ಕೇಂದ್ರದ ಮಹಿಳಾ ಮೀಸಲಿಗೆ ಬದಲಾಗಿ ರಾಜ್ಯ ಸರ್ಕಾರದಿಂದ ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ಸಮುದಾಯಕ್ಕೆ ಮೀಸಲಾತಿ!

ಕೇಂದ್ರ ಸರ್ಕಾರವು ಬುಧವಾರ ತಂದ ಮಹಿಳಾ ಮೀಸಲಾತಿ ಮಸೂದೆಗೆ ಪ್ರತಿಯಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೊಂದು ಗೇಮ್ ಪ್ಲಾನ್ ಮಾಡುತ್ತಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಕೇಂದ್ರ ಸರ್ಕಾರವು ಬುಧವಾರ ತಂದ ಮಹಿಳಾ ಮೀಸಲಾತಿ ಮಸೂದೆಗೆ ಪ್ರತಿಯಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೊಂದು ಗೇಮ್ ಪ್ಲಾನ್ ಮಾಡುತ್ತಿದೆ.

ಗ್ರಾಮ ಪಂಚಾಯತ್‌ಗಳಂತಹ ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ಸಮುದಾಯಗಳಿಗೆ ಮೀಸಲಾತಿ ನೀಡಲು ಕರ್ನಾಟಕ ಸರ್ಕಾರ ಪ್ಲಾನ್ ಮಾಡುತ್ತಿದೆ, ಇದು ಶೀಘ್ರದಲ್ಲೇ ಚರ್ಚೆಗೆ ಬರುವ ನಿರೀಕ್ಷೆಯಿದೆ ಮತ್ತು ಶುಕ್ರವಾರದ ಸಚಿವ ಸಂಪುಟ ಸಭೆಯಲ್ಲೂ ಪ್ರಸ್ತಾಪಿಸುವ ನಿರೀಕ್ಷೆಯಿದೆ.

ಇಲ್ಲಿಯವರೆಗೆ, SC/ST ಗಳು ಮಾತ್ರ ಪ್ರಾತಿನಿಧ್ಯ ಮೀಸಲಾತಿಯನ್ನು ಅನುಭವಿಸುತ್ತಿದ್ದರು. ರಾಜ್ಯದಲ್ಲಿ ಎಸ್‌ಸಿ ಮತ್ತು ಎಸ್‌ಟಿಗಳಿಗೆ ಒಟ್ಟು 51 ವಿಧಾನಸಭಾ ಸ್ಥಾನಗಳಿವೆ. 60 ರಷ್ಟು ಜನಸಂಖ್ಯೆಯು ಹಿಂದುಳಿದ ವರ್ಗಗಳಿಗೆ ಸೇರಿದೆ ಮತ್ತು ಅವರಲ್ಲಿ ಹೆಚ್ಚಿನವರು ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ ಎಂದು ತಜ್ಞರು ಹೇಳಿದ್ದಾರೆ.

ಲೋಕಸಭೆ ಚುನಾವಣೆಗೂ ಮೊದಲು ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಳ್ಳುತ್ತಿದೆ. ರಾಜ್ಯಾದ್ಯಂತ 8,000 ಕ್ಕಿಂತ ಹೆಚ್ಚು ಜಿಪಿಗಳಿವೆ ಕಾಂಗ್ರೆಸ್ ಪಕ್ಷಕ್ಕೆ ಹಿಂದುಳಿದ ಸಮುದಾಯಗಳ ಬೆಂಬಲ ಯಾವಾಗಲೂ ಇದೆ. ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಪಟ್ಟಣ ಪುರಸಭೆ ಮತ್ತು ನಗರ ಪಾಲಿಕೆಗಳಲ್ಲಿ ಈಗಾಗಲೇ ಹಿಂದುಳಿದವರಿಗೆ ಎ ಮತ್ತು ಪ್ರವರ್ಗ ಬಿ ಅಡಿಯಲ್ಲಿ ಮೀಸಲಾತಿ ಕಲ್ಪಿಸಲಾಗಿದ್ದು, ಇದನ್ನು ಇನ್ನಷ್ಟು ಸಮಗ್ರಗೊಳಿಸುವ ಸಾಧ್ಯತೆ ಇದೆ.

ನ್ಯಾಯಮೂರ್ತಿ ಡಾ ಕೆ ಭಕ್ತವತ್ಸಲ ಆಯೋಗವು ಸಾಮಾಜಿಕ ನ್ಯಾಯ ಕುರಿತು ಅಧ್ಯಯನ ಮಾಡಿ ವರದಿ ಸಲ್ಲಿಸಲಾಗಿದೆ. ಕಾಂಗ್ರೆಸ್‌ನ ಹಿರಿಯ ನಾಯಕ ಎಂಎಲ್‌ಸಿ ಬಿ ಕೆ ಹರಿಪ್ರಸಾದ್‌ ಅವರು ಹಿಂದುಳಿದ ಸಮುದಾಯದವರಿಗೆ ಪ್ರಮುಖ ಸ್ಥಾನಗಳನ್ನು ನೀಡುವ ವಿಚಾರ ಪ್ರಸ್ತಾಪಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಇಷ್ಟು ದೊಡ್ಡ ಸಂಖ್ಯೆಯಲ್ಲಿ ಪ್ರತಿನಿಧಿಸುತ್ತಿದ್ದರೂ ಸಂಪುಟದಲ್ಲಿ ಸಿಎಂ ಸಿದ್ದರಾಮಯ್ಯ, ಬೈರತಿ ಬಸವರಾಜ್ ಮತ್ತು ಮಧು ಬಂಗಾರಪ್ಪ ಮಾತ್ರ ಸ್ಥಾನ ಪಡೆದಿದ್ದಾರೆ. ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಸಿ.ಎಸ್.ದ್ವಾರಕಾನಾಥ್ ಮಾತನಾಡಿ, "ಚುನಾವಣಾ ವ್ಯವಸ್ಥೆಯಲ್ಲಿ ಪ್ರಮಾಣಾನುಗುಣವಾಗಿ ಅವರಿಗೆ ಪ್ರಾತಿನಿಧ್ಯ ಸಿಗದ ಕಾರಣ ಹಿಂದುಳಿದ ವರ್ಗಗಳಿಗೆ ಪ್ರಾತಿನಿಧ್ಯದ ಮೀಸಲಾತಿಯನ್ನು ನೀಡುವ ಕ್ರಮ ಸ್ವಾಗತಾರ್ಹ" ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com