ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ.
ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ.

ಬಲವಂತದ ಬಂದ್​ಗೆ ಅವಕಾಶ ಇಲ್ಲ, ನಾಳೆ ನಿಷೇಧಾಜ್ಞೆ ಜಾರಿ; ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ

ನೆರೆಯ ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಮಂಗಳವಾರ ಬೆಂಗಳೂರು ಬಂದ್​ಗೆ ಕರೆ ನೀಡಿವೆ. ಆದರೆ ಬಲವಂತದ ಬಂದ್​ಗೆ ಅವಕಾಶ ನೀಡುವುದಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಸೋಮವಾರ ಎಚ್ಚರಿಕೆ ನೀಡಿದ್ದಾರೆ.
Published on

ಬೆಂಗಳೂರು: ನೆರೆಯ ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಮಂಗಳವಾರ ಬೆಂಗಳೂರು ಬಂದ್​ಗೆ ಕರೆ ನೀಡಿವೆ. ಆದರೆ ಬಲವಂತದ ಬಂದ್​ಗೆ ಅವಕಾಶ ನೀಡುವುದಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಸೋಮವಾರ ಎಚ್ಚರಿಕೆ ನೀಡಿದ್ದಾರೆ.

ಇಂದು ಬಂದ್​ ವಿಚಾರವಾಗಿ ಕೈಗೊಳ್ಳಲಾಗಿರುವ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದ ಆಯುಕ್ತರು, ಬಲವಂತದ ಬಂದ್​ಗೆ ಅವಕಾಶ ಇಲ್ಲ. ಇಂದು ಮಧ್ಯರಾತ್ರಿಯಿಂದ ಮಂಗಳವಾರ ಮಧ್ಯರಾತ್ರಿ ವರೆಗೆ ಬೆಂಗಳೂರು ನಗರದಾದ್ಯಂತ ಸೆಕ್ಷನ್ 144ರ ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.

ನಗರದಲ್ಲಿ ಭದ್ರತೆಗಾಗಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗುತ್ತಿದೆ. 60 ಕೆಎಸ್​ಆರ್​ಪಿ, 40 ಸಿಎಆರ್ ತುಕಡಿ ನಿಯೋಜನೆ ಮಾಡುತ್ತೇವೆ. ಅಗತ್ಯವಿದ್ದಲ್ಲಿ ತಮಿಳುನಾಡು ಸಾರಿಗೆ ಬಸ್​ಗಳಿಗೆ ಭದ್ರತೆ ಒದಗಿಸುತ್ತೇವೆ. ಪೊಲೀಸರು, ಕೆಎಸ್​ಆರ್​ಪಿ ಸಿಬ್ಬಂದಿ, ಸ್ಥಳೀಯ ಅಧಿಕಾರಿಗಳು, ಹೊಯ್ಸಳ ಪೊಲೀಸರು ಎಲ್ಲರು ಇರಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಒತ್ತಾಯಪೂರ್ವಕವಾಗಿ ಬಂದ್ ಮಾಡಲು ಅವಕಾಶ ಇಲ್ಲ. ಸಾರ್ವಜನಿಕರು ತಾವಾಗಿಯೇ ಬಂದ್ ಮಾಡಿದರೆ ತೊಂದರೆ ಇಲ್ಲ. ಆದರೆ, ಬಲವಂತವಾಗಿ ಬಂದ್ ಮಾಡುವಂತೆ ಇಲ್ಲ ಎಂದು ಬಿ ದಯಾನಂದ ಅವರು ತಿಳಿಸಿದ್ದಾರೆ.

X

Advertisement

X
Kannada Prabha
www.kannadaprabha.com