ಲಭ್ಯವಿದೆ. ಮಧ್ಯಾಹ್ನ 1.30ರವರೆಗೆ ಮತ್ತು ಸಂಜೆ 4.30ರ ಬಳಿಕ ಬೈಯ್ಯಪ್ಪನಹಳ್ಳಿ ಮತ್ತು ಕೆಂಗೇರಿ ಮೆಟ್ರೋ ನಿಲ್ದಾಣದ ನಡುವೆ ರಾತ್ರಿ 11ರವರೆ ಮೆಟ್ರೋ ಸೇವೆ ಎಂದಿನಂತೆ ನಡೆಯಲಿದೆ. ಮೆಟ್ರೋ ಪ್ರಯಾಣಿಕರು ರೈಲ್ವೆ ಸಂಚಾರದ ವ್ಯತ್ಯಯ ಗಮನಿಸಿ ಸಹಕರಿಸುವಂತೆ ಬಿಎಂಆರ್‌ಸಿಎಲ್‌ ಕೋರಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com