ಉಡುಪಿ: ಉಡುಪಿಯಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಯುವಕ-ಯುವತಿ ಮೇಲೆ ಹಲ್ಲೆ ನಡೆಸಲಾಗಿದ್ದು, ನೈತಿಕ ಪೊಲೀಸ್ ಗಿರಿ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಸುಮಾರು ಒಂದು ತಿಂಗಳ ಹಿಂದೆ ಘಟನೆ ನಡೆದಿದ್ದು, ಘಟನೆಯ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಯುವಕ ಮತ್ತು ಯುವತಿ ತೀರ್ಥಹಳ್ಳಿಯ ಆಗುಂಬೆ ಬಳಿಯ ಹೊಸಗದ್ದೆ ಎಂಬಲ್ಲಿ ಸಿರಿಮನೆ ಜಲಪಾತದಿಂದ ಉಡುಪಿಗೆ ಮರಳುತ್ತಿದ್ದರು. ಈ ವೇಳೆ ಒಂದು ಗುಂಪು ಇಬ್ಬರನ್ನು ತಡೆದಿದ್ದು, ಅವರ ಸಮುದಾಯದ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಈ ಕುರಿತ ವಿಡಿಯೋವೊಂದು ವೈರಲ್ ಆಗಿದೆ.
ಈ ಸಂಬಂಧ ಕಾಪು ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 143, 147, 341, 505(ಕಲಂ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಉಡುಪಿ ಎಸ್ಪಿ ಡಾ.ಅರುಣ್ ಕೆ ತಿಳಿಸಿದ್ದಾರೆ.
ಹುಡುಗಿಯ ಸಹೋದರ ನೀಡಿದ ದೂರಿನ ಆಧಾರದ ಮೇಲೆ ಕಾನೂನು ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
Advertisement