ಕಾವೇರಿ ವಿವಾದ: ಸುಪ್ರೀಂ ಕೋರ್ಟ್ ಆದೇಶ ಖಂಡಿಸಿ ಸೆಪ್ಟೆಂಬರ್ 23ಕ್ಕೆ ಮಂಡ್ಯ ಬಂದ್

ತಮಿಳುನಾಡಿಗೆ ನಿತ್ಯ 5,000 ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶ ನೀಡಿದ್ದು, ಸುಪ್ರೀಂ ತೀರ್ಪು ಖಂಡಿಸಿ ಸೆಪ್ಟೆಂಬರ್ 23 ರಂದು ಮಂಡ್ಯ ಬಂದ್​ಗೆ ಕರೆ ನೀಡಲಾಗಿದೆ.
ಮಂಡ್ಯದಲ್ಲಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರ ಪ್ರತಿಭಟನೆ
ಮಂಡ್ಯದಲ್ಲಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರ ಪ್ರತಿಭಟನೆ

ಮಂಡ್ಯ: ತಮಿಳುನಾಡಿಗೆ ನಿತ್ಯ 5,000 ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶ ನೀಡಿದ್ದು, ಸುಪ್ರೀಂ ತೀರ್ಪು ಖಂಡಿಸಿ ಸೆಪ್ಟೆಂಬರ್ 23 ರಂದು ಮಂಡ್ಯ ಬಂದ್​ಗೆ ಕರೆ ನೀಡಲಾಗಿದೆ.

ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಬಂದ್ ಗೆ ಕರೆ ನೀಡಿದ್ದು, ಇಂದು ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ರೈತ ಹಿತ ರಕ್ಷಣಾ ಸಮಿತಿ ನಾಳೆ ರೈತರ ಸಭೆ ಕರೆದಿದ್ದು, ಬಂದ್ ರೂಪು-ರೇಷೆ ಬಗ್ಗೆ ಚರ್ಚೆ ನಡೆಸಲಿದೆ.

ಮುಂದಿನ 15 ದಿನಗಳವರೆಗೆ ತಮಿಳುನಾಡಿಗೆ ಪ್ರತಿ ದಿನವೂ ಐದು ಸಾವಿರ ಕ್ಯೂಸೆಕ್‌ ಹರಿಸಬೇಕು ಎಂದು ಸುಪ್ರೀಂ ಕೋರ್ಟ್‌ ನಿರ್ದೇಶ ನೀಡಿದೆ. ಸುಪ್ರೀಂ ಸೂಚನೆಯು ಹೊರಬರುತ್ತಿದ್ಧಂತೆ ಮಂಡ್ಯದಲ್ಲಿ ರೈತರು ಮತ್ತು ಕನ್ನಡ ಪರ ಸಂಘಟನೆಗಳ ಹೋರಾಟ ತೀವ್ರಗೊಂಡಿದ್ದು, ಇಂದು ಹಲವು ಕಡೆ ರಸ್ತೆ ತಡೆ ನಡೆಸಿದರೆ, ರೈತರು ನೀರಿಗಿಳಿದು ಪ್ರತಿಭಟನೆ ನಡೆಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com