ಮುಳುಗಿ ಸಾವು
ರಾಜ್ಯ
ಶಿವಮೊಗ್ಗ: ಈಜಲು ತೆರಳಿದ್ದ ಕೃಷಿ ಅಧಿಕಾರಿ ಸೇರಿ ಇಬ್ಬರು ನೀರುಪಾಲು
ಸಾಗರ ತಾಲೂಕಿನ ಜೋಗ ಜಲಪಾತ ವೀಕ್ಷಣೆಗೆ ಬಂದಿದ್ದಾಗ ಜಲಪಾತದಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲಾಗಿದ್ದಾರೆ.
ಶಿವಮೊಗ್ಗ: ಸಾಗರ ತಾಲೂಕಿನ ಜೋಗ ಜಲಪಾತ ವೀಕ್ಷಣೆಗೆ ಬಂದಿದ್ದಾಗ ಜಲಪಾತದಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲಾಗಿದ್ದಾರೆ.
ಮೃತರನ್ನು ಕೃಷಿ ಅಧಿಕಾರಿ ಕೆ.ಟಿ ಕುಮಾರ್ ಹಾಗೂ ಖಾಸಗಿ ಕಂಪನಿ ಉದ್ಯೋಗಿ ಅರುಣ್ ಎಂದು ಗುರುತಿಸಲಾಗಿದೆ.
ಯುವಕರು ಕುಟುಂಬಸ್ಥರ ಜೊತೆಗೆ ಜೋಗ ಜಲಪಾತ ವೀಕ್ಷಣೆಗೆ ಆಗಮಿಸಿದ್ದಾಗ ಘಟನೆ ಸಂಭವಿಸಿದೆ.
ಸಾಗರ ತಾಲೂಕು ಸರ್ಕಾರಿ ಆಸ್ಪತ್ರೆಗೆ ಇಬ್ಬರ ಮೃತದೇಹ ರವಾನೆ ಮಾಡಲಾಗಿದ್ದು, ಘಟನಾ ಸ್ಥಳಕ್ಕೆ ಕಾರ್ಗಲ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

