ರಾಜ್ಯದಲ್ಲಿ 1,600 ಅಕ್ರಮ ಶಾಲೆ, ಪಿಯು ಕಾಲೇಜುಗಳು ಇವೆ; ಮಕ್ಕಳ ಬ್ಯಾಗ್ ಹೊರೆ ಕಡಿಮೆ ಮಾಡಲು ಯತ್ನ: ಮಧು ಬಂಗಾರಪ್ಪ

ರಾಜ್ಯದಲ್ಲಿ 1600 ಅನಧಿಕೃತ ಶಾಲೆಗಳು ಇವೆ. ದಾಖಲೆಗಳು ಸರಿಯಿಲ್ಲದೆ ಇರುವ ಈ ಶಾಲೆಗಳನ್ನು ಮುಚ್ಚಿದರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಡಕಾಗಬಹುದು. ಇದಕ್ಕಾಗಿ ಅವರಿಗೆ ದಾಖಲೆಗಳನ್ನು ಸರಿಪಡಿಸಲು ಸೂಚಿಸಲಾಗಿದೆ.
ಮಧು ಬಂಗಾರಪ್ಪ
ಮಧು ಬಂಗಾರಪ್ಪ
Updated on

ಮಂಗಳೂರು: ರಾಜ್ಯದಲ್ಲಿ 1600 ಅನಧಿಕೃತ ಶಾಲೆಗಳು ಇವೆ. ದಾಖಲೆಗಳು ಸರಿಯಿಲ್ಲದೆ ಇರುವ ಈ ಶಾಲೆಗಳನ್ನು ಮುಚ್ಚಿದರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಡಕಾಗಬಹುದು. ಇದಕ್ಕಾಗಿ ಅವರಿಗೆ ದಾಖಲೆಗಳನ್ನು ಸರಿಪಡಿಸಲು ಸೂಚಿಸಲಾಗಿದೆ. ಮುಂದಿನ ವರ್ಷದಲ್ಲಿ ಅಡ್ಮಿಷನ್ ವೇಳೆಯೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ದ. ಕ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮುಂದಿನ ವರ್ಷ ಹೊಸ 500 ರಿಂದ 600 ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಪ್ರಾರಂಭಿಸಲಾಗುವುದು. ಈ ಶಾಲೆಯಲ್ಲಿ 1500 ಮಕ್ಕಳು ಕಲಿಯಲಿದ್ದಾರೆ.

ಇಂಗ್ಲೀಷ್ ಮತ್ತು ಕನ್ನಡ ಮಾಧ್ಯಮವನ್ನು ಕಲಿಸಿ ಮಕ್ಕಳ ಶಿಕ್ಷಣದ ಗುಣಮಟ್ಟ ಹೆಚ್ಚಿಸಲಾಗುವುದು. ಬಡವರ ಮಕ್ಕಳು ಉತ್ತಮ ಗುಣಮಟ್ಟದ ಶಿಕ್ಷಣ ಪಡೆಯಬೇಕು ಎಂಬ ನೆಲೆಯಲ್ಲಿ ಇದನ್ನು ಆರಂಭಿಸಲಾಗುತ್ತಿದೆ. ಮುಂದಿನ ವರ್ಷ ಪ್ರತಿ ಎರಡು ಮೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಂದು ಕೆಪಿಎಸ್ ಶಾಲೆ ಆರಂಭಿಸಲಾಗುವುದು ಎಂದಿದ್ದಾರೆ.

9 ಮತ್ತು 11 ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಸರ್ಕಾರದ ನಿರ್ಧಾರ ಸಮರ್ಥಿಸಿಕೊಂಡರು, ಇದರಿಂದ 10 ಮತ್ತು 12 ನೇ ತರಗತಿಗಳಲ್ಲಿ ಸಾರ್ವಜನಿಕ ಪರೀಕ್ಷೆಗಳಿಗೆ ಸಿದ್ಧರಾಗಲು ಸಹಾಯ ಮಾಡುತ್ತದೆ ಎಂದು ಹೇಳಿದರು. ರಾಜ್ಯದಲ್ಲಿ 53,000 ಸರ್ಕಾರಿ ಶಾಲಾ ಶಿಕ್ಷಕರ ಹುದ್ದೆಗಳು ಖಾಲಿ ಉಳಿದಿದ್ದು, ಒಂದು ವರ್ಷದಲ್ಲಿ ಈ ನಿಟ್ಟಿನಲ್ಲಿ ಗಮನಾರ್ಹ ಸುಧಾರಣೆ ಕಂಡುಬರಲಿದೆ ಎಂದು ಹೇಳಿದರು.

ಈಗ ಇರುವ ವ್ಯವಸ್ಥೆಯಲ್ಲಿ ಶಾಲಾ ಮಕ್ಕಳಿಗೆ ಬ್ಯಾಗ್ ಹೊರೆಯಾಗುತ್ತಿದೆ. ಇದನ್ನು ಕಡಿತ ಮಾಡಲು ಪ್ರಯತ್ನಿಸಲಾಗುತ್ತಿದೆ. ಈಗ ಇರುವ ಭಾರಕ್ಕಿಂತ ಅರ್ಧಕ್ಕೂ ಕಡಿಮೆ ಭಾರ ಇರುವಂತೆ ವ್ಯವಸ್ಥೆ ಮಾಡಲಾಗುವುದು. ನನ್ನ ಬಯಕೆ ಆರನೇ ಒಂದು ಪಟ್ಟು ಭಾರ ಇರುವಂತೆ ಮಾಡಬೇಕೆಂಬುದು ಇತ್ತು. ಆದರೆ ಮೂರನೇ ಒಂದು ಪಟ್ಟು ಇರುವಂತೆ ಮಾಡಲಾಗುವುದು. ಬ್ಯಾಗ್ ಹೊರೆ ಕಡಿಮೆ ಮಾಡುವ ತೀರ್ಮಾನದಿಂದ ಶಿಕ್ಷಣದ ಗುಣಮಟ್ಟಕ್ಕೆ ತೊಂದರೆಯಾಗುವುದಿಲ್ಲ ಎಂದರು.

ಕೆಲವು ಪಿಯು ಕಾಲೇಜುಗಳು ದಿನಕ್ಕೆ 12 ಗಂಟೆಗಳ ಕಾಲ ತರಗತಿಗಳನ್ನು ನಡೆಸುವುದು ಸ್ವೀಕಾರಾರ್ಹವಲ್ಲ ಎಂದು ಪ್ರಶ್ನೆಯೊಂದಕ್ಕೆ ಸಚಿವರು ಪ್ರತಿಕ್ರಿಯಿಸಿದರು, ಇಂತಹ ಅಭ್ಯಾಸಗಳನ್ನು ನಿಲ್ಲಿಸುವಂತೆ ಕರೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com