ರಾಜ್ಯದ ಹಲವೆಡೆ ಮುಂದಿನ ಮೂರು ದಿನ ಗುಡುಗು ಸಹಿತ ಮಳೆ ಸಾಧ್ಯತೆ- ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಹಲವೆಡೆ ಮುಂದಿನ ಮೂರು ದಿನ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಗುರುವಾರ ಮುನ್ಸೂಚನೆ ನೀಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದ ಹಲವೆಡೆ ಮುಂದಿನ ಮೂರು ದಿನ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಗುರುವಾರ ಮುನ್ಸೂಚನೆ ನೀಡಿದೆ.

ಶುಕ್ರವಾರ ಒಳನಾಡಿನ ಕೆಲವೆಡೆ ಸಾಧಾರಣ ಮಳೆಯಾಗಲಿದ್ದು, ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯ ಎಚ್ಚರಿಕೆ ನೀಡಲಾಗಿದೆ. 

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಯಲ್ಲಿ ಗುಡುಗು ಸಹಿತ ಸಾಧಾರಣ ಮಳೆ ನಿರೀಕ್ಷಿತ ಎಂದು ಇಲಾಖೆ ತಿಳಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com