ತುಸು ನಿರಾಳ ನೀಡಿದ ಮಳೆರಾಯ; ಜಲಾಶಯಗಳಲ್ಲಿ ನೀರಿನ ಮಟ್ಟ ಕೊಂಚ ಏರಿಕೆ, ಆದರೂ ತಮಿಳುನಾಡಿಗೆ ನೀರು ಬಿಡುವ ಸ್ಥಿತಿಯಲ್ಲಿಲ್ಲ ರಾಜ್ಯ!

ಕಳೆದ ಕೆಲವು ದಿನಗಳಿಂದ ರಾಜ್ಯದ ಕೆಲವೆಡೆ ಮಳೆಯಾಗುತ್ತಿದ್ದು, ಈ ಬೆಳವಣಿಗೆ ತುಸು ನಿರಾಳವನ್ನು ನೀಡಿದೆ. ಮಳೆಯ ಕಾರಣದಿಂದಾಗಿ ರಾಜ್ಯದ ಜಲಾಶಯಗಳಲ್ಲಿ ನೀರಿನ ಮಟ್ಟ ಕೊಂಚ ಏರಿಕೆಯಾಗಿದೆ. ಆದರೂ, ತಮಿಳುನಾಡಿಗೆ ನೀರು ಬಿಡುಗಡೆ ಮಾಡುವ ಸ್ಥಿತಿಯಲ್ಲಿ ರಾಜ್ಯವಿಲ್ಲ ಎನ್ನಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕಳೆದ ಕೆಲವು ದಿನಗಳಿಂದ ರಾಜ್ಯದ ಕೆಲವೆಡೆ ಮಳೆಯಾಗುತ್ತಿದ್ದು, ಈ ಬೆಳವಣಿಗೆ ತುಸು ನಿರಾಳವನ್ನು ನೀಡಿದೆ. ಮಳೆಯ ಕಾರಣದಿಂದಾಗಿ ರಾಜ್ಯದ ಜಲಾಶಯಗಳಲ್ಲಿ ನೀರಿನ ಮಟ್ಟ ಕೊಂಚ ಏರಿಕೆಯಾಗಿದೆ. ಆದರೂ, ತಮಿಳುನಾಡಿಗೆ ನೀರು ಬಿಡುಗಡೆ ಮಾಡುವ ಸ್ಥಿತಿಯಲ್ಲಿ ರಾಜ್ಯವಿಲ್ಲ ಎನ್ನಲಾಗಿದೆ.

ತಮಿಳುನಾಡಿಗೆ ಪ್ರತಿದಿನ 5,000 ಕ್ಯೂಸೆಕ್ ನೀರು ಬಿಡುಗಡೆ ಮಾಡುವುದನ್ನು ಮುಂದುವರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಈ ಹಿಂದೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದ್ದು, ಈ ನಿರ್ದೇಶನದ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಮಂಗಳವಾರ ಸಂಜೆಯ ವೇಳೆ ರಾಜ್ಯ ಅಣೆಕಟ್ಟುಗಳ ನೀರಿನ ಸಂಗ್ರಹ ಇಂತಿದೆ... ಹಾರಂಗಿ ಅಣೆಕಟ್ಟು- 7.762 ಟಿಎಂಸಿ ಅಡಿ, ಹೇಮಾವತಿ -- 16.003 ಟಿಎಂಸಿ, ಕೆಆರ್‌ಎಸ್ -- 16.191 ಟಿಎಂಸಿ ಮತ್ತು ಕಬಿನಿಯಲ್ಲಿ 11.067 ಟಿಎಂಸಿ ಅಡಿ ನೀರಿನ ಸಂಗ್ರಹವಿದೆ. ಮಂಗಳವಾರ ಉತ್ತಮ ಮಳೆಯಾದ ಕಾರಣ ಜಲಾಶಯಗಳಿಗೆ 12 ಸಾವಿರ ಕ್ಯೂಸೆಕ್‌ ನೀರು ಹರಿದು ಬಂದಿದೆ ಎಂದು ತಿಳಿದುಬಂದಿದೆ.

ಪರಿಸ್ಥಿತಿ ಇನ್ನು ಅನಿರೀಕ್ಷಿತವಾಗಿದೆ. ಕಳೆದ ವರ್ಷ ಇದೇ ಸಂದರ್ಭದಲ್ಲಿ ಅಣೆಕಟ್ಟುಗಳಲ್ಲಿ ನೀರಿನ ಮಟ್ಟ 102 ಟಿಎಂಸಿ ಅಡಿ ನೀರಿತ್ತು. ಅದಾಗ್ಯೂ ಎರಡು ರಾಜ್ಯಗಳ ನಡುವಿನ ನೀರಿನ ಹಂಚಿಕೆಯನ್ನು ಶೇ.50ರಷ್ಟು ಅವಲಂಬಿತತೆಯ ಆಧಾರದ ಮೇಲೆ ನೀಡಲಾಗಿದೆ ಎಂದು ಕಾನೂನು ತಜ್ಞರು ಹೇಳಿದ್ದಾರೆ.

ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರು ಮಾತನಾಡಿ, ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರಗಳು ಹೆಚ್ಚಿನ ಧ್ಯೇಯೋದ್ದೇಶವನ್ನು ಹೊಂದಿರಬೇಕು ಎಂದು ಹೇಳಿದ್ದಾರೆ.

ನಗರದ ತಜ್ಞರು ಮಾತನಾಡಿ, ಕುಡಿಯುವ ನೀರಿನ ಅಗತ್ಯಗಳಿಗಾಗಿ ಬೆಂಗಳೂರು ಮತ್ತು ಕಾವೇರಿ ಜಲಾನಯನ ಪ್ರದೇಶದ ಜನರಿಗೆ ಸುಮಾರು 33 ಟಿಎಂಸಿ ಅಡಿ ನೀರಿನ ಅಗತ್ಯವಿದೆ. ಈ ಬಾರಿ ಮಳೆ ಸೂಕ್ತ ರೀತಿಯಲ್ಲಿ ಬಾರದ ಹಿನ್ನೆಲೆಯಲ್ಲಿ ನೀರು ಸಂಗ್ರಹಣೆಯ ವರ್ಷವನ್ನು ಮೇ 31ರ ಬದಲಿಗೆ ಜುಲೈ 31ಕ್ಕೆ ನಿಗದಿಪಡಿಸಲಾಗಿದೆ.

ಪ್ರಸ್ತುತ ಜಲಾಶಯಗಳಲ್ಲಿರುವ ನೀರಿನ ಮಟ್ಟದಲ್ಲಿ ಸ್ವಲ್ಪ ಪ್ರಮಾಣದಲ್ಲಿ ನೀರಾವರಿಗೆ ನೀರು ಬಿಡುಗಡೆ ಮಾಡಿದರೂ, ಅಕ್ಟೋಬರ್ ಮಧ್ಯದವರೆಗೆ ಮಾತ್ರವೇ ಮಾಡಬಹುದಾಗಿದೆ. ಮಳೆ ಕೊರತೆಯಿಂದ ಇಳುವರಿಯಲ್ಲಿ ಭಾರಿ ಕುಸಿತ ಉಂಟಾಗಿದೆ ಎಂದು ತಜ್ಞರು ಹೇಳಿದ್ದಾರೆ.

ಇದೇ ವೇಳೆ ಮೇಕೆದಾಟು ಅಣೆಕಟ್ಟು ಯೋಜನೆಯು ನೀರಿನ ಕೊರತೆಯ ಸಮಸ್ಯೆಯನ್ನು ಪರಿಹರಿಸಲು ಸಹಾಯ ಮಾಡುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಯೋಜನೆಗಳು ಪರಿಸ್ಥಿತಿಯನ್ನು ಸ್ವಲ್ಪಮಟ್ಟಿಗೆ ತಗ್ಗಿಸಬಹುದು ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com