ಬರಗಾಲ ಹಿನ್ನೆಲೆಯಲ್ಲಿ ‘ಸರಳ ಮತ್ತು ಅರ್ಥಪೂರ್ಣ’ ದಸರಾ ಆಚರಣೆಗೆ ಸರ್ಕಾರ ನಿರ್ಧಾರ

ರಾಜ್ಯದಲ್ಲಿ ಭೀಕರ ಬರಗಾಲ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಬಾರಿ ‘ಸರಳ ಮತ್ತು ಅರ್ಥಪೂರ್ಣ’ ದಸರಾ ಆಚರಿಸಲು ನಿರ್ಧರಿಸಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.ಮಹದೇವಪ್ಪ ಅವರು ಶುಕ್ರವಾರ ಹೇಳಿದ್ದಾರೆ.
ಮೈಸೂರು ದಸರಾ
ಮೈಸೂರು ದಸರಾ

ಬೆಂಗಳೂರು: ರಾಜ್ಯದಲ್ಲಿ ಭೀಕರ ಬರಗಾಲ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಬಾರಿ ‘ಸರಳ ಮತ್ತು ಅರ್ಥಪೂರ್ಣ’ ದಸರಾ ಆಚರಿಸಲು ನಿರ್ಧರಿಸಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.ಮಹದೇವಪ್ಪ ಅವರು ಶುಕ್ರವಾರ ಹೇಳಿದ್ದಾರೆ.

ಮಳೆಯ ಅಭಾವದಿಂದ ರಾಜ್ಯದಲ್ಲಿ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಮೈಸೂರು ದಸರಾ ಹಬ್ಬವನ್ನು ಸರಳವಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಮಹದೇವಪ್ಪ ಅವರು ಟ್ವೀಟ್ ಮಾಡಿದ್ದಾರೆ.

ಮೈಸೂರು ನಗರಕ್ಕೆ ಎಲ್ಲೆಡೆಯಿಂದ ಅಂತರರಾಷ್ಟ್ರೀಯ ಮತ್ತು ರಾಷ್ಟ್ರೀಯ ಪ್ರವಾಸಿಗರನ್ನು ಆಕರ್ಷಿಸುವ ಉದ್ದೇಶದಿಂದ ಪ್ರತಿ ವರ್ಷ ನವರಾತ್ರಿ ಹಬ್ಬವನ್ನು ಅತ್ಯಂತ ವೈಭವ ಮತ್ತು ಆಡಂಬರದಿಂದ ಆಚರಿಸಲಾಗುತ್ತದೆ.

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಕಬ್ಬು ಬೆಳೆಗಾರರ ಸಂಘ ಹಾಗೂ ಇತರ ಸಂಘಟನೆಗಳು ದಸರಾವನ್ನು ಸರಳವಾಗಿ ಆಚರಿಸುವಂತೆ ಒತ್ತಾಯಿಸಿವೆ.

ಸಚಿವ ಮಹದೇವಪ್ಪ ಅವರು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾರೆ ಮತ್ತು ದಸರಾ ಕಾರ್ಯಕಾರಿ ಸಮಿತಿ ಅಧ್ಯಕ್ಷರೂ ಆಗಿದ್ದಾರೆ.

ಕೋವಿಡ್ ನಿಂದಾಗಿ ಕಳೆದ ಮೂರು ವರ್ಷಗಳಿಂದ ದಸರಾವನ್ನು ವಿಜೃಂಭಣೆಯಿಂದ ಆಚರಿಸದ ಕಾರಣ ಈ ಬಾರಿ ವಿಜೃಂಭಣೆಯಿಂದ ಆಚರಿಸುತ್ತಾರೆ ಎಂಬ ನಿರೀಕ್ಷೆ ಇತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com